ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಿಗೆ ಅಗತ್ಯ ಸಹಕಾರ ನೀಡಿ: ತಹಶೀಲ್ದಾರ್ ಸತ್ಯನಾರಾಯಣ ತಾಕೀತು
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಿಗೆ ಅಗತ್ಯ ಸಹಕಾರ ನೀಡುವಂತೆ ತಹಶೀಲ್ದಾರ್ ಸತ್ಯನಾರಾಯಣ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಆರೋಗ್ಯ ಇಲಾಖೆಯ ವಿವಿಧ ರಾಷ್ಟ್ರೀಯ ಕಾರ್ಯಕ್ರಮಗಳ ತಾಲ್ಲೂಕು ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತೀವ್ರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ, ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ, ರಾಷ್ಟ್ರೀಯ ಕುಷ್ಠರೋಗ ಪತ್ತೆ ಅಭಿಯಾನ, ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ, ಕೋವಿಡ್ ಮುನ್ನೆಚ್ಚರಿಕಾ ಲಸಿಕಾ ವರಸೆ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕೆ ತಾಲ್ಲೂಕಿನ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಜವಾಬ್ದಾರಿಯನ್ನು ತಮ್ಮದಾಗಿಸಿಕೊಂಡು ಕಾರ್ಯನಿರ್ವಹಿಸಲು ಆರೋಗ್ಯ ಇಲಾಖೆಯೊಂದಿಗೆ ಅಗತ್ಯ ಸಹಕಾರ ನೀಡುವಂತೆ ತಾಕೀತು ಮಾಡಿದರು