Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ರಾಷ್ಟ್ರರಾಜಕಾರಣದಲ್ಲಿ ಬದಲಾವಣೆ ಸೂಚನೆ
ದೇಶ

ರಾಷ್ಟ್ರರಾಜಕಾರಣದಲ್ಲಿ ಬದಲಾವಣೆ ಸೂಚನೆ

D KumaraswamyBy D KumaraswamyOctober 19, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಕನ್ನಡಿಗರ ಹಿರಿಮೆ ಹೆಚ್ಚಿಸಿದ ಖರ್ಗೆ ಗೆಲುವು

ರಾಜ್ಯದ ಅಭಿವೃದ್ಧಿಗೆ ಸಹಕಾರಿ

ರಾಷ್ಟ್ರರಾಜಕಾರಣದಲ್ಲಿ ಬದಲಾವಣೆ ಸೂಚನೆ

ಮಾಜಿ ಸಚಿವ ಎಚ್.ಆಂಜನೇಯ ಅಭಿಪ್ರಾಯ

 

 

ಹಿರಿಯ ನಾಯಕ, ಮುತ್ಸದ್ಧಿ, ಅನುಭವಿ ಸಂಸದೀಯ ಪಟು, ಅಜಾತಶತ್ರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಭಾರಿ ಬಹುಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಕನ್ನಡಿಗರ ಹಿರಿಮೆ ಹೆಚ್ಚಿಸಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಆಂಜನೇಯ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಷ್ಟ್ರನಾಯಕ, ಚಿತ್ರದುರ್ಗ ಜಿಲ್ಲೆಯವರೇ ಆದ ಎಸ್.ನಿಜಲಿಂಗಪ್ಪ ಬಳಿಕ ಜಗತ್ತಿನಲ್ಲಿ ದೊಡ್ಡ ಇತಿಹಾಸ, ಸ್ವಾತಂತ್ರೃ ಹೋರಾಟದ ಹಿನ್ನೆಲೆ ಹೊಂದಿರುವ ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಕರ್ನಾಟಕ ರಾಜ್ಯಕ್ಕೆ ಲಭಿಸಿರುವುದು ಕನ್ನಡಿಗರಿಗೆ ಹೆಮ್ಮೆ ವಿಷಯ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

 

ಶಾಸಕರು, ಸಂಸದರು ಹಾಗೂ ರಾಜ್ಯ, ಕೇಂದ್ರ ಸರ್ಕಾರದಲ್ಲಿ ಮಂತ್ರಿಗಳಾಗಿ ದಶಕಗಳ ಕಾಲ ಆಡಳಿತ ನಡೆಸಿದ ಹಾಗೂ  ವಿಧಾನಸಭೆ, ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿ, ವಿರೋಧ ಪಕ್ಷಗಳ ನಾಯಕರಿಂದಲೂ ಮೆಚ್ಚುಗೆ ಗಳಿಸಿರುವ ಮಲ್ಲಿಕಾರ್ಜುನ ಖರ್ಗೆ, ಕಾರ್ಮಿಕ ಇಲಾಖೆ ಕೇಂದ್ರ ಸಚಿವರಾಗಿದ್ದ ವೇಳೆ ಕಾರ್ಮಿಕರ ಹಿತಕ್ಕಾಗಿ ಮಾಡಿದ ಯೋಜನೆಗಳು ಅದ್ವಿತೀಯವಾಗಿವೆ.
ಜೊತೆಗೆ ಹೈದರಬಾದ್ ಕರ್ನಾಟಕಕ್ಕೆ 371 ಜೆ ವಿಶೇಷ ಸೌಲಭ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ಸುರಿಮಳೆಯನ್ನೇ ಕೇಂದ್ರ ಸುರಿಸುವಂತೆ ಮಾಡಿದವರಲ್ಲಿ ಖರ್ಗೆ ಪ್ರಮುಖರಾಗಿದ್ದಾರೆ.
ಪ್ರಸ್ತುತ ತೀವ್ರ ಕುತೂಹಲ ಕೆರಳಿಸಿದ್ದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ್ ಖರ್ಗೆ ಮತ್ತು ಶಶಿ ತರೂರು ಇಬ್ಬರು, ಪ್ರಜಾಪ್ರಭುತ್ವದ ತಳಹದಿಯಲ್ಲಿ ಚುನಾವಣೆ ಎದುರಿಸಿ, ಇದರಲ್ಲಿ ಕರ್ನಾಟಕ ರಾಜ್ಯದ ಖರ್ಗೆ ಬಹುಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ರಾಜ್ಯ, ರಾಷ್ಟ್ರ ರಾಜಕಾಣದಲ್ಲಿ ಬದಲಾವಣೆ ಮುನ್ಸೂಚನೆಗೆ ಮುನ್ನುಡಿ ಬರೆದಿದೆ.
ಉತ್ತರಭಾರತದವರೇ ಹೆಚ್ಚಾಗಿ ರಾಷ್ಟ್ರರಾಜಕಾರಣದಲ್ಲಿ ಮಿಂಚುವ ಸಂದರ್ಭ, ಎಐಸಿಸಿ ಅಧ್ಯಕ್ಷರಾಗಿ ಎಸ್.ನಿಜಲಿಂಗಪ್ಪ, ಪ್ರಧಾನಮಂತ್ರಿಯಾಗಿ ಎಚ್.ಡಿ.ದೇವೇಗೌಡರ ಬಳಿಕ ಅತ್ಯುನ್ನತ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಖರ್ಗೆ ಅಲಂಕರಿಸುತ್ತಿರುವ ಸಂಭ್ರಮಕ್ಕೆ ಕಾರಣವಾಗಿದೆ.
ಮೊದಲು ದೇಶ, ನಂತರ ಪಕ್ಷ, ಬಳಿಕ ರಾಜಕಾರಣ, ಇದೆಲ್ಲದರ ನಂತರ ವೈಯಕ್ತಿಕ ಹಿತಾಸಕ್ತಿ ಎಂಬ ಸಿದ್ಧಾಂತದಲ್ಲಿ 50 ವರ್ಷ ಸುಧೀರ್ಘ ರಾಜಕಾರಣ ಮಾಡಿದ ಖರ್ಗೆ ಅವರಿಂದ ರಾಜ್ಯಕ್ಕೆ ಈಗಾಗಲೇ ಅಪಾರ ಕೊಡುಗೆ ಲಭಿಸಿದ್ದು, ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಈ ಸಂದರ್ಭ ಖರ್ಗೆ ಅವರಿಂದ ಇನ್ನೂ ಹೆಚ್ಚು ಯೋಜನೆಗಳು ರಾಜ್ಯಕ್ಕೆ ಲಭಿಸುವ ಸಾಧ್ಯತೆ ಹೆಚ್ಚು ಇದೆ.
ನಮ್ಮಂತಹ ಅನೇಕರ ಬೆಳವಣಿಗೆಯಲ್ಲಿ ಆಸ್ಕರ್ ಫರ್ನಾಂಡೀಸ್, ಮಲ್ಲಿಕಾರ್ಜುನ ಖರ್ಗೆ ಅವರ ಸಹಕಾರ ಅಪಾರವಾಗಿದ್ದು, ಪ್ರಸ್ತುತ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಪಕ್ಷ ನಿಷ್ಠ ನಮ್ಮಂತಹ ಅನೇಕರಿಗೆ ಸಂತಸ ತಂದಿದೆ.
ಮುಂದಿನ ದಿನಗಳಲ್ಲಿ ಇವರ ನಾಯಕತ್ವದಲ್ಲಿ ಪಕ್ಷ ಬಲಿಷ್ಠಗೊಳ್ಳಲಿದ್ದು, ಸರ್ವ ಸಮುದಾಯದವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಹಾಗೂ ಸಂಸತ್‌ನಲ್ಲಿ ಜನವಿರೋಧಿ ನೀತಿಗಳಿಗೆ ಕಡಿವಾಣ ಹಾಕಲು ಸಹಕಾರಿ ಆಗಲಿದೆ ಎಂದು ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Share. Facebook Twitter Pinterest LinkedIn Tumblr WhatsApp Email
Previous Article20 ಎಕರೆ ಜಮೀನು ಮೀಸಲಿಡಲು ಜಿಲ್ಲಾಧಿಕಾರಿಗೆ ಪ್ರಸ್ತಾವನೆ
Next Article ಕೋಟೆ ನಾಡಿನಲ್ಲಿ ಶಿಕ್ಷಕರ ಅಕ್ರಮ ನೇಮಕ: ಐದು ಜನರ ಬಂಧನ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.