ಮತ್ತೆ ರೇಪೋ ದರ ಏರಿಸಿದ ಆರ್ ಬಿ ಐ

ದೇಶ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು ಮತ್ತೆ ಏರಿಕೆ ಮಾಡಿದೆ. ಆರ್‌ಬಿಐ ರೆಪೋ ದರವನ್ನು 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 5.4ಕ್ಕೆ ತಲುಪಿದೆ. ಈ ಹಿಂದೆ ಆರ್‌ಬಿಐ ದಿಢೀರ್ ಆಗಿ ರೆಪೋ ದರ ಏರಿಕೆ ಮಾಡುವ ಮೂಲಕ ಜನರಿಗೆ ಶಾಕ್ ನೀಡಿತ್ತು..
ದೇಶದಲ್ಲಿ ಹಣದುಬ್ಬರವನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಆರ್‌ಬಿಯ ಹಲವು ಬಾರಿ ರೆಪೋ ದರವನ್ನು ಏರಿಕೆ ಮಾಡಿದೆ. ಏಪ್ರಿಲ್‌ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಸತತ 10 ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು. ಆದರೆ ಹಣದುಬ್ಬರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ ತಿಂಗಳಿನಲ್ಲಿ ಆರ್‌ಬಿಐ ರೆಪೋ ದರವನ್ನು ಕೂಡಲೇ ಜಾರಿಗೆ ಬರುವಂತೆ ಏರಿಕೆ ಮಾಡಿತ್ತು.

ಆ ಬಳಿಕ ಆರ್‌ಬಿಐ ಜೂನ್‌ ತಿಂಗಳಿನಲ್ಲಿ ಮತ್ತೆ ರೆಪೋ ದರ ಹೆಚ್ಚಳ ಮಾಡಿತ್ತು. ಜೂನ್‌ನಲ್ಲಿ ರೆಪೋ ದರವನ್ನು ಆರ್‌ಬಿಐ 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 4.90ಕ್ಕೆ ತಲುಪಿತ್ತು. ಈಗ ಮತ್ತೆ 50 ಮೂಲಾಂಕ ಏರಿಕೆ ಮಾಡಲಾಗಿದೆ.

 

 

 

ರೆಪೋ ದರ ಎಂದರೇನು?

ರೆಪೋ ದರ ಎಂದರೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ.

Leave a Reply

Your email address will not be published. Required fields are marked *