ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಆತ್ಮ ಸ್ಥೈರ್ಯ ಬರುತ್ತದೆ

ಜಿಲ್ಲಾ ಸುದ್ದಿ

ಗ್ರಾಮೀಣ ಭಾಗದಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಆಯೋಜನೆ ಆಗುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಸ್ಪರ್ಧಾತ್ಮಕ ಯುಗದಲ್ಲಿ ಪೈಪೋಟಿ ನೀಡುವ ಆತ್ಮಸ್ಥೈರ್ಯ, ಸಮಸ್ಯೆಗಳು ಎದುರಾದಾಗ ಅವುಗಳನ್ನು ಕ್ರೀಡಾ ಮನೋಭಾವದಿಂದ ಎದುರಿಸುವ ಧೈರ್ಯ ಮಕ್ಕಳಲ್ಲಿ ಮೂಡುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ ಮಂಜುನಾಥ್ ಹೇಳಿದರು ಅವರು‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂತಹ ಕಾರ್ಯ ಕ್ರಮಗಳಿಗೆ ಮಕ್ಕಳನ್ನು ಉರಿದುಂಬಿಸಿ ಪ್ರೋತ್ಸಾಹಿಸಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ಇಲ್ಲಿಗೆ ಕರೆತಂದಿರುವ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಪಾರಿತೋಷಕಗಳನ್ನು ಹರಿಯಬ್ಬೆಯ ಪಿಎಸೈ ಕಾಂತರಾಜ್ಎಸ್ ವಿತರಿಸಿದರು. ಇದಕ್ಕೂ ಮುನ್ನ ಹಿರಿಯೂರು ಕ್ಷೇತ್ರ ಸಮನ್ವಯಾಧಿಕಾರಿಗಳಾದ ತಿಪ್ಪೇರುದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪೋಷಿಸುವ ವೇದಿಕೆ ಇದಾಗಿದೆ. ಇದನ್ನು ಸ್ಪೂರ್ತಿಯಿಗಿ ಬೆಳೆಸಲು ಎಲ್ಲರೂ ಶ್ರಮಿಸಬೇಕಾಗಿದೆ ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಹಯೋಗದಲ್ಲಿ ಹಿರಿಯೂರು ತಾಲ್ಲೂಕು ಧರ್ಮಪುರ ಹೋಬಳಿ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಸಾಂಸ್ಕೃತಿಕ ಉತ್ಸವವನ್ನು ಏರ್ಪಡಿಸಲಾಗಿತ್ತು.ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶ್ರೀಲತಾ ಶಿವಕುಮಾರ್ ವಹಿಸಿ ಕೊಂಡಿದ್ದರು.ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷರು ಹಾಗೂ ಹರಿಯಬ್ಬೆ ಪ್ರೌಢಶಾಲೆಯ ಪ್ರಭಾರಿ ಪ್ರಾಂಶುಪಾಲರಾದ ಆರ್ ಶಿವಕುಮಾರ್ ಸರ್ವರನ್ನು ಸ್ವಾಗತಿಸಿದರುಕಾರ್ಯಕ್ರಮದಲ್ಲಿ ಬಿ.ಎಚ್.ವೆಂಕಟೇಶ್ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು ರೈತ ಸೇವಾ ಸಹಕಾರ ಸಂಘ, ಮಾಜಿ ಸದಸ್ಯರು ಭೂ ನ್ಯಾಯ ಮಂಡಳಿ,ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಹೇಶ್ ಹಾಗೂ ಸದಸ್ಯರು, ECO ಗಳಾದ ಲೋಹಿತ್, ಶಶಿಧರ್, ಹರೀಶ್ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಸಂಘದ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ವೆಂಕಟೇಶ್, ಅಕ್ಷರ ದಾಸೋಹ ಅಧಿಕಾರಿ ಶ್ರೀ ಮಹೇಶ್ವರ ರೆಡ್ಡಿ, ಹಾಲಿ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಿ.ಪರಮೇಶ್ವರ ಮತ್ತು ಸದಸ್ಯರು,ಹರಿಯಬ್ಬೆ ಹೋಬಳಿ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲಾ ಶಿಕ್ಷಕರು ಮತ್ತು ಶಿಕ್ಷಕಿಯರು, ಹರಿಯಬ್ಬೆ ಪ್ರೌಢಶಾಲೆಯ ಸಿಬ್ಬಂದಿ ವರ್ಗದವರು, ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿಗಳು ಹಾಗೂ ಪೋಷಕರು, ತೀರ್ಪುಗಾರರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

 

 

Leave a Reply

Your email address will not be published. Required fields are marked *