ಕಳ್ಳಂಬೆಳ್ಳ ಬಳಿ ಭೀಕರ ರಸ್ತೆ ಅಪಘಾತ 9 ಜನ ಸ್ಥಳದಲ್ಲಿ ದುರ್ಮರಣ

ರಾಜ್ಯ

BIGG BREAKING NEWS

ಭೀಕರ ರಸ್ತೆ ಅಪಘಾತ 9 ಜನ ಸ್ಥಳದಲ್ಲಿ ಸಾವು

 

 

 

ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತುಮಕೂರಿನಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ.

ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 9 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *