ಯಡಿಯೂರಪ್ಪಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ರಾಜ್ಯ

ಚಿತ್ರದುರ್ಗ: ಯಡಿಯೂರಪ್ಪ ರಾಹುಲ್ ಗಾಂಧಿ  ಪಾದಕ್ಕೂ ಸಮ ಇಲ್ಲ ಎಂದು ನಾನು ಹೇಳಲ್ಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ತಿರುಗೇಟು ನೀಡಿದರು.
ಮೋದಿ ಪಾದದ ಧೂಳಿಗೂ ಸಿದ್ದರಾಮಯ್ಯ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ. ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗುತ್ತಾ? ಪ್ರಧಾನ ಮಂತ್ರಿ ಅವರು. ಅದೇ ರೀತಿ ನೆಹರು ಕಾಲಿಗೂ ಯಡಿಯೂರಪ್ಪ ಸಮನಲ್ಲ ಅಂತಾ ಹೇಳಬಹುದಲ್ವಾ? ಆದರೆ ನಾನು ಅವರಿಗೆ ಆ ರೀತಿ ಹೇಳಲ್ಲ. ಅದು ಕೀಳು ಅಭಿರುಚಿ. ಸಿಎಂ ಆದವರು ಆ ತರಹ ಎಲ್ಲ ಮಾತನಾಡಬಾರದು ಎಂದು ಕಿಡಿಕಾರಿದರು.
ರಾಹುಲ್ ಗಾಂಧಿ ಒಬ್ಬ ಬಚ್ಚಾ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದು ಮಾತನಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ. ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಅದಕ್ಕಾಗಿ ಅವರಿಗೆ ಬಹುಶಃ ಅರಳೋ ಮರಳೋ ಆಗಿದೆ. ಅದಕ್ಕಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

 

 

Leave a Reply

Your email address will not be published. Required fields are marked *