ಎಸ್ ಕೆ ಬಸವರಾಜನ್ ಹೆಸರಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ : ನ್ಯಾಯಾಂಗ ಬಂಧನದಲ್ಲಿ ಎಸ್ ಕೆ ಬಿ

ರಾಜ್ಯ

ನ್ಯಾಯಾಂಗ ಬಂಧನದಲ್ಲಿರುವ ಎಸ್.ಕೆ. ಬಸವರಾಜನ್ ಹೆಸರಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ

 

 

 

2023ರ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಕಾಂಗ್ರೆಸ್‌ನಲ್ಲಿ ಅರ್ಜಿ ಸಲ್ಲಿಕೆಗೂ ಪೈಪೋಟಿ ನಡೆದಿದ್ದು ನ 15 ಕ್ಕೆ ಕೊನೆಯ ದಿನವಾಗಿತ್ತು.ನಂತರ ನವೆಂಬರ್ 21 ರವರೆಗೆ ವಿಸ್ತರಣೆ ಮಾಡಿದ್ದಾರೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಟಿಕೆಟ್‌ಗಾಗಿ ಅಭ್ಯರ್ಥಿಗಳ ಪಟ್ಟಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಮಠ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಠದ ಮಾಜಿ ಆಡಳಿತಾಧಿಕಾರಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.ಮಾಜಿ ಶಾಸಕರಾಗಿರುವ ಬಸವರಾಜನ್ ಅವರು ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2008 ರಲ್ಲಿ ಇವರು ಒಮ್ಮೆ ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ತದನಂತರ 2018ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇವರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಇವರ ಪತ್ನಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಎಂಎಲ್ಸಿ ರಘು ಆಚಾರ್, ಹನುಮನುಲಿ ಷಣ್ಮುಗಪ್ಪ, ಜಿ ಜಯರಾಮಯ್ಯ, ಉದ್ಯಮಿ ಕೆಸಿ. ವೀರೇಂದ್ರ ಪಪ್ಪಿ, ಮಾಜಿ ಶಾಸಕ ಎವಿ. ಉಮಾಪತಿ, ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸೇರಿದಂತೆ ಐದಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ಶುರುವಾಗಿದೆ. ಆಕಾಂಕ್ಷಿಗಳು ಈಗಾಗಲೇ 2 ಲಕ್ಷ ರೂ. ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿದ್ದಾರೆ.ನ್ಯಾಯಾಂಗ ಬಂಧನದಲ್ಲಿ ಎಸ್.ಕೆ.ಬಿ : ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ತನಿಖೆ ನಡೆಸಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ನ್ಯಾಯಾಂಗ ಬಂಧನದಲ್ಲೇ ಇದ್ದುಕೊಂಡು ಆಪ್ತರ ಮೂಲಕ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಬಸವರಾಜನ್ ಗುರುತಿಸಿಕೊಂಡಿದ್ದರು.
ಇನ್ನು ಆರೋಪಿ ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಜ್ಞಾತ ಸ್ಥಳದಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ವಿಚಾರಣೆ ನಡೆಸಲಾಗಿತ್ತು.
ಇನ್ನು ನವೆಂಬರ್ 7 ರಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇವರ ಜೊತೆಗೆ ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ ಹಾಗೂ ಎಸ್.ಜೆ.ಎಂ. ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿ ಅವರನ್ನು ಬಂಧಿಸಲಾಗಿತ್ತು. ಇವರು ನೀಡಿದ ಮಾಹಿತಿ ಮೇರೆಗೆ ಬಸವರಾಜನ್ ಅವರನ್ನು ವಶಕ್ಕೆ ಪಡೆದಿದ್ದರು.

Leave a Reply

Your email address will not be published. Required fields are marked *