ಉದ್ಯೋಗ ಖಾತರಿ ಯೋಜನೆ: ಸಹಾಯವಾಣಿ ಪ್ರಾರಂಭ

ಜಿಲ್ಲಾ ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನ ಹಂತದಲ್ಲಿನ ಕುಂದು- ಕೊರತೆಗಳ ಬಗ್ಗೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.

 

 

 


ಸಹಾಯವಾಣಿ ಸಂಖ್ಯೆ 08194-222277 ಆಗಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸುವುದರ ಮೂಲಕ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *