ಮನೆಗೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

ಕ್ರೈಂ

ಚಿತ್ರದುರ್ಗದ ಮಾಳಪ್ಪನಹಟ್ಟಿ ಗ್ರಾಮದ ಚಂದ್ರಪ್ಪ ಎಂಬುವವರ ಮನೆಯಲ್ಲಿ ಕಳ್ಳರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಒಳಗೆ ನುಗ್ಗಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಚಿನ್ನ ಬೆಳ್ಳಿಯ ಒಡವೆಗಳನ್ನು ಕದ್ದು ಪರಾರಿಯಾಗಿದ್ದಾರೆ.

 

 

 


ಕಳ್ಳರು ಅಂದಾಜು 300 ಗ್ರಾಂ ತೂಕದ ಬೆಳ್ಳಿಯ ಚಂಬು 300 ಗ್ರಾಂ ತೂಕದ ಬೆಳ್ಳಿ ಕಳಶ 60 ಗ್ರಾಂ ತೂಕದ ಬೆಳ್ಳಿ ಬಟ್ಟಲು ಹಾಗೂ 2 ಗ್ರಾಂ ತೂಕದ ಬಂಗಾರದ ಬೆಂಡೋಲೆ ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣವನ್ನ ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗದ ಗ್ರಾಮಾಂತರ ಠಾಣಾ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣವನ್ನು ದಾಖಲಿಸಿ ಕೊಂಡಿದ್ದು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *