ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಿರುಕುಳ ನೀಡಿದ್ದ ಪುಂಡರ ಬಂಧನ

ಕ್ರೈಂ

ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಿರುಕುಳ ನೀಡಿದ್ದ ಪುಂಡರ ಬಂಧನ

ಚಿತ್ರದುರ್ಗ : ವಿದ್ಯಾರ್ಥಿನಿಯೊಬ್ಬಳು ಕಾಲೇಜಿಗೆ ಹೋಗುವಾಗ ಮತ್ತು ಬರುವಾಗ ಪುರಂಡರ ಗುಂಪೊಂದು ಕಿರುಕುಳ ನೀಡಿದ್ದನ್ನು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪುಂಡರನ್ನು ಹೊಸದುರ್ಗ ಪೋಲಿಸರು ಬಂಧಿಸಿ ಕೈಗೆ ಕೊಳ ತೊಡಿಸಿದ್ದಾರೆ.

ಹೊಸದುರ್ಗ ತಾಲ್ಲೂಕಿನ ಪಾಣಿಕಿಟ್ಟದಹಳ್ಳಿ ಗ್ರಾಮದ ಮುತ್ತು (21), ಶೀರನಕಟ್ಟೆ ಗ್ರಾಮದ ಸುದೀಪ (19), ಕೋಟಿ (19),ಅಭಿ (22) ವರ್ಷದ ಆರೋಪಿಗಳನ್ನು ಪೋಲಿಸರು ಬಂಧಿಸಿ ಕೈಗೆ ಕೊಳ ತೊಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೋಲಿಸರು ಕಳೆದ ಏಳು ದಿನಗಳಿಂದ ಆರೋಪಿಗಳಿಗಾಗಿ ಬೆಲೆ ಬಿಸಿ ಇಂದು ಬಂಧಿಸಿದ್ದಾರೆ. ಆರೋಪಿಗಳು ಬಂಧಿಸಿರುವ ಪೋಲಿಸ್ ಸಿಬ್ಬಂದಿಗೆ ಜಿಲ್ಲಾ ವರಿಷ್ಠಾಧಿಕಾರಿ ಜಿ. ರಾಧಿಕಾ ಅಭಿನಂದನೆ ಸಲ್ಲಿಸಿದ್ದಾರೆ.

 

 

 

 

ಘಟನೆ ವಿವರ : ವಿದ್ಯಾರ್ಥಿನಿಯೊಬ್ಬಳು ಕಾಲೇಜಿಗೆ ಹೋಗುವಾಗ ಮತ್ತು ಬರುವಾಗ ಪುರಂಡರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶೀರನಕಟ್ಟೆಯ ಕೋಡಿಹಳ್ಳಿಹಟ್ಟಿ ಗ್ರಾಮದ ಪ್ರಥಮ ಪಿಯುಸಿ ಓದುತ್ತಿದ್ದ ರಾಧಿಕಾ (17) ಡಿಸೆಂಬರ್ 19 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಹೊಸದುರ್ಗ ತಾಲೂಕಿನ ಶೀರನಕಟ್ಟೆಯ ಮುತ್ತು, ಸುದೀಪ, ಕೋಟಿದುರ್ಗಪ್ಪ, ಅಭಿ ವಿರುದ್ಧ ಕಿರುಕುಳದ ಆರೋಪ ಮಾಡಿದ್ದರು. ರಾಧಿಕಾ ಕಾಲೇಜಿಗೆ ಹೋಗುವಾಗ, ಬರುವಾಗ ಜಡೆ ಹಿಡಿದು ಎಳೆದು ಅಶ್ಲೀಲವಾಗಿ ಮಾತನಾಡಿ ಆರೋಪಿಗಳು ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ತನ್ನ ಪೋಷಕರ ಬಳಿಯೂ ರಾಧಿಕಾ ಹೇಳಿಕೊಂಡಿದ್ದಾಳು. ಈ ಬಗ್ಗೆ ಆರೋಪಿಗಳ ವಿರುದ್ಧ ರಾಧಿಕಾ ಪೋಷಕರು ಹೊಸದುರ್ಗ ಠಾಣೆಗೆ ದೂರು ನೀಡಿದ್ದರು.

ಮಗಳ ಸಾವಿಗೆ ಕಾರಣವಾದ ಪುಂಡರನ್ನು ಬಂಧಿಸುವಂತೆ ಮೃತಳಾ ಸಂಬಂಧಿಕರು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಎಸ್ಪಿ ಜಿ ರಾಧಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಇದೀಗ ಆರೋಪಿಗಳ ಬಂಧನವಾಗಿದೆ.

Leave a Reply

Your email address will not be published. Required fields are marked *