ರಾಜ್ಯ ಸ್ಥಳೀಯ ಸಂಸ್ಥೆ ಪಂಚಾಯತ್ ರಾಜ್ ನೌಕರರಿಗೆ ಬಾರೀ ಸಿಹಿ ಸುದ್ದಿ

ರಾಜ್ಯ

BIG BREAKING :

ರಾಜ್ಯ ಸರ್ಕಾರವೂ ಸ್ಥಳೀಯ ಸಂಸ್ಥೆಗಳ‌ ನೌಕರರಿಗೆ ಕನಿಷ್ಠ ವೇತನ ಜಾರುಗೊಳಿಸುವ ನಿಟ್ಟಿನಲ್ಲಿ ಮುಂದಾಗಿದ್ದು, ಇದರಿಂದ ವೇತನದಲ್ಲಿ‌ ಬಾರೀ ಹೆಚ್ಚಳವಾಗಲಿದೆ.

 

 

 

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡುತ್ತಿದೆ. ಇದರಿಂದ ವೇತನ ಹೆಚ್ಚಳವಾಗಲಿದ್ದು, ಪರಿಷ್ಕರಣೆ ವೇತನವು ಎಲ್ಲರಿಗೂ ಸಿಗಲಿದೆ. ಸರ್ಕಾರ ಕರಡು ಅಧಿ ಸೂಚನೆಯನ್ನು ಹೊರಡಿಸಿದ್ದು,ಅದರಂತೆ
ಈ ಕರಡು ಅಧಿಸೂಚನೆಗೆ ಸಲಹೆ, ಆಕ್ಷೇಪಣೆಗಳು, ಕರಡು ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಮುಂದೆ ಮಂಡಿಸಲಾಗಿತ್ತು ಎಂದು ತಿಳಿಸಿದ್ದಾರೆ.


ಈ ಸಂಬಂಧ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಅಧಿಸೂಚನೆಯಂತೆ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ ಯಾವುದೇ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಕನಿಷ್ಠ ವೇತನ ಕೋಷ್ಟಕದಲ್ಲಿ ನಿರ್ದಿಷ್ಟ ಪಡಿಸಿರುವಂತ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರದ ಕರಡು ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ,, ಪ್ರಕಟಿಸಿದೆ ಎಂದಿದ್ದಾರೆ.
ಈ ಹಿಂದಿನ ಎಲ್ಲಾ ಅಧಿಸೂಚನೆಗಳನ್ನು ರದ್ದುಪಡಿಸಿ, ಕರ್ನಾಟಕ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಅನ್ವಯವಾಗುವಂತೆ ಕನಿಷ್ಠ ವೇತನವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *