ಹಿರಿಯೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರು ಸರ್ಕಾರದ ಮುಂದೆ ಮನವಿಯನ್ನು ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ 100 ಕೋಟಿ ರೂಗಳ ಅನುದಾನವನ್ನು ಬಿಡುಗಡೆ ಮಾಡಿದೆ ಎಂಬುದಾಗಿ ವಿಧಾನಸಭೆಯಲ್ಲಿ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸಚಿವರಾದ ಭೈರತಿ ಬಸವರಾಜು, ಮಾಧುಸ್ವಾಮಿ ರವರಿಗೆ ಹಿರಿಯೂರು ತಾಲ್ಲೂಕಿನ ಜನತೆಯ ಪರವಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಅಭಿನಂದನೆಗಳನ್ನು ತಿಳಿಸಿದ್ದಾರೆ.





