Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಉದ್ಯೋಗ ಪ್ರಕ್ರಿಯೆ ರದ್ದುಗೊಳಿಸಿ: ಹೆಚ್. ಆಂಜನೇಯ
ರಾಜ್ಯ

ಉದ್ಯೋಗ ಪ್ರಕ್ರಿಯೆ ರದ್ದುಗೊಳಿಸಿ: ಹೆಚ್. ಆಂಜನೇಯ

D KumaraswamyBy D KumaraswamyOctober 30, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಪತ್ರಿಕಾ ಪ್ರಕಟಣೆ ಕೃಪೆಗಾಗಿ ವಿನಂತಿ.

*ಆಯೋಧ್ಯೆಯಲ್ಲಿ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪಿಸಿ*

*ಉದ್ಯೋಗ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿ*

 

 

*ಎಸ್ಟಿಗೆ ರಾಜಕೀಯ ಮೀಸಲು ನೀಡಿದ್ದು ಕಾಂಗ್ರೆಸ್*

*ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ*

ರಾಮಾಯಾಣ ಮಹಾಕಾವ್ಯ ಬರೆದು ಶ್ರೀರಾಮ, ಸೀತೆ, ಲಕ್ಷ್ಮಣ, ಹನುಮಂತ ಅವರ ಮೂಲಕ ನಾಡಿಗೆ ಆದರ್ಶಗಳ ಸಂದೇಶ ನೀಡಿದ ಮಹರ್ಷಿ ವಾಲ್ಮೀಕಿ ವಿಶ್ವದ ಮಹಾಕವಿ ಎಂದು ಮಾಜಿ ಸಚಿವ ಎಚ್.ಆಂಜನೇಯ ಬಣ್ಣಿಸಿದರು.
ಚಿಕ್ಕಜಾಜೂರು ಸಮೀಪದ ಚಿಕ್ಕಂದವಾಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಮಹರ್ಷಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಶ್ರೀರಾಮ ಇದ್ದಲ್ಲಿ ವಾಲ್ಮೀಕಿ ಇರಲೇಬೇಕು. ಆಗ ಮಾತ್ರ ಶ್ರೀರಾಮನಿಗೆ ನಾವು ಗೌರವಿಸಿದಂತೆ. ಆದ್ದರಿಂದ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತಿರುವ ಶ್ರೀರಾಮ ಮಂದಿರದಲ್ಲಿ ವಾಲ್ಮೀಕಿ ಪ್ರತಿಮೆ ನಿರ್ಮಾಣ ಕಾರ್ಯ ಆಗಲೇಬೇಕು. ಈ ಮೂಲಕ ಮಹಾಕವಿಗೆ ಗೌರವ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಶ್ರೀರಾಮ, ಸೀತಾಮಾತೆಯನ್ನು ಕಾಡಿಗೆ ಕಳುಹಿಸಿದಾಗ ಆ ಮಹಾತಾಯಿಗೆ ಆಶ್ರಯ ನೀಡಿ, ಇಬ್ಬರು ಮಕ್ಕಳ ಜನನದ ಬಳಿಕ ಸೀತಾಮಾತೆಯನ್ನು ಆರೈಕೆ ಮಾಡಿದ ವಾಲ್ಮೀಕಿ ನಾಡಿನ ಶ್ರೇಷ್ಠ ಮಾನವತಾವಾದಿ ಆಗಿದ್ದಾರೆ ಎಂದರು.
ಮಹಾಕಾವ್ಯ ರಾಮಾಯಣ ರಚಿಸಿದ ವಾಲ್ಮೀಕಿ ಕುರಿತು ಕಟ್ಟು ಕಥೆ, ಸುಳ್ಳು ಕಥೆಗಳು ಇವೆ. ಅವೆಲ್ಲವು ಸುಳ್ಳಾಗಿದ್ದು, ಈ ಕುರಿತು ಜಾಗೃತಿ ಮೂಡಬೇಕಾಗಿದೆ. ವಾಲ್ಮೀಕಿ ಕುರಿತು ಪರಿಚಯಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.
ಪರಿಶಿಷ್ಟ ಪಂಗಡಕ್ಕೆ ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರದ ಮೀಸಲಾತಿ ಇತ್ತು.‌ ಇದನ್ನು 2008ರಲ್ಲಿ ಹದಿನೈದು ಸ್ಥಾನಕ್ಕೆ ಹೆಚ್ಚಿಸಿ, ರಾಜಕೀಯ ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ ಎಂದರು.
ಪ್ರಸ್ತುತ ಎಸ್ಸಿ, ಎಸ್ಡಿ ಮೀಸಲಾತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.‌ ಇದು ಸ್ವಾಗತಾರ್ಹ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಾಗಮೋಹನ್ ದಾಸ್ ವರದಿ ಜಾರಿಗೆ ಚಿಂತನೆ ನಡೆಸಿತ್ತು. ಆದರೆ, ಚುನಾವಣೆ ಘೋಷಣೆ ಆಗಿದ್ದರಿಂದ ಸಾಧ್ಯವಾಗಿರಲಿಲ್ಲ. ಮತ್ತೊಮ್ಮೆ ಅಧಿಕಾರ ಸಿಕ್ಕಿದ್ದರೆ ಮೀಸಲಾತಿ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗಿತ್ತಿತ್ತು. ಆದರೆ ಅಧಿಕಾರ ಕೈ ತಪ್ಪಿ ಹೋಯಿತು. ಆದರೂ ಕೂಡ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ನಿರಂತರ ಒತ್ತಡ ತಂದಿದ್ದರಿಂದ, ಅದರಲ್ಲೂ ವಾಲ್ಮೀಕಿ ಶ್ರೀಗಳ ಬದ್ಧತೆಯ ಹೋರಾಟಕ್ಕೆ ಮಣಿದು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.
ಆದರೆ, ಈ ಮೀಸಲಾತಿ ಎಸ್ಸಿ, ಎಸ್ಟಿ ಸಮುದಾಯಕ್ಕೆ  ದೊರೆಯಬೇಕಾದರೆ ರಾಷ್ಟ್ರಪತಿ ಅಂಕಿತ ಬೇಕು. ಕೂಡಲೇ ಈ ಆಜ್ಞೆ ಆಗಬೇಕು ಎಂದು ತಿಳಿಸಿದರು.
ಮೀಸಲಾತಿ ಹೆಚ್ಚಳ ಜಾರಿಗೆ ಬರುವವರೆಗೆ ಉದ್ಯೋಗ ನೇಮಕಾತಿ ಪ್ರತಿಕ್ರಿಯೆ ರದ್ದುಗೊಳಿಸಬೇಕು. ಈಗ 600  ಇಂಜಿನಿಯರ್  ಹುದ್ದೆಗಳ ನೇಮಕಾತಿಗೂ ತಡೆ ಹಾಕಬೇಕು ಎಂದು ಒತ್ತಾಯಿಸಿದರು.ತೇಕಲವಟ್ಟಿ ಸಮೀಪ ನೂರಾರು ಭೂರಹಿತ ಬಡ ಕುಟುಂಬಗಳು ಮೂರ್ನಾಲ್ಕು ದಶಕದಿಂದ ಸಾಗುವಳಿ ಮಾಡುತ್ತಿದ್ದಾರೆ. ಬಹಳಷ್ಟು ಜನರು ಅಡಕೆ, ತೆಂಗು ತೋಟ ಕಟ್ಟಿದ್ದಾರೆ. ಆದರೆ, ಇವರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿರುವುದು ಬಡಜನರ ಬದುಕಿಗೆ ಕೊಳ್ಳಿ ಇಟ್ಟಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಭೂರಹಿತ ಕುಟುಂಬಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸಾಗುವಳಿ ಹಕ್ಕುಪತ್ರ ಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯರಾದಎಂ.ಜಿ.ಲೋಹಿತ್‍ಕುಮಾರ್,
ಎಸ್.ಜೆ.ರಂಗಸ್ವಾಮಿ, ನರಸಿಂಹಮೂರ್ತಿ,
ತಾ.ಪಂ.ಮಾಜಿ ಸದಸ್ಯರಾದ ಪುಟ್ಟಣ್ಣ
ಚಿಕ್ಕಜಾಜೂರು, ಚಿತ್ರದುರ್ಗ ಬೋವಿ
ಸಮಾಜದ ಜಿಲ್ಲಾಧ್ಯಕ್ಷ ಚಿಕ್ಕಂದವಾಡಿ
ತಿಪ್ಪೇಸ್ವಾಮಿ, ಹೊಳಲ್ಕೆರೆ ಬ್ಲಾಕ್
ಯುವ ಕಾಂಗ್ರೆಸ್ ಅಧ್ಯಕ್ಷ
ರಂಗಸ್ವಾಮಿ, ಹೊಳಲ್ಕೆರೆ ಮದಕರಿ
ಯುವಸೇನೆ ಅಧ್ಯಕ್ಷ ರಾಜಪ್ಪ,
ಚಿಕ್ಕಾಜಾಜೂರು ಗ್ರಾಮ ಪಂಚಾಯಿತಿ ಸದಸ್ಯ ಸಿದ್ದೇಶ್, ಕಾಂಗ್ರೆಸ್ ಯುವ
ಮುಖಂಡ ಅಭಿಷೇಕ್ ತಿಪ್ಪೇಸ್ವಾಮಿ,
ಮಲ್ಲೇಶ್, ಪಿ.ಕೆ.ಪವನ್, ಕುಮಾರ,
ವಿಕ್ರಂ ನಾಯಕ, ಓಬಣ್ಣ, ಲೋಕೇಶ್,
ಅಣ್ಣಪ್ಪ, ಶಿವಣ್ಣ, ಓಬಳೇಶ್, ರಾಘವೇಂದ್ರ
ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಪೇದೆ
Next Article ನಾಟಕದ ದೃಶ್ಯ ಅಭ್ಯಾಸ ಮಾಡಲು ಹೋಗಿ ಜೀವ ಕಳೆದುಕೊಂಡ ಬಾಲಕ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.