Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕುವೆಂಪು ರಚಿತ ನಾಡಗೀತೆಗೆ ದಾಟಿ ಹಾಗೂ ಕಾಲ‌ನಿಗಧಿ: ಸಿಎಂ ಅನುಮೋದನೆ
ರಾಜ್ಯ

ಕುವೆಂಪು ರಚಿತ ನಾಡಗೀತೆಗೆ ದಾಟಿ ಹಾಗೂ ಕಾಲ‌ನಿಗಧಿ: ಸಿಎಂ ಅನುಮೋದನೆ

D KumaraswamyBy D KumaraswamySeptember 23, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕುವೆಂಪು ರಚಿತ ನಾಡಗೀತೆಗೆ ದಾಟಿ ಹಾಗೂ
ಕಾಲ‌ನಿಗಧಿ: ಸಿಎಂ ಅನುಮೋದನೆ

ಬೆಂಗಳೂರು : ನಾಡಗೀತೆಗೆ ನಿರ್ದಿಷ್ಟ ಸಮಯ ಹಾಗೂ ದಾಟಿ ನಿಗದಿ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ಇದ್ದ ಗೊಂದಲಕ್ಕೆ ರಾಜ್ಯ ಸರಕಾರ ಇದೀಗ ಪೂರ್ಣ ವಿರಾಮ ಹಾಡಿದೆ.ಖ್ಯಾತ ರಾಗ ಸಂಯೋಜಕ ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ ಕುವೆಂಪು ವಿರಚಿತ ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ ಹಾಡುವುದಕ್ಕೆ ಈಗ ರಾಜ್ಯ ಸರಕಾರ ಸಮ್ಮತಿ ಸೂಚಿಸಿದೆ.

ಯಾವುದೇ ಆಲಾಪ ಹಾಗೂ ಪುನರಾವರ್ತನೆ ಇಲ್ಲದಂತೆ ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಲ್ಲಿ ನಾಡಗೀತೆಯನ್ನು ಹಾಡಲು ಸಾಧ್ಯ ಎಂದು ತಜ್ಞರು ನೀಡಿದ ವರದಿ ಆಧರಿಸಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಹೀಗಾಗಿ ಇನ್ನು ಮುಂದೆ ರಾಷ್ಟ್ರಕವಿ ಕುವೆಂಪು ರಚಿಸಿರುವ ‘ಜಯಭಾರತ ಜನನಿಯ ತನುಜಾತೆ’ ಕವನವು ನಾಡಗೀತೆಯಾಗಿ ಅಂಗೀಕೃತಗೊಂಡ ರೂಪದಲ್ಲೇ ಹಿಂದಿನ ಒಂದಕ್ಷರವನ್ನೂ ಬಿಡದಂತೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದ ದಾಟಿಯಲ್ಲೇ ಹಾಡಲಾಗುತ್ತದೆ ಎಂದು ಕನ್ನಡ – ಇಂಧನ ಮತ್ತು ಇಂಧನ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ದಶಕಗಳಿಂದ ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರಕಾರದ ದಿಟ್ಟ ನಡೆಗೆ ನಾಡಿನ ಸಾಂಸ್ಕೃತಿಕ ವಲಯದಿಂದ ಈಗ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

 

 

ಏನಿದು ವಿವಾದ
ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು ‌. ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದು ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ವಿಕಲಚೇತನರಿಗೆ ಅನನುಕೂಲವಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರಕಾರದ ಮುಂದೆ ಇತ್ತು.

2006 ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ ಅವರ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರಕಾರ ಮತ್ತೊಂದು ಸಮಿತಿ ರಚನೆ ಮಾಡಿತ್ತು. ಆದರೆ ಈ ಸಮಿತಿಯ ಸದಸ್ಯರಲ್ಲೇ ಸ್ಪಷ್ಟತೆ ಇರಲಿಲ್ಲ.

ಈ ಹಿನ್ನೆಲೆಯಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿ ಸುನೀಲ್ ಕುಮಾರ್ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವಂತೆ ಹಿರಿಯ ಸಂಗೀತ ವಿದೂಷಿ ಎಸ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡಬೇಕೆಂದು ನೀಡಿದ್ದ ಶಿಫಾರಸು ಇದೀಗ ಅಧಿಕೃತಗೊಂಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್ ಕುಮಾರ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದು, ‘ಕುವೆಂಪು ವಿರಚಿತ ನಾಡಗೀತೆ’ಜಯ ಭಾರತ ಜನನಿಯ ತನುಜಾತೆ’ ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ.’ ಎಂದು ತಿಳಿಸಿದ್ದಾರೆ.

ನಾಡಗೀತೆ ಮೊಟಕುಗೊಳಿಸುವಂತೆ ಅನಂತಸ್ವಾಮಿ ಹಾಗೂ ಸಿ.ವಿಶ್ವನಾಥ್ ನೇತೃತ್ವದ ಸಮಿತಿಗಳು ಶಿಫಾರಸುಗಳನ್ನು ನೀಡಿದ್ದವು.

ಇತ್ತೀಚಿಗೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದ ನಾಡಗೀತೆಯನ್ನು 1ನಿಮಿಷಕ್ಕೆ ಸಿಮೀತಗೊಳಿಸಬೇಕು ಎಂದು ಹಿರಿಯ ಸಾಹಿತಿ ಕಮಲಾ ಹಂಪನಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಶಾಲಾ ಮಕ್ಕಳ ಸ್ಕೂಲ್ ಬ್ಯಾಗ್ ತೂಕ‌ ಇಳಿಕೆಗೆ ಹೈ ಕೋರ್ಟ್ ನಲ್ಲಿ ಐಪಿಎಲ್
Next Article ಅರ್ಥಪೂರ್ಣ ಪೌರ ಕಾರ್ಮಿಕ ದಿನಾಚರಣೆ: ದೈವ ಸಮಾನರು
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.