ಬಿಸಿಯೂಟ ಸೇವಿಸಿ 40 ಮಕ್ಕಳು ಅಸ್ವಸ್ಥ

ಆರೋಗ್ಯ

ಬಿಸಿಯೂಟ ಸೇವಿಸಿ 40 ಮಕ್ಕಳು ತೀವ್ರವಾಗಿ ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗದಲ್ಲಿ‌ನಡೆದಿದೆ.
ಭರಮಸಾಗರದ ಇಸಾಮುದ್ರ ಗೊಲ್ಲರಹಟ್ಟಿ ಸರ್ಕಾರಿ ಶಾಲೆಯ‌ ಮಕ್ಕಳು ಇಂದು ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದಾರೆ.

 

 

 

ಅವರನ್ನು ಭರಮಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ಕು ಜನರು ಗಂಭೀರ ಅಸ್ವಸ್ಥರಾಗಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿ ಕೊಡಲಾಗಿದೆ. ಆಸ್ಪತ್ರೆಗೆ ತಹಶೀಲ್ದಾರ್ ಸತ್ಯ ನಾರಾಯಣ್ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *