ಅಕ್ಟೋಬರ್ 7 ರಂದು ಇಡಿ ವಿಚಾರಣೆಗೆ ಹಾಜರಾಗುವುದಿಲ್ಲ: ಕೆಪಿಸಿಸಿ‌ ಅಧ್ಯಕ್ಷ ಡಿಕೆ‌ ಶಿವಕುಮಾರ್

ರಾಜ್ಯ

ಅಕ್ಟೋಬರ್ 7 ರಂದು ಇಡಿ ವಿಚಾರಣೆಗೆ ಹಾಜರಾಗುವುದಿಲ್ಲ: ಕೆಪಿಸಿಸಿ‌ ಅಧ್ಯಕ್ಷ ಡಿಕೆ‌ ಶಿವಕುಮಾರ್

 

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ (ED) ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

 

 

 

ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವುದಿಲ್ಲ, ಬೇರೊಂದು ದಿನ ಹಾಜರಾಗಲು ಅವಕಾಶ ಕೋರಿ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಕಾರಣಾಂತರಗಳಿಂದ ಅಕ್ಟೋಬರ್ 7 ರಂದು ವಿಚಾರಣೆಗೆ ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವುದಿಲ್ಲ’ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೊದಲು ಮಾಹಿತಿ ನೀಡಿದ್ದ ಡಿ.ಕೆ. ಶಿವಕುಮಾರ್. ನನಗೆ ಮತ್ತು ನನ್ನ ತಮ್ಮ ಡಿ.ಕೆ. ಸುರೇಶ್ ಗೆ ಇಡಿಯವರು ಮತ್ತೆ ನೋಟಿಸ್ ನೀಡಿದ್ದಾರೆ. ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ಹೇಳಿದ್ದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Leave a Reply

Your email address will not be published. Required fields are marked *