ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿತ್ರದುರ್ಗ ನಗರದ ವಿದ್ಯಾ ನಗರದಲ್ಲಿ ನಡೆದಿದೆ.
ವಿದ್ಯಾ ನಗರದ ಜ್ಯೋತಿ ರೆಡ್ಡಿ ಎಂಬುವವರಿಗೆ ಸೇರಿದ ಮನೆಯಲ್ಲಿ ಮನೆ ಬೀಗ ಮುರಿದು ಕಳ್ಳರು ಕಳವು ಮಾಡಿದ್ದಾರೆ. 180 ಗ್ರಾಂ ತೂಕದ ಚಿನ್ನಾಭರಣ ಸೇರಿದಂತೆ ಅಂದಾಜು 7.20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದು ಕಳ್ಳರು ಪರಾರಿಯಾಗಿದ್ದು, ನಗರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.





