ಸಂಭಾಲ್: ಧಾರ್ಮಿಕ ಶಿಕ್ಷಕನೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ. ಆರೋಪಿಯನ್ನು ಪೋಲಿಸರು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ದೂರು ನೀಡಿದ್ದು, ಧಾರ್ಮಿಕ ಶಿಕ್ಷಕ ಮಸೀದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಮಸೀದಿಯ ಕೋಣೆಯೊಳಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಎಸ್ಪಿ ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ.
ಆರೋಪಿಯ ಮೇಲೆ ಐಪಿಸಿ 376 ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆಯಡಿಯಲ್ಲಿ ಬುಧವಾರ ಪ್ರಕರಣ ದಾಖಲಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೋಲಿಸರು ತಿಳಿಸಿದ್ದಾರೆ.