ಕುಷ್ಠರೋಗ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಿ : ಡಿಹೆಚ್‍ಓ ಡಾ.ಆರ್.ರಂಗನಾಥ್

ಜಿಲ್ಲಾ ಸುದ್ದಿ

ಕುಷ್ಠರೋಗ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಿ : ಡಿಹೆಚ್‍ಓ ಡಾ.ಆರ್.ರಂಗನಾಥ್

 

 

 

ಕುಷ್ಠರೋಗ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ತಿಳಿಸಿದರು.
ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳ ಕಚೇರಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕುಷ್ಠರೋಗ ಪ್ರಕರಣ ಪತ್ತೆ ಆಂದೋಲನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕುಷ್ಠರೋಗ ವಿರೋಧಿಸೋಣ, ಕುಷ್ಠರೋಗಿಯನ್ನು ಪ್ರೀತಿಸೋಣ. ಕುಷ್ಠರೋಗ ಸಾಮಾಜಿಕ ಕಳಂಕ ಹೊತ್ತಿರುವ ರೋಗ. ಪ್ರಾರಂಭಿಕ ಹಂತದಲ್ಲೇ ರೋಗ ಪತ್ತೆಹಚ್ಚಿ ಬಹುವಿಧ ಚಿಕಿತ್ಸೆಗೆ ಒಳಪಡಿಸಿದಲ್ಲಿ ಅಂಗವೈಕಲ್ಯ ತಪ್ಪಿಸಬಹುದು ಎಂದರು.


ರಾಷ್ಟ್ರೀಯ ಕುಷ್ಠರೋಗ ಪ್ರಕರಣ ಪತ್ತೆ ಆಂದೋಲನ ಜಿಲ್ಲೆಯಾದ್ಯಂತ ಆಗಸ್ಟ್ 16 ರಿಂದ  ಸೆಪ್ಟಂಬರ್ 3 ರವರೆಗೂ ಎಲ್ಲ ಗ್ರಾಮ, ನಗರ ಪ್ರದೇಶಗಳಲ್ಲಿ ಮನೆ ಮನೆ ಭೇಟಿ ನೀಡಿ ಅನುಮಾನಾಸ್ಪದ ಕುಷ್ಠರೋಗ ಪ್ರಕರಣಗಳ ಪತ್ತೆ ಮಾಡಿ ಚಿಕಿತ್ಸೆಗೆ ಒಳಪಡಿಸಿ ಅರಿವು ಮೂಡಿಸಿವ ಕಾರ್ಯಕ್ರಮವಾಗಿದೆ. ಎಲ್ಲಾ ಆಶಾ ಕಾರ್ಯಕರ್ತೆಯರು, ಆರೋಗ್ಯ ನಿರೀಕ್ಷಣಾ ಮತ್ತು ಆರೋಗ್ಯ ಸುರಕ್ಷತಾ ಅಧಿಕಾರಿಗಳು ಮನೆ ಮನೆಗೆ ಹೋಗಿ ಸಮೀಕ್ಷಾ ಕಾರ್ಯ ನಡೆಸಲಿದ್ದಾರೆ ಎಂದರು.
ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ರೂಪ ಮಾತನಾಡಿ ಜಿಲ್ಲೆಯಲ್ಲಿ ಜುಲೈ 2022 ರ ಮಾಹೆ ಅಂತ್ಯಕ್ಕೆ ಒಟ್ಟು 57 ಕುಷ್ಠರೋಗ ಪ್ರಕರಣಗಳು ಪತ್ತೆಯಾಗಿವೆ. ಕುಷ್ಠರೋಗಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ರಿಯಾಯೋಜನೆ ರೂಪಿಸಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಜಾಥಾ ಕಾರ್ಯಕ್ರಮವು ಜಿಲ್ಲಾ ಆಸ್ಪತ್ರೆಯಿಂದ ಹೊರಟು ಮದಕರಿ ವೃತ್ತ, ಅಂಬೇಡ್ಕರ್ ವೃತ್ತ, ಪ್ರವಾಸಿ ಮಂದಿರದ ಮೂಲಕ ಡಿ.ಸಿ.ಕಛೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕುಷ್ಠರೋಗ ನಿವಾರಿಸಿ ಎಂಬ ಘೋಷಣೆ ಕೂಗಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅನುμÁ್ಠನಾಧಿಕಾರಿಗಳಾದ ಡಾ.ಕಾಶಿ, ಡಾ.ಸುಧಾ, ಚರ್ಮರೋಗ ತಜ್ಞ ಡಾ.ವಿಜಯಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಬಿ.ವಿ.ಗಿರೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃμÁ್ಣನಾಯ್ಕ್, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎನ್.ಎಸ್.ಮಂಜುನಾಥ, ಬಿ.ಮೂಗಪ್ಪ, ಜಾನಕಿ, ಹನುಮಂತಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ, ಗಂಗಾಧರ್, ರಂಗನಾಥ ರೆಡ್ಡಿ, ಚಂದ್ರಪ್ಪ, ಕಿರಣ್, ಮಂಜುನಾಥ, ಮಲ್ಲಿಕಾರ್ಜುನ್, ಮಳಲಿ ಶ್ರೀನಿವಾಸ, ವೆಂಕಟೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *