ಪೂರ್ಣಿಮಾ ಶ್ರೀನಿವಾಸ್ ಗೆ ಸಚಿವ ಸ್ಥಾನ ನೀಡಿ

ರಾಜಕೀಯ

  1. ಶಾಸಕಿ ಪೂರ್ಣಿಮಾಶ್ರೀನಿವಾಸ್ ರವರಿಗೆ ಸಚಿವ ಸಂಪುಟದಲ್ಲಿ
    ಸ್ಥಾನ ನೀಡುವಂತೆ ಗೊಲ್ಲ ಸಮುದಾಯದ ವತಿಯಿಂದ ಆಗ್ರಹ
    ಹಿರಿಯೂರು :
    ಕ್ಷೇತ್ರದ ಶಾಸಕಿ ಹಿಂದುಳಿದ ವರ್ಗಕ್ಕೆ ಸೇರಿದ ಯಾದವ ಸಮುದಾಯದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಸಚಿವ ಸಂಪುಟದಲ್ಲಿ ಸಚಿವಸ್ಥಾನ ನೀಡದೆ ಇರುವುದು ನಮ್ಮ ಹಿಂದುಳಿದವರ್ಗಕ್ಕೆ ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ ಎಂಬುದಾಗಿ ಬಿಜೆಪಿ ಪಕ್ಷದ ಮುಖಂಡ ಹಾಗು ಧರ್ಮಪುರ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಎಂ.ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ತಾಲ್ಲೂಕಿನ ಧರ್ಮಪುರ ಹೋಬಳಿಯ ಕೇಂದ್ರ ಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರುಗಳಿಂದ ಮಾನ್ಯ ಪೂರ್ಣಿಮಾಶ್ರೀನಿವಾಸ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಸಚಿವ ಸಂಪುಟದಲ್ಲಿ ಮಂತ್ರಿಸ್ಥಾನ ತಪ್ಪಿದ್ದನ್ನು ಖಂಡಿಸಿ, ಹಮ್ಮಿಕೊಳ್ಳಲಾಗಿದ್ದ ರಸ್ತೆ ತಡೆ ಹಾಗೂ ಬೃಹತ್ ಪ್ರತಿಭಟನೆಯ ನೇತೃತ್ವವನ್ನು ವಹಿಸಿ ಅವರು ಮಾತನಾಡಿದರು.
    ರಾಜ್ಯದ ಚಿತ್ರದುರ್ಗ, ರಾಯಚೂರು, ದಾವಣಗೆರೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸುಮಾರು 3 ಲಕ್ಷ ಕ್ಕಿಂತಲೂ ಹೆಚ್ಚು ಗೊಲ್ಲ ಮತದಾರರ ಬೆಂಬಲ ಪಡೆದಿರುವ ತಾಲ್ಲೂಕಿನ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬೇಕು ಎಂಬುದಾಗಿ ಅವರು ರಾಜ್ಯದ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ
    ರಾಜ್ಯದ ರಾಜಕಾರಣದಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಗೊಲ್ಲ ಸಮುದಾಯದ ನಿರ್ಣಾಯಕ ಅಭ್ಯರ್ಥಿಯಾಗಿದ್ದು, ಅವರಿಗೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ತಮ್ಮ ಸಚಿವಸಂಪುಟದಲ್ಲಿ ಸ್ಥಾನ ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗೊಲ್ಲ ಸಮುದಾಯದ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂಬುದಾಗಿ ಅವರು ಎಚ್ಚರಿಸಿದ್ದಾರೆ.

  2. ಈ ಪ್ರತಿಭಟನೆಯಲ್ಲಿ ಧರ್ಮಪುರ ಹೋಬಳಿಯ ಬಿಜೆಪಿ ಮುಖಂಡದರು, ಬಿಜೆಪಿ ಪಕ್ಷದ ಕಾರ್ಯಕರ್ತರು, ಹಾಗು ವಿವಿಧ ಘಟಕಗಳ ಪದಾಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು, ಭಾಗವಹಿಸಿದ್ದರು.

 

 

 

Leave a Reply

Your email address will not be published. Required fields are marked *