ಅಕ್ರಮ‌ ಪರೀಕ್ಷೆ ಆರೋಪ : ಪ್ರಾಂಶುಪಾಲ ಹಾಗೂ ಡಿಡಿ ಪಿಯು ಅಮಾನತ್ತು ಮಾಡಿ

ಜಿಲ್ಲಾ ಸುದ್ದಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಆಕ್ರಮ ನಡೆದಿದೆ ಎಂದು ಆರೋಪಿಸಿ ಇಂದು ಕರುನಾಡ ವಿಜಯಸೇನೆ‌ ಕಾರ್ಯಕರ್ತರು ಪ್ರತಿಭಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವರ ಭಾವಚಿತ್ರ ಸುಡುವ ಮೂಲಕ ಪ್ರತಿಭಟನೆ ನಡೆಸಿದರು.

 

 

 


ಶಿಕ್ಷಣ ಸಚಿವರ ಭಾವಚಿತ್ರ ಸುಡುವ ವಿಚಾರಕ್ಕೆ ಕಾರ್ಯಕರ್ತರು ಮತ್ತು ಪೊಲಿಸರ ನಡುವೆ ಮಾತಿನ ಚಕಮಕಿ‌ ನಡೆಯಿತು. ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪದವಿವೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶರು ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಕೂಡಲೇ ಅಮಾನತ್ತು ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿಯನ್ನು‌ ನೀಡಿದರು.

Leave a Reply

Your email address will not be published. Required fields are marked *