Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಅಪ್ಪರ್ ಭದ್ರಾ ಮೇಲ್ದಂಡೆ ಯೋಜನೆ ಪಿಐಬಿ ನಲ್ಲಿ ಅನುಮೋದನೆಯಾಗಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಅಪ್ಪರ್ ಭದ್ರಾ ಮೇಲ್ದಂಡೆ ಯೋಜನೆ ಪಿಐಬಿ ನಲ್ಲಿ ಅನುಮೋದನೆಯಾಗಿದೆ: ಸಿಎಂ ಬೊಮ್ಮಾಯಿ

D KumaraswamyBy D KumaraswamyOctober 22, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಪ್ರಾಮುಖ್ಯ ಯೋಜನೆಯಾಗಿ ಪಿಐಬಿ (ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ)ಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿ ಇದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇ‌‌‌ಳಿದರು.

ವಿವಿದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಶನಿವಾರ ಹೊಸದುರ್ಗ ಪಟ್ಟಣಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ತಾಲ್ಲೂಕು ಕ್ರೀಡಾಂಗಣದಲ್ಲಿ ನಿರ್ಮಿದಿದ ಹೆಲಿಪ್ಯಾಡ್ ಬಳಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಜಲಸಂಪನ್ಮೂಲ ಸಚಿವರು ಯೋಜನೆ ಕುರಿತು ಕಾರ್ಯೋನ್ಮುಖರಾಗಿದ್ದಾರೆ. ವೈಯಕ್ತಿಕವಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಇದರಿಂದಾಗಿ ಯೋಜನೆಗೆ ಬಹಳ ದೊಡ್ಡ ಪ್ರಮಾಣದಲ್ಲಿ ಹಣಕಾಸಿನ ನೆರವು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದುರ್ಗ ಭಾಗದ ಜನರ ಬಹುದಿನದ ಬೇಡಿಕೆ ತುಮಕೂರು ದಾವಣಗೆರೆ ನೇರ ರೈಲು ಮಾರ್ಗ. ಈ ಯೋಜನೆಯ ಅನುಷ್ಠಾನಕ್ಕೆ ಕೆಲವು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಬಾಕಿಯಿದೆ. ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದಷ್ಟು ಬೇಗ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಭೂ ಸ್ವಾಧೀನಕ್ಕೆ ಅಗತ್ಯ ಇರುವ ರೂ. 100 ಕೋಟಿ ರೂಪಾಯಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು.

 

 

ಅಬ್ಬಿನ‌ಹೋಳೆ ಯೋಜನೆಯಲ್ಲಿ ಭೂಮಿ ನೀಡಲು ಕೆಲ ರೈತರು ವಿವಿಧ ಕಾರಣಗಳಿಂದ ಅಡಚಣೆ ಉಂಟಾಗಿದೆ. ಇದನ್ನು ಬಗೆಹರಿಸಲಾಗುವುದು. ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ದೆಹಲಿ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ರಾಜಕೀಯ ಸನ್ನಿವೇಶದಲ್ಲಿ ಕೆಲವು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಲಭಿಸಿಲ್ಲ. ಈ ವಿಚಾರ ಗಮನದಲ್ಲಿದೆ ಎಂದರು.

ಸರ್ಕಾರಿ ನೌಕರರ 7ನೇ ವೇತನ ಆಯೋಗವನ್ನು ಶೀಘ್ರವಾಗಿ ರಚನೆ ಮಾಡಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಿದರು.

ಈ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಡಿಸಿ ಕವಿತಾ ಮನ್ನಿಕೇರಿ, ಎಸ್.ಪಿ. ಪರಶುರಾಮ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಹತ್ತು ಸಾವಿರ ವಿದ್ಯಾರ್ಥಿಗಳು ಆಯ್ದ ಕಲಾವಿದರ ಜೊತೆ ಕೋಟಿ ಕಂಠ ಗಾಯನ
Next Article ಹಿಂದುಳಿದವರ ಏಳಿಗೆಗಾಗಿ ಕೆಲಸ ಮಾಡುತ್ತೇವೆ: ಡಿಸಿ ದಿವ್ಯ ಪ್ರಭು
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.