Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಬಿಜೆಪಿ ತಾಲೂಕು ಮಂಡಲದ 9 ಜನ ಅಧ್ಯಕ್ಷರ ಸಾಮೂಹಿಕ ರಾಜೀನಾಮೆ
ರಾಜಕೀಯ

ಬಿಜೆಪಿ ತಾಲೂಕು ಮಂಡಲದ 9 ಜನ ಅಧ್ಯಕ್ಷರ ಸಾಮೂಹಿಕ ರಾಜೀನಾಮೆ

D KumaraswamyBy D KumaraswamyJuly 29, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಪ್ರವೀಣ್ ಹತ್ಯೆ ಪ್ರಕರಣ, ಚಿತ್ರದುರ್ಗ ಜಿಲ್ಲೆಯ ಬಿಜೆಪಿ ತಾಲೂಕು ಮಂಡಲ 9 ಜನ ಅಧ್ಯಕ್ಷರುಗಳ ಸಾಮೂಹಿಕ ರಾಜೀನಾಮೆ

ಚಿತ್ರದುರ್ಗ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಿನ್ನಲೆಯಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ತಾಲೂಕು ಮಂಡಲಗಳ 9 ಜನ ಅಧ್ಯಕ್ಷರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಹಿರಿಯೂರು ತಾಲೂಕು ಮಂಡಲ ಅಧ್ಯಕ್ಷ ಎಂ. ವಿಶ್ವನಾಥ್, ಚಳ್ಳಕೆರೆ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ನಾಯಕನಹಟ್ಟಿ ಅಧ್ಯಕ್ಷ ರಾಮರೆಡ್ಡಿ, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ಡಾ. ಮಂಜುನಾಥ್ ಪಿಎಂ, ಹೊಳಲ್ಕೆರೆ ಮಂಡಲ ಅಧ್ಯಕ್ಷ ಸಿದ್ದೇಶ್, ಭರಮಸಾಗರ ಅಧ್ಯಕ್ಷ ಶೈಲೇಂದ್ರ, ಹೊಸದುರ್ಗ ಮಂಡಲ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್, ಚಿತ್ರದುರ್ಗ ನಗರ ಅಧ್ಯಕ್ಷ ನವೀನ್ ಚಾಲುಕ್ಯ ಇವರುಗಳು ಜಿಲ್ಲಾಧ್ಯಕ್ಷ ಎ. ಮುರುಳಿ ಅವರನ್ನು ಭೇಟಿ ಮಾಡಿ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಇವರ ಜೊತೆಗೆ ವಿವಿಧ ಯುವ ಮೋರ್ಚಾ ಪದಾಧಿಕಾರಿಗಳು ಕೂಡ ರಾಜೀನಾಮೆ ನೀಡಿದ್ದರು.

 

 

ಪತ್ರದಲ್ಲೇನಿದೆ: ಒಂದು ದಿನದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಜಿಹಾದಿ ಮಾನಸಿಕತೆಯ ದುರುಳರು ಹತ್ಯೆ ಮಾಡಿರೋದು ಗೌರ ಮತ್ತು ದುಃಖಕರ. ನಮ್ಮ ಸ್ವಂತ ತಮ್ಮನನ್ನು ಕಳೆದುಕೊಂಡಷ್ಟು ಮನಸ್ಸಿಗೆ ನೋವಾಗಿದೆ.

ಭಾರತೀಯ ಜನತಾ ಪಾರ್ಟಿ ಕೇವಲ ರಾಜಕೀಯ ಪಕ್ಷವಷ್ಟೇ ಅಲ್ಲ ಇದೊಂದು ವಿಚಾರ ಸಂಘಟನೆ. ಇದರ ಸಿದ್ದಾಂತ ವಿಚಾರದ ನಿಲುವಿಗಾಗಿ ಅದೆಷ್ಟೋ ನಮ್ಮ ಕಾರ್ಯಕರ್ತರು ಬಲಿದಾನವಾಗಿದೆ. ಅಂತಹ ಸಾಹಸ್ರಾರು ಕಾರ್ಯಕರ್ತರು ತ್ಯಾಗ ಬಲಿದಾನದ ಫಲವಾಗಿ ಇಂದು ಪಂಚಾಯಿತಿಯಿಂದ ಪಾರ್ಲಿಮೆಂಟ್ ಅವರಗೂ ನಮ್ಮಗಳ ಸರ್ಕಾರ ಆಳ್ವಿಕೆಯಲ್ಲಿದೆ. ಅಲ್ಲೂ ಇಲ್ಲೂ ಎಲ್ಲಲ್ಲೋ ನಮ್ಮಗಳದೇ ಸರ್ಕಾರ ಇರುವಾಗಲೂ ಜಿಹಾದಿ ಮಾನಸಿಕತೆಯ ಭಯೋತ್ಪಾದಕರಿಗೆ ನಮ್ಮ ಮುಗ್ಧ ಕಾರ್ಯಕರ್ತರು ಬಲಿಯಾಗುತ್ತಿರುವ ಸರಣಿ ಮುಂದುವರೆದಿದೆ. ಮುಖ್ಯಮಂತ್ರಿಗಳು, ಗೃಹ ಸಚಿವರು ಕಠಿಣ ಕ್ರಮ, ನಿರ್ದಾಕ್ಷಿಣ್ಯ ಕ್ರಮ ಎಂದು ಅಸಮರ್ತರಾಗಿ ಹೇಳಿಕೆ ನೀಡುತ್ತಿದ್ದಾರೆ.

ಪಕ್ಷಕ್ಕಾಗಿ ಕ್ಷಮಿಸುತ್ತಿರುವ ಆಹರ್ನಿಕ ಕಾರ್ಯಕರ್ತ ನಮಗೆ ಬೆಲೆ ಕಟ್ಟಲಾಗದ ಜೀವ. ಆ ಜೀವಕ್ಕೆ ಬೆಲೆ ಇಲ್ಲದಂತಾಗಿರುವುದು ದುರಂತವೇ ಸರಿ ಈ ಹಿಂದೆ ನಡೆದ ನಮ್ಮ ಕಾರ್ಯಕರ್ತರುಗಳ ಹತ್ಯೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎಂಬುದು ನಮ್ಮ ಮುಂದೆ ಕಣ್ಮುಂದೆ ಇರುವ ಸಂಗತಿ. ಮುಖ್ಯಮಂತ್ರಿಗಳು, ಗೃಹ ಸಚಿವರು ಕಠಿಣ ಕ್ರಮ, ನಿರ್ದಾಕ್ಷಿಣ್ಯ ಕ್ರಮ ಕೇವಲ ಭರವ ಭರವಸೆಯಾಗೇ ಉಳಿದ ಕಾರಣ ಚಿತ್ರದುರ್ಗ ಜಿಲ್ಲೆಯ ನಾವು 9 ಮಂಡಲದ ಅಧ್ಯಕ್ಷರುಗಳು ರಾಜೀನಾಮೆ ನೀಡಲು ನಿರ್ಧರಿಸಿದ್ದೇವೆ ನಮ್ಮಗಳ ಈ ನಿರ್ಧಾರ ” ನ ದೈನ್ಯಂ ನ ಪಲಾಯನಂ”

ಸರ್ಕಾರ ಎರಗೊಳ್ಳಲಿ, ಎಚ್ಚೆತ್ತು ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣ ಆದವರ ಎಡೆಮುರಿ ಕಟ್ಟಲಿ. ಎಂದು ಪ್ರತ್ರದಲ್ಲಿ ಉಲ್ಲೇಖಿಸಿ ಸಹಿ ಹಾಕಿ ಜಿಲ್ಲಾಧ್ಯಕ್ಷರಿಗೆ ನೀಡಿದ್ದಾರೆ.

 

Share. Facebook Twitter Pinterest LinkedIn Tumblr WhatsApp Email
Previous Articleಮಂಗಳೂರಿನಲ್ಲಿ ಬಿಗುವಿನ ವಾತಾವರಣ 144 ಸೆಕ್ಷನ್ ಜಾರಿ
Next Article ಬಿಜೆಪಿ ತಾಲೂಕು 9 ಜನ ಮಂಡಲ ಅಧ್ಯಕ್ಷರ ಸಾಮೂಹಿಕ ರಾಜೀನಾಮೆ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.