BREAKING NEWS
ರಾಜಕೀಯ ಪಕ್ಷಗಳ ಇಬ್ಬಾಗ: ಕೋಮು ಸಂಘರ್ಷ ಮತ್ತಷ್ಟು ಉಲ್ಬಣ: ಕೋಡಿಮಠದ ಸ್ವಾಮೀಜಿ ಭವಿಷ್ಯ
ಸೊರಬ: ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀಣೋರ್ದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದ ನಂತರ ಮಾತನಾಡಿದರು.





