Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಅಧಿಕಾರಿಗಳು ಆರೋಗ್ಯವಾಗಿದ್ದರೆ, ಆಡಳಿತ ವ್ಯವಸ್ಥೆಯೂ ಆರೋಗ್ಯವಾಗಿರಲಿದೆ
ಜಿಲ್ಲಾ ಸುದ್ದಿ

ಅಧಿಕಾರಿಗಳು ಆರೋಗ್ಯವಾಗಿದ್ದರೆ, ಆಡಳಿತ ವ್ಯವಸ್ಥೆಯೂ ಆರೋಗ್ಯವಾಗಿರಲಿದೆ

D KumaraswamyBy D KumaraswamyDecember 2, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಅಧಿಕಾರಿಗಳು ಆರೋಗ್ಯವಾಗಿದ್ದರೆ, ಆಡಳಿತ ವ್ಯವಸ್ಥೆಯೂ ಆರೋಗ್ಯವಾಗಿರಲಿದೆ

 

 

ಸರ್ಕಾರಿ ಅಧಿಕಾರಿಗಳು ಆರೋಗ್ಯಯುತ ವಾಗಿದ್ದರೆ, ಆಡಳಿತ ವ್ಯವಸ್ಥೆಯೂ ಆರೋಗ್ಯವಾಗಿರಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಿವಿಎಸ್ ಆಸ್ಪತ್ರೆ, ಇಂಡಿಯಾನ ಎಸ್‍ಜೆಎಂ ಹಾರ್ಟ್ ಸೆಂಟರ್, ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮತ್ತು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗ ಇವರ ಸಹಯೋಗದಲ್ಲಿ ಜಿಲ್ಲೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಎಸ್‍ಡಿಎಎಗಳಿಗೆ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಎಸ್‍ಡಿಎಎ ಅವರು ಅಭಿವೃದ್ಧಿ ಇಲಾಖೆಯ ರಾಯಬಾರಿಗಳಾಗಿದ್ದು, ನಿಮ್ಮಿಂದ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಆಗಬೇಕಿದೆ. ನಿಮ್ಮಗಳ ಆರೋಗ್ಯವೇ ಜಿಲ್ಲೆಯ ನಾಗರಿಕರ ಆರೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ರೋಗ ಬರುವುದು ಮನುಷ್ಯರಿಗೆ. “ರೋಗ” ಅವಮಾನ ಎಂದು ತಿಳಿಯದೇ, ತಪಾಸಣೆ ಮಾಡಿಸುವುದರಿಂದ ರೋಗ ಇನ್ನೊಬ್ಬರಿಗೆ ಗೊತ್ತಾಗುತ್ತದೆ ಎಂದು ಹಿಂಜರಿಕೆ ಮನೋಭಾವನೆ ಬಿಟ್ಟು, ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದು ಹೇಳಿದ ಅವರು, ಉತ್ತಮ ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಲು ಸಾಧ್ಯವಾಗಲಿದೆ ಎಂದರು.
ಕಳೆದ ಎಂಟು ತಿಂಗಳ ಹಿಂದೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಇದರಲ್ಲಿ ಶೇ.45ಕ್ಕೂ ಹೆಚ್ಚು ಮಂದಿಗೆ ಹೃದಯ ರೋಗ ಸಮಸ್ಯೆ ಇರುವುದು ಗೊತ್ತಾಯಿತು. ಸರ್ಕಾರಿ ಅಧಿಕಾರಿಗಳು, ನೌಕರರು ಸದಾ ಒತ್ತಡದಲ್ಲಿ ಕಾರ್ಯನಿರ್ವಹಣೆ ಹಾಗೂ ಸಮಯದ ಅಭಾವದಿಂದ ಆರೋಗ್ಯದ ಕಡೆಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು, ನೌಕರರು ನಿರಂತರವಾಗಿ ಆರೋಗ್ಯ ತಪಾಸಣೆಗೆ ಒಳಗಾಗಿ, ವೈದ್ಯರ ಸಲಹೆ, ಸೂಚನೆ ಪಾಲಿಸಬೇಕು ಎಂದು ಕಿವಿಮಾತು ಹೇಳಿದರು.
ಇಂಡಿಯಾನ ಎಸ್‍ಜೆಎಂ ಹಾರ್ಟ್ ಸೆಂಟರ್‍ನ ಹೃದಯ ತಜ್ಞ ಡಾ.ಜಿ.ಮಂಜುನಾಥ್ ಮಾತನಾಡಿ, ಹೃದಯಾಘಾತ ಆಗದೇ ಇರುವುದಕ್ಕಿಂತ ಮುಂಚಿತವಾಗಿ ಚಿಕಿತ್ಸೆ ಪಡೆಯುವುದು ಬಹುಮುಖ್ಯ. ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಕಂಡುಬರುತ್ತಿವೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಕಡ್ಡಾಯವಾಗಿ ಇಸಿಜಿ, ಎಕೋ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ತಪಾಸಣೆ ಶಿಬಿರದಲ್ಲಿ ತಜ್ಞ ವೈದ್ಯರು ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಎಸ್‍ಡಿಎಎಗಳಿಗೆ ಬಿ.ಪಿ, ಶುಗರ್, ಇಸಿಜಿ ಹಾಗೂ ಇಕೋಕಾರ್ಡಿಯೋಗ್ರಾಂ, ಕಣ್ಣು, ಕಿವಿ, ಮೂಗು, ದಂತ ತಪಾಸಣೆ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಕೋವಿಡ್-19ರ ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಗಳಡಿ ಗ್ರಾಮ ಪಂಚಾಯಿತಿಯ ನಿಯೋಜಿತ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾಗ ನಿಧನ ಹೊಂದಿದ ಕುಟುಂಬವರಿಗೆ ತಲಾ ರೂ.20 ಲಕ್ಷದಂತೆ ಒಟ್ಟು ಮೂರು ಕುಟುಂಬಗಳಿಗೆ ಪರಿಹಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್, ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್, ರೋಗಶಾಸ್ತ್ರಜ್ಞ ಡಾ.ರುದ್ರೇಶ್, ಇಂಡಿಯಾನ ಎಸ್‍ಜೆಎಂ ಹಾರ್ಟ್ ಸೆಂಟರ್‍ನ ಶಿಬಿರ ಸಂಯೋಜಕ ಎಸ್.ಮಂಜಣ್ಣ ಸೇರಿದಂತೆ ಮತ್ತಿತರರು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleತೆಪ್ಪೋತ್ಸವ ನೋಡಲು ಹರಿದು ಬಂದಿತು ಲಕ್ಷಾಂತರ ಜನ
Next Article ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.