ಯುವ ಜನತೆ ಮತದಾನ ಮಹತ್ವ ಅರಿಯಬೇಕು                                                    

ಜಿಲ್ಲಾ ಸುದ್ದಿ

ಯುವ ಜನತೆ ಮತದಾನ ಮಹತ್ವ ಅರಿಯಬೇಕು
ಜಿ.ಪಂ.ಸಿಇಓ ಎಂ.ಎಸ್.ದಿವಾಕರ್
ಯುವ ಜನತೆ ಮತದಾನದ ಮಹತ್ವವನ್ನು ತಿಳಿದುಕೊಂಡು, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಎಂ.ಎಸ್ ದಿವಾಕರ್ ಹೇಳಿದರು.     
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಪಂಚಾಯತ್ ಮತ್ತು  ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಚುನವಾಣಾ ಆಯೋಗ ಮತ್ತು ರಾಜ್ಯಸರ್ಕಾರವು ಯುವ ಮತದಾರರನ್ನು ಜಾಗೃತಗೊಳಿಸಲು ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. 18 ವರ್ಷ ವಯೋಮಾನ ತಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಮಾಡಿಕೊಳ್ಳಬೇಕು. ತಪ್ಪದೇ ಮತದಾನ ಮಾಡಬೇಕು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್. ರಾಜು ರವರು ಮಾತನಾಡಿ, ಯುವ ಮತದಾರರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಮತ್ತು ಹದಿನೆಂಟು ವರ್ಷ ತುಂಬಿದ ಎಲ್ಲಾ ಮಕ್ಕಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ದೆಸೆಯಲ್ಲಿ ನಮ್ಮ ಇಲಾಖೆಯು ಸೂಕ್ತ ಕ್ರಮಕೈಗೊಂಡಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಜಾಥಾ,ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಬಿತ್ತಿ ಚಿತ್ರ ರಚನೆ ಮುಂತಾದ ಸ್ಪರ್ಧೆಗಳನ್ನು ತಾಲ್ಲೂಕು ಮಟ್ಟದಲ್ಲಿ ಆಯೋಜಿಸಿಲಾಗಿದೆ. ವಿಜೇತರಾದ ವಿದ್ಯಾರ್ಥಿಗಳಿಗೆ ಈಗ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ಭಾರತದ ಭಾವಿ ಪ್ರಜೆಗಳಾದ ತಾವುಗಳು ಪ್ರಾಮಾಣಿಕ ಮತ್ತು ನಿಷ್ಪಕ್ಷಪಾತ ಚುನಾವಣೆಗಳು ನಡೆಯುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ.ಬಿ. ಕೃಷ್ಣಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಕೆ.ನಾಗಣ್ಣ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್ ಮಲ್ಲೇಶ, ಇಎಲ್‍ಸಿ ನೋಡೆಲ್ ಅಧಿಕಾರಿ ದೇವರಾಜ.ಜಿ ಉಪಸ್ಥಿತರಿದ್ದರು. ಉಪನ್ಯಾಸಕ ಆರ್.ಚಂದ್ರಶೇಖರ್ ಸ್ವಾಗತಿಸಿದರು. ಕೆ.ರೇಣುಕಾ ಪ್ರಾರ್ಥಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಡಾ.ಜೆ.ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಬುಡೇನ್‍ಸಾಬ್ ವಂದನಾರ್ಪಣೆ ಮಾಡಿದರು. ಉಪನ್ಯಾಸಕ ಟಿ. ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಯುವರಾಜ್.ಓ,ಸಿದ್ದೇಶ.ಕೆ, ಪ್ರಥಮ ಸ್ಥಾನವನ್ನು ಚಳ್ಳಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅನಿತಾ. ಎನ್,ಮುರುಳಿ.ಎಂ, ದ್ವೀತಿಯ ಸ್ಥಾನವನ್ನು ಹೊಸದುರ್ಗ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದರ್ಶನ್.ಆರ್,ಕುಶಾಲ್.ಟಿ ತೃತಿಯ ಸ್ಥಾನವನ್ನು ಪಡೆದುಕೊಂಡರು.
ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಚಿತ್ರದುರ್ಗ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿಪೂರ್ವ ಕಾಲೇಜಿನ ನಮಿತಾ.ಜೆ, ಮಧುರೈ ಶ್ರೀ ಚನ್ನಕೇಶವಸ್ವಾಮಿ ಪದವಿ ಪೂರ್ವ ಕಾಲೇಜಿನ ಬಿಂದುಶ್ರೀ, ತಾಳ್ಯ ಶ್ರೀ ಅಂಜನೇಯಸ್ವಾಮಿ ಪದವಿ ಪೂರ್ವ ಕಾಲೇಜಿ ಸೌಂದರ್ಯ ಹಾಗೂ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಚಿತ್ರದುರ್ಗ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿಪೂರ್ವ ಕಾಲೇಜಿನ ಆರ್.ಬೀಬಿ ಆಯಿಷಾ, ಹಿರಿಯೂರು ನಂದೀಹಳ್ಳಿ ಅಸೆಂಟ್ ಪದವಿ ಪೂರ್ವ ಕಾಲೇಜಿನ ನಂದನ್.ಜಿ, ಹೊಳಲ್ಕೆರೆ, ವಾಗ್ದೇವಿ ಪದವಿ ಪೂರ್ವ ಕಾಲೇಜಿನ ಪ್ರಿಯಾಂಕಾ.ಹೆಚ್.ಕೆ ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ  ಪಡೆದುಕೊಂಡರು.
ಬಿತ್ತಿಚಿತ್ರ ರಚನೆಯಲ್ಲಿ ಹಿರಿಯೂರು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಕ್ಷಿತಾ.ಎಸ್, ಮೊಳಕಾಲ್ಮೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾಶ್ರೀ, ಹಾಗೂ ಹೊಸದುರ್ಗ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದರ್ಶನ್ ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ  ಪಡೆದುಕೊಂಡರು.

 

 

 

Leave a Reply

Your email address will not be published. Required fields are marked *