BIG BREAKING:
ಕರ್ನಾಟಕದ ಅಭಿಮಾನಿ ದೇವರುಗಳಿಗೆ ಸಂಭ್ರಮದ ಸುದ್ದಿ
ರಾಜ್ಯೋತ್ಸವದ ದಿನದಂದು ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ : ಸಿಎಂ ಬಸವರಾಜ ಬೊಮ್ಮಾಯಿ
ನಟ ಗಾಯಕ ಯೂತ್ ಐಕಾನ್ ನಗುವಿನ ಸರದಾರ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯೋತ್ಸವದ ದಿನದಂದು ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಲಾಲ್ ಬಾಗ್ ನಲ್ಲಿ ಫಲ ಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳ ಒತ್ತಾಸೆಯಂತೆ ರಾಜ್ಯದ ಅತ್ಯುನ್ನತ ಪ್ರಶಸ್ತಿಯನ್ನು ಈಗಲೇ ಸರ್ಕಾರ ಘೋಷಣೆ ಮಾಡಿದೆ.ನವೆಂಬರ್ 1 ರಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸುತ್ತೇವೆ ಎಂದರು.
ಪ್ರಶಸ್ರಿಗಾಗಿ ಕುಟುಂಬದ ಸದಸ್ಯರು ಹಾಗೂ ಸರ್ಕಾರ ಸಮಿತಿಯನ್ನು ರಚಿಸಲಾಗುವುದು, ಕಾರ್ಯಕ್ರಮ ಯಾವ ರೀತಿ ಇರಬೇಕು ಎಂಬುದಾಗಿ ಅವರ ಸಹೋದರರ ಜೊತೆ ಸೇರಿ ಚರ್ಚಿಸಲಾಗುತ್ತದೆ. ಅವರ ಸಲಹೆ ಪಡೆದು ತೀರ್ಮಾನ ಮಾಡಲಾಗುತ್ತದೆ. ಇದಕ್ಕೂ ಮುನ್ನ ಈ ಬಾರಿ ಲಾಲ್ ಬಾಗ್ ನಲ್ಲಿ ವಿಶೇಷವಾಗಿ ನಿರ್ಮಿಸಿರುವ ವರನಟ ಡಾ. ರಾಜ್ ಕುಮಾರ್ ಹಾಗೂ ಡಾ. ಪುನೀತ್ ರಾಜ್ ಕುಮಾರ್ ಅವರುಗಳ ಪುಷ್ಪಲಂಕೃತ ಪ್ರತಿಮೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಮುನಿರತ್ನ, ಕರುನಾಡಚಕ್ರವರ್ತಿ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಆಶ್ವಿನಿ ಪುನೀತ್ ರಾಜ್ ಕುಮಾರ್ ಇನ್ನಿತರರು ಸೇರಿ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು.