ಚಿತ್ರದುರ್ಗ ತಾಲೂಕಿನ ಸೀಬಾರದ ರಾಷ್ಟ್ರೀಯ ಹೆದ್ದಾರಿ 48 ರ ಬಳಿ ಲಾರಿ ಕಾರು ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಮೃತರ ಗುರುತು ಪತ್ತೆಯಾಗಿಲ್ಲ, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ





