ಬೇರೆಡೆಗೆ ಪ್ರಕರಣ ವರ್ಗಾಯಿಸಿ: ಲೆಹರ್ ಸಿಂಗ್

ರಾಜ್ಯ

ಲೆಹರ್ ಸಿಂಗ್ ಇಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುರುಘಾ ಮಠದ  ಮಠಾಧೀಶಾದ ಡಾ. ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಈ ಕೇಸ್‌ ಅನ್ನು ಚಿತ್ರದುರ್ಗದಿಂದ ಬೇರೆ ಕಡೆಯ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು ಅಂತ ಬಿಜೆಪಿ ನಾಯಕ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಅವರು, ಈ ಪ್ರಕರಣದಲ್ಲಿ ನಿಪ್ಷಕ್ಷಪಾತ ತನಿಖೆ ಆಗಬೇಕು. ಹೀಗಾಗಿ ಪ್ರಕರಣವನ್ನು ಬೇರೆ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು, ಈ ಸಂಪೂರ್ಣ ಪ್ರಕರಣದಲ್ಲಿ ನೊಂದ ಹೆಣ್ಣು ಮಕ್ಕಳಿಗೆ ನ್ಯಾಯ ದೊರಕಿಸಿ ಕೊಡಬೇಕು ಅಂತ ಅವರು ಆಗ್ರಹಿಸಿದ್ದಾರೆ.
ಬೇರೆ ಕಡೆಗೆ ಪ್ರಕರಣ ವರ್ಗಾಯಿಸಿ ಎಂದ ಲೆಹರ್ ಸಿಂಗ್, ಲೆಹರ್‌ ಸಿಂಗ್ ಅವರು ಚಿತ್ರದುರ್ಗದ ಅತ್ಯಂತ ಪ್ರಭಾವಿ ಮುರುಘಾ ಮಠದ ಮಠಾಧೀಶರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಅಪ್ರಾಪ್ತ ಬಾಲಕಿಯರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದು, ಇದು ಅತ್ಯಂತ ಆಘಾತಕಾರಿ ಮತ್ತು ದುಃಖದ ಬೆಳವಣಿಗೆಯಾಗಿದೆ ಎಂದಿದ್ದಾರೆ.  ಪ್ರಕರಣ ಬೇರೆ ಠಾಣೆಗೆ ವರ್ಗಾಯಿಸುವಂತೆ ಅವರು ಆಗ್ರಹಿಸಿದ್ದಾರೆ.

 

 

 


ನೊಂದ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಿ

ಕರ್ನಾಟಕ ಸರ್ಕಾರ ಮತ್ತು ಎಲ್ಲಾ ರಾಜಕೀಯ ಪಕ್ಷಗಳು ಈ ಪ್ರಕರಣದಲ್ಲಿ ಯಾವುದೇ ಒತ್ತಡಗಳು ಮತ್ತು ರಾಜಕೀಯ ಹಸ್ತಕ್ಷೇಪಗಳಿಲ್ಲ ಎಂಬುವುದನ್ನು ಖಚಿತಪಡಿಸಿಕೊಳ್ಳಬೇಕು. ಹೆಣ್ಣುಮಕ್ಕಳು ನ್ಯಾಯಕ್ಕೆ ಅರ್ಹರಾಗಿದ್ದಾರೆ. ಈ ಪ್ರಕರಣ ಕರ್ನಾಟಕದ ಹೊರಗೆ ವರ್ಗಾಯಿಸಿದರೆ ನ್ಯಾಯ ಸಿಗುತ್ತದೆ ಎಂದಿದ್ದರೆ ಅದನ್ನು ಕೂಡಾ ಪರಿಗಣಿಸಬೇಕು” ಎಂದು ಲೆಹರ್ ಸಿಂಗ್ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *