ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ: ತಹಶೀಲ್ದಾರ್ ರಘುಮೂರ್ತಿ

ಜಿಲ್ಲಾ ಸುದ್ದಿ

ಗ್ರಾಮೀಣ ಭಾಗದಲ್ಲಿ ಜಾನಪದ ಜೀವಂತ ಎನ್ನುವುದಕ್ಕೆ ಇಲ್ಲಿನ ಮಹಿಳೆಯರು ಜಾನಪದ ಹಾಡು ಆಡುವುದೇ ಒಂದು ಸಾಕ್ಷಿಯಾಗಿದೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಗೌರಿ ದೇವಿ ಜಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಗ್ರಾಮದ ಕೆಲವು ಮಹಿಳೆಯರು ಜಾನಪದ ಗೀತೆಯನ್ನ ಆಡುತ್ತಿದ್ದನು ಆಲಿಸಿ ಸ್ವಲ್ಪ ಸಮಯ ಅವರು ಹಾಡು ಜಾನಪದಗೀತೆ ಕೇಳಿದರು.ನಂತರ ಮಾತನಾಡಿ.ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ. ಇಂದಿನ ಪಾಶ್ಚಾತ್ಯ ಶೈಲಿಯ ಸಂಗೀತದ ಮಧ್ಯೆ ಜಾನಪದ ಗೀತೆಗಳು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಬದ್ರವಾಗಿ ಊಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ. ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿ ಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು, ಸಂಬಂಧಗಳನ್ನು, ದೇವರುಗಳನ್ನು ಹಾಗೂ ಧಾರ್ಮಿಕ ಆಚರಣೆಗಳನ್ನು ನಮ್ಮ ಮುಂದೆ ತೆರೆದಿಡುತ್ತವೆ. ಈ ಜಾನಪದ ಗೀತೆಗಳನ್ನು ಸೃಷ್ಟಿಸಿದವರು ಯಾರೆಂದು ಹೇಳುವುದಕ್ಕೆ ಸಾಧ್ಯವಿಲ್ಲ. ಇವು ಹಳ್ಳಿಯು ಸಾಮಾನ್ಯ ಜನರ ನಡುವೆ ಹುಟ್ಟಿ ಬಾಯಿಂದ ಬಾಯಿಗೆ ಹರಿದು ಬಂದಿರುವ ಸಿರಿನುಡಿ ಎನ್ನಬಹುದು.ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಪುಟ್ಟಕ್ಕ ಮುಖಂಡರಾದ ಗೌರೀಶ್ ಗಿರೀಶ್ ಸಿಪಿಐನ ಮುಖಂಡ ದೊಡ್ಡ ಉಳ್ಳಾರ್ತಿ ಕರಿಯಣ್ಣ ಬೋರಯ್ಯ ಉಮೇಶ್ ಸೇರಿದಂತೆ ಗ್ರಾಮದ ಗೌರಮ್ಮ ತಾಯಮ್ಮ ನಿಂಗಮ್ಮ ಸಣ್ಣ ಗೌರಮ್ಮ ಇದ್ದರು.

 

 

 

Leave a Reply

Your email address will not be published. Required fields are marked *