Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ತೀವ್ರ ಅತಿಸಾರಭೇದಿ ನಿಯಂತ್ರಣ ಪಾಕ್ಷಿಕಕ್ಕೆ ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ನಂದಿನಿದೇವಿ ಚಾಲನೆ
ಆರೋಗ್ಯ

ತೀವ್ರ ಅತಿಸಾರಭೇದಿ ನಿಯಂತ್ರಣ ಪಾಕ್ಷಿಕಕ್ಕೆ ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ನಂದಿನಿದೇವಿ ಚಾಲನೆ

D KumaraswamyBy D KumaraswamyAugust 1, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ತೀವ್ರ ಅತಿಸಾರಭೇದಿ ನಿಯಂತ್ರಣ ಪಾಕ್ಷಿಕಕ್ಕೆ ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ನಂದಿನಿದೇವಿ ಚಾಲನೆ
ಓ.ಆರ್.ಎಸ್, ಝಿಂಕ್ ಅತಿಸಾರ ಭೇದಿಗೆ ಪರಿಣಾಮಕಾರಿ ಚಿಕಿತ್ಸೆ
ಓ.ಆರ್.ಎಸ್ ಮತ್ತು ಝಿಂಕ್ ಅತಿಸಾರಭೇದಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ ತಿಳಿಸಿದರು.

ಇಲ್ಲಿನ ಬುದ್ಧನಗರದ ನಗರ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ತೀವ್ರ ಅತಿಸಾರಭೇದಿ ನಿಯಂತ್ರಣ ಪಾಕ್ಷಿಕ ಮತ್ತು ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅತಿಸಾರಭೇದಿಯಿಂದ ಯಾವುದೇ ಮಗುವಿನ ಸಾವು ಸಂಭವಿಸಬಾರದು. ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಎಲ್ಲಾ ಸಮನ್ವಯ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸಿ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಮಾತನಾಡಿ, ಬೇರೆ ರಾಜ್ಯಗಳ ಮಾನದಂಡಗಳನ್ನು ಹೋಲಿಸಿದಾಗ ನಮ್ಮ ಜಿಲ್ಲೆಯಲ್ಲಿ ಅತಿಸಾರಭೇದಿಯಿಂದ ಮಗುವಿನ ಸಾವಿನ ಪ್ರಮಾಣ ಬಹಳ ಕಡಿಮೆಯಿದೆ. ಇಂದಿನಿಂದ ಆಗಸ್ಟ್ 14 ರವರೆಗೂ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನಗರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸುರಕ್ಷತಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಗುಂಪು ಸಭೆ, ತಾಯಂದಿರ ಸಭೆಗಳನ್ನು ಹಮ್ಮಿಕೊಂಡು ಓ.ಆರ್.ಎಸ್.ದ್ರಾವಣ ತಯಾರಿಸುವ ವಿಧಾನ, ಝಿಂಕ್ ಮಾತ್ರೆ ವಿತರಣೆ, ಕೈಗಳ ಸ್ವಚ್ಛತೆ, ತಾಯಿ ಹಾಲಿನ ಮಹತ್ವದ ಬಗ್ಗೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ನಡೆಸುವರು ಎಂದರು.
ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾತನಾಡಿ, ಈ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಗತ್ಯ ಐ.ಇ.ಸಿ. ಪರಿಕರಗಳನ್ನು ವಿತರಿಸಲಾಗಿದೆ. ಗ್ರಾಮ ಆರೋಗ್ಯ ಪೌಷ್ಠಿಕ ದಿನಗಳಲ್ಲಿ ತೀವ್ರ ಅತಿಸಾರಭೇದಿ ನಿಯಂತ್ರಣ, ವಿಶ್ವ ಸ್ತನ್ಯಪಾನ ಸಪ್ತಾಹದ ಬಗ್ಗೆ ಸಭೆಗಳಲ್ಲಿ ಮಾಹಿತಿ ಶಿಕ್ಷಣ ನೀಡಲು ಕ್ರಮ ಕೈಗೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮಕ್ಕಳಿಗೆ ಓ.ಆರ್.ಎಸ್ ಪಾನಕ ಕುಡಿಸಿ, ಎದೆಹಾಲಿನ ಮಹತ್ವವನ್ನು ಸಾರುವ ಬಿತ್ತಿಪತ್ರಗಳನ್ನು ಪ್ರದರ್ಶಿಸಿ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಕೆಂಪಹನುಮಯ್ಯ, ಸಹಾಯಕ ಶಿಕ್ಷಣಾಧಿಕಾರಿ ಇನಾಯತ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಗೌರಮ್ಮ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಜಿಲ್ಲಾ ಪಂಚಾಯಿತಿಯ ಸಾಮಾಜಿಕ ವರ್ತನೆ ಬದಲಾವಣೆ ಸಂಯೋಜನಕ ಸುನಿಲ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ, ಜಾನಕಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಕಾತ್ಯಾಯಣಮ್ಮ, ಶ್ರೀಧರ್, ಗಂಗಾಧರ್, ಆಶಾ ಅಂಗನವಾಡಿ ಕಾರ್ಯಕರ್ತೆಯರು, ತಾಯಿ ಮಕ್ಕಳು ಇದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಶಿಕ್ಷಕರ ಮೇಲಿನ ನಂಬಿಕೆ ಹುಸಿಗೊಳಿಸ ಬೇಡಿ
Next Article ಗುಡ್ಡ ಜರುಗಿ ಮನೆ ಕುಸಿದು ಮಣ್ಣಿನ ಕೆಳಗೆ ನಾಲ್ಕೈದು ಮಂದಿ ‌ ಸಿಲುಕಿದ್ದಾರೆ
D Kumaraswamy
  • Tumblr

Related Posts

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ- ಡಿ.ಸಿ. ವೆಂಕಟೇಶ್ ಸೂಚನೆ

March 25, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.