ಶಾಲಾ ಮಕ್ಕಳ ಸ್ಕೂಲ್ ಬ್ಯಾಗ್ ತೂಕ‌ ಇಳಿಕೆಗೆ ಹೈ ಕೋರ್ಟ್ ನಲ್ಲಿ ಐಪಿಎಲ್

ರಾಜ್ಯ

ಶಾಲಾ ಮಕ್ಕಳ ಸ್ಕೂಲ್ ಬ್ಯಾಗ್ ತೂಕ‌ ಇಳಿಕೆಗೆ ಹೈ ಕೋರ್ಟ್ ನಲ್ಲಿ ಐಪಿಎಲ್

ಬೆಂಗಳೂರು: ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕವನ್ನು ಇಳಿಕೆ ಮಾಡಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

 

 

 

ತುಮಕೂರಿನ ವಕೀಲ ಎಲ್. ರಮೇಶ್ ನಾಯಕ್ ಅವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು, ವಿಚಾರಣೆಗೆ ಬರಬೇಕಿದೆ.
ಶಾಲೆ ಆಡಳಿತಕ್ಕೆ ಸಂಬಂಧಿಸಿದಂತೆ ನಿಯಮ, ಕಾನೂನುಗಳ ಬಗ್ಗೆ ಸರ್ಕಾರ ಆಗಾಗ ಅಧಿಸೂಚನೆ, ಸುತ್ತೋಲೆ ಹೊರಡಿಸುತ್ತದೆ. ಆದರೆ, ಶಾಲಾ ಬ್ಯಾಗ್ ತೂಕಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ನಿಯಮವಿಲ್ಲ ಎಂದು ಹೇಳಲಾಗಿದೆ.

2006ರಲ್ಲಿ ರಾಜ್ಯಸಭೆಯಲ್ಲಿ ಶಾಲಾ ಮಕ್ಕಳ ಬ್ಯಾಗ್ ತೂಕ ಕಡಿಮೆ ಮಾಡುವ ಕುರಿತು ವಿಧೇಯಕ ಮಂಡಿಸಲಾಗಿತ್ತು. ಅದನ್ನು ಅಲ್ಲಿಗೆ ಕೈ ಬಿಡಲಾಗಿದೆ. ಕೇಂದ್ರ ಸರ್ಕಾರ ಶಾಲಾ ಬ್ಯಾಗ್ ನೀತಿ 2020 ರಲ್ಲಿ ಮಕ್ಕಳ ಬ್ಯಾಗ್ ತೂಕದ ಮಿತಿ ಇಷ್ಟೇ ಇರಬೇಕೆಂದು ನಿಯಮ ಜಾರಿ ಮಾಡಿದ್ದರೂ ಪಾಲನೆ ಆಗುತ್ತಿಲ್ಲ ಎನ್ನಲಾಗಿದೆ.

ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳು ತೂಕದ ಬ್ಯಾಗ್ ಗಳನ್ನು ಹೊತ್ತು ಪ್ರತಿದಿನವೂ ಶಾಲೆಗೆ ಹೋಗುವಂತಾಗಿದೆ. ಇದರಿಂದ ಅವರ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *