Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಮಹಿಳಾ ಸ್ವ-ಸಹಾಯ ಸಂಘದಿಂದ ನಿರ್ವಹಣೆ ಕಸ ಸಂಗ್ರಹಣೆಯಲ್ಲಿ ಮಾದರಿಯಾದ ನಗರಂಗೆರೆ ಗ್ರಾಮ ಪಂಚಾಯಿತಿ
ಜಿಲ್ಲಾ ಸುದ್ದಿ

ಮಹಿಳಾ ಸ್ವ-ಸಹಾಯ ಸಂಘದಿಂದ ನಿರ್ವಹಣೆ ಕಸ ಸಂಗ್ರಹಣೆಯಲ್ಲಿ ಮಾದರಿಯಾದ ನಗರಂಗೆರೆ ಗ್ರಾಮ ಪಂಚಾಯಿತಿ

D KumaraswamyBy D KumaraswamyAugust 25, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮಹಿಳಾ ಸ್ವ-ಸಹಾಯ ಸಂಘದಿಂದ ನಿರ್ವಹಣೆ

ಕಸ ಸಂಗ್ರಹಣೆಯಲ್ಲಿ ಮಾದರಿಯಾದ ನಗರಂಗೆರೆ ಗ್ರಾಮ ಪಂಚಾಯಿತಿ

 

 

ಹೆಚ್ಚಿನ ಜನಸಂಖ್ಯೆ ಹಾಗೂ ವಾಣಿಜ್ಯ ವಹಿವಾಟಿನಿಂದಾಗಿ ಚಳ್ಳಕೆರೆ ನಗರಕ್ಕೆ ಹೊಂದಿಕೊಂಡಿರುವ ನಗರಂಗೆರೆ ಗ್ರಾಮ ಪಂಚಾಯಿತಿ ಜನರಿಗೆ ಕಸವಿಲೇವಾರಿಯು ಅತ್ಯಂತ ದೊಡ್ಡ ಸಮಸ್ಯೆಯಾಗಿತ್ತು. ಇಂತಹ ಸಮಸ್ಯೆಗೆ ಆಶಾಕಿರಣವಾಗಿ ಕಂಡುಬಂದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರಾಯೋಜಿತ ಯೋಜನೆಯೇ ‘ಸ್ವಚ್ಛ ಭಾರತ್ ಮಿಷನ್’.
ಶ್ರೀ ಅನ್ನಪೂರ್ಣ ಮಹಿಳಾ ಸ್ವಸಹಾಯ ಸಂಘದೊಂದಿಗೆ ಒಪ್ಪಂದ : ‘ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಶುಚಿತ್ವ ನೈರ್ಮಲೀಕರಣಕ್ಕೆ ಸಂಬಂಧಿಸಿದಂತೆ ಅನುದಾನವನ್ನು ಗ್ರಾಮ ಪಂಚಾಯತಿಗೆ ಬಿಡುಗಡೆ ಮಾಡಲಾಯಿತು. ಅನುದಾನದಲ್ಲಿ ಇಲಾಖಾ ಮಾರ್ಗಸೂಚಿಗಳನ್ವಯ ಕಸ ಸಂಗ್ರಹಣೆಗಾಗಿ ಆಟೋ ಟಿಪ್ಪರ್ ಖರೀದಿಸಲಾಯಿತು. ಇಲಾಖಾ ಸೂಚನೆಯಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಮಹಿಳಾ ಸ್ವಸಹಾಯ ಸಂಘಗಳ ಸಭೆಯನ್ನು ಕರೆದು ಕಸ ಸಂಗ್ರಹಣೆ, ಕಸ ವಿಂಗಡಣೆ, ಕಸ ಸಂಗ್ರಹ ಶುಲ್ಕ ಸಂಗ್ರಹದ ಜವಾಬ್ದಾರಿಯನ್ನು ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯ ನಿರ್ಣಯದಂತೆ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳಲಾಯಿತು.

ಕಸ ವಿಲೇವಾರಿಯ ಬಗ್ಗೆ ಸೂಕ್ತ ತರಬೇತಿ: ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವೈಜ್ಞಾನಿಕವಾಗಿ ಕಸಸಂಗ್ರಹಣೆ, ಕಸವಿಂಗಡಣೆ ಹಾಗೂ ಕಸವಿಲೇವಾರಿಯ ಬಗ್ಗೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕು, ಬಿಳಿಗೇರಿ ಗ್ರಾಮ ಪಂಚಾಯತಿಗೆ ಕ್ಷೇತ್ರ ಅಧ್ಯಯನ ಪ್ರವಾಸ ಆಯೋಜಿಸಲಾಯಿತು. ಹಾಗೂ ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳ ಸಹಯೋಗದೊಮದಿಗೆ ಸೂಕ್ತ ತರಬೇತಿಯನ್ನು ನೀಡಲಾಯಿತು.
ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯಗತ: ಗ್ರಾಮ ಪಂಚಾಯತಿ ಸ್ವಂತ ನಿಧಿಯಿಂದ ಕಸಸಂಗ್ರಹಣೆ ವಾಹನ ಇಂಧನ ಹಾಗೂ ನಿರ್ವಹಣಾ ವೆಚ್ಚವನ್ನು ಭರಿಸಿ ಗ್ರಾಮ ಪಂಚಾಯತಿಯ ಎಲ್ಲಾ ಗ್ರಾಮಗಳಿಂದ ಒಣಕಸ ಸಂಗ್ರಹಿಸಿ ಸಂಗ್ರಹಿಸಿದ ಕಸವನ್ನು ಸಮುದಾಯಭವನ (ಕಟ್ಟಡ ಕೊರತೆಯಿರುವ ಪ್ರಯುಕ್ತ) ದಲ್ಲಿ ವಿಂಗಡಣೆ ಮಾಡಲು ಹಾಗೂ ಕಸ ವಿಂಗಡನೆಯ ಸಂದರ್ಭದಲ್ಲಿ ಬಳಸಬೇಕಾದ ರಕ್ಷಣಾ ಸಾಮಾಗ್ರಿಗಳನ್ನು 14/15 ನೇ ಹಣಕಾಸು ಯೋಜನೆಯಡಿ ಖರೀದಿಸಲು ಸಾಮಾನ್ಯ ಸಭೆಯ ಮೂಲಕ ತೀರ್ಮಾನಿಸಿ ಅಧಿಕಾರಿಗಳ ಸಹಕಾರದೊಂದಿಗೆ ಕಾರ್ಯಗತಗೊಳಿಸಲಾಯಿತು.
ಹಸಿ, ಒಣಕಸ ವಿಂಗಡಣೆಯ ಬಗ್ಗೆ ಅರಿವು: ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿಗಳು, ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು, ಗ್ರಾಮ ಪಂಚಾಯತಿಯ ಚುನಾಯಿತ ಪ್ರತಿನಿಧಿಗಳು, ಮಹಿಳಾ ಸ್ವಸಹಾಯ ಸಂಘಗಳು, ಗ್ರಾಮಸ್ಥರ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಸಹಯೋಗದೊಂದಿಗೆ ಗ್ರಾಮವಾರು ಮನೆಗಳಿಗೆ ಭೇಟಿ ನೀಡಿ ಹಸಿಕಸ, ಒಣಕಸ ವಿಂಗಡಣೆಯ  ನಿರ್ವಹಣೆಯ ಬಗ್ಗೆ ಅರಿವು ಮೂಡಿಸಲಾಯಿತು. ಹಾಗೂ ಕರಪತ್ರ ಹಂಚಿಕೆ ಹಾಗೂ ಬೀದಿನಾಟಕಗಳನ್ನು ಏರ್ಪಡಿಸುವುದರ ಮೂಲಕ ವೈಯುಕ್ತಿಕ ಹಾಗೂ ಅಮುದಾಯ ಶುಷಿತ್ವದ ಬಗ್ಗೆ ಸುಮಾರು ಒಂದು ತಿಂಗಳ ಕಾಲ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಕಸದ ಬುಟ್ಟಿಗಳ ವಿತರಣೆ: ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿಗಳು, ಜಿಲ್ಲಾ ಪಂಚಾಯತಿ, ಚಿತ್ರದುರ್ಗ ಇವರ ಸಮ್ಮುಖದಲ್ಲಿ 2020 ರ ಅಕ್ಟೋಬರ್-2ರಂದು ಸ್ವಚ್ಚ ಸಂಕೀರ್ಣ ಘಟಕದ ಉದ್ಘಾಟನೆ ಹಾಗೂ ಉಚಿತ ಕಸದ ಬುಟ್ಟಿ ವಿತರಣಾ ಕಾರ್ಯಕ್ರಮವನ್ನು ಮಾಡಲಾಯಿತು.
ಶುಲ್ಕ ಸಂಗ್ರಹಣೆ: ಪ್ರಾರಂಭದಲ್ಲಿ ಒಂದು ತಿಂಗಳ ಕಾಲ ಉಚಿತ ಕಸ ಸಂಗ್ರಹಣೆಯನ್ನು ಮಾಡಲಾಯಿತು. ಸದರಿ ವೇತನವನ್ನು ಗ್ರಾಮ ಪಂಚಾಯತಿಯ ಸ್ವಂತ ನಿಧಿಯಿಂದಲೇ ಭರಿಸಲಾಯಿತು. ನಂತರ ಪ್ರತಿ ಮನೆಗೆ ರೂ 30/-, ಅಂಗಡಿಗೆ ರೂ 50/-, ಹೋಟೆಲ್ ರೂ 100/-, ಗಳಂತೆ ಕಸ ಸಂಗ್ರಹಣಾ ಶುಲ್ಕವನ್ನು ಮಾಡಲು ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯು ನಿರ್ಣಯ ಕೈಗೊಂಡಿತು.
ಪ್ರಾರಂಭದಲ್ಲಿ ಕಸ ಸಂಗ್ರಹಣಾ ಶುಲ್ಕ ಸಂಗ್ರಹಿಸುವುದು ಕಷ್ಟ ಸಾಧ್ಯವಾಯಿತು. ಗ್ರಾಮ ಪಂಚಾಯತಿಯ ಚುನಾಯಿತ ಪ್ರತಿನಿಧಿಗಳು, ಮಹಿಳಾ ಸ್ವ-ಸಹಾಯ ಸಂಘಗಳು, ಗ್ರಾಮ ಪಂಚಾಯತಿಯ ಸಿಬ್ಬಂದಿಗಳ ನೆರವಿನೊಂದಿಗೆ ಈಗ ತಿಂಗಳಿಗೆ 15000/-ಸಂಗ್ರಹಿಲಾಗುತ್ತಿದ್ದು,  ಆ ಹಣವನ್ನು ಕಸ ಸಂಗ್ರಹಣೆ ಹಾಗೂ ವಿಂಗಡಣೆ ಮಾಡುತ್ತಿರುವ ಮಹಿಳಾ ಸ್ವಸಹಾಯ ಸಂಘದವರಿಗೆ ನೀಡಲಾಗುತ್ತಿದೆ.
ಸ್ವಚ್ಛತೆಯೆಡೆಗೆ ಒಂದು ಹೆಜ್ಜೆ: ವೇಳಾಪಟ್ಟಿಯಂತೆ ಕಸದ ವಾಹನ ಗ್ರಾಮಗಳಿಗೆ ತೆರಳಿ ಕಸ ಸಂಗ್ರಹ ಮಾಡಿ ಕಸಸಂಗ್ರಹಣೆಯ ತಾತ್ಕಾಲಿ ಶೆಡ್‍ನಲ್ಲಿ ವಿಂಗಡಣೆ ಮಾಡಲಾಗುತ್ತಿದೆ. ಈಗ 15ನೇ ಹಣಕಾಸು ಯೋಜನೆಯಲ್ಲಿನ ಅನುದಾನವನ್ನು ಬಳಸಿಕೊಂಡ ಕಸ ವಿಂಗಡಣಾ ಕಸದ ಸಂಗ್ರಹ ಗುಂಡಿಗಳನ್ನು ನಿರ್ಮಿಸಲಾಗಿದೆ. ಈ ಎಲ್ಲಾ ಚಟುವಟಿಕೆಗಳನ್ನು ಅತ್ಯಂತ ಪೂರ್ವಯೋಚಿತವಾಗಿ ಅನುಷ್ಟಾನಗೊಳಿಸಿರುವ ಪ್ರಯುಕ್ತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ಕಡಿಮೆಯಾಗಿದ್ದು, ಸ್ವಚ್ಛತೆಯೆಡೆಗೆ ಒಂದು ಹೆಜ್ಜೆ ಇಟ್ಟಾಂತಾಗಿದೆ ಎನ್ನುತ್ತಾರೆ ನಗರಂಗೆರೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ರಾಮಚಂದ್ರಪ್ಪ.

Share. Facebook Twitter Pinterest LinkedIn Tumblr WhatsApp Email
Previous Articleನಾನು ಕೂಡ ನೇತ್ರದಾನಕ್ಕೆ ಮುಂದಾಗಿದ್ದೇನೆ
Next Article ಗ್ರಾಪಂ ಮಾಜಿ ಸದಸ್ಯ ರಾಜಪ್ಪ‌ ನಿಧನ : ಮಾಜಿ ಸಚಿವ ಹೆಚ್.ಆಂಜನೇಯ ಸಂತಾಪ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.