Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ: ತ್ವರಿತ ಪರಿಹಾರ ಕಾರ್ಯಗಳಿಗೆ ಸೂಚನೆ,ಗ್ರಾಮದಲ್ಲಿ ಪಡಿತರ ವಿತರಣೆಗೆ ಕ್ರಮ
ರಾಜ್ಯ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ: ತ್ವರಿತ ಪರಿಹಾರ ಕಾರ್ಯಗಳಿಗೆ ಸೂಚನೆ,ಗ್ರಾಮದಲ್ಲಿ ಪಡಿತರ ವಿತರಣೆಗೆ ಕ್ರಮ

D KumaraswamyBy D KumaraswamyAugust 21, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ: ತ್ವರಿತ ಪರಿಹಾರ ಕಾರ್ಯಗಳಿಗೆ ಸೂಚನೆ,ಗ್ರಾಮದಲ್ಲಿ ಪಡಿತರ ವಿತರಣೆಗೆ ಕ್ರಮ

 

 

ಇತ್ತೀಚೆಗೆ ಸುರಿದ ಹೆಚ್ಚಿನ ಮಳೆಯಿಂದ ಹಾನಿಗೊಳಗಾದ ಚಿತ್ರದುರ್ಗ ತಾಲ್ಲೂಕಿನ ಓಬಣ್ಣನಹಳ್ಳಿ, ಚಳ್ಳಕೆರೆ ನಗರ, ಚಳ್ಳಕೆರೆ ತಾಲ್ಲೂಕು ಮನಮೈನಹಟ್ಟಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗ ತಾಲ್ಲೂಕಿನ ಓಬಣ್ಣನಹಳ್ಳಿ ಗ್ರಾಮದಲ್ಲಿ ಕಳೆದೆರಡು ದಿನಗಳ ಹಿಂದೆ ಹೆಚ್ಚಿನ ಮಳೆ ಸುರಿದ ಪರಿಣಾಮ ಸುಮಾರು 41 ಮನೆಗಳಿಗೆ ನೀರು ನುಗ್ಗಿದ ಘಟನೆ ವರದಿಯಾಗಿತ್ತು. ಹೆಚ್ಚಿನ ಮಳೆಯಿಂದಾಗಿ ಓಬಣ್ಣನಹಳ್ಳಿ ಗ್ರಾಮದ ಗುಡ್ಡದ ಮೇಲಿನಿಂದ ಬರುವ ಸಣ್ಣ ನೈಸರ್ಗಿಕ ಹಳ್ಳ ತುಂಬಿ ಹರಿದ ಪರಿಣಾಮವಾಗಿ ಗ್ರಾಮದ 41 ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿ 06 ಮನೆಗಳು ಭಾಗಶಃ ಹಾನಿಗೆ ಒಳಗಾಗಿರುವುದು ಹಾಗೂ ಮನೆಗಳಿಗೆ ನೀರು ನುಗ್ಗಿ ಮನೆಯ ಸಾಮಾಗ್ರಿಗಳು ಹಾನಿಗೀಡಾಗಿರುವುದನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಳೆ ನೀರು ಸರಾಗವಾಗಿ ಹರಿದು ಹೋಗಲು ಹಳ್ಳದಲ್ಲಿ ತುಂಬಿದ ಮಣ್ಣನ್ನು ಶೀಘ್ರ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯಿಂದ ನೀರು ನುಗ್ಗಿ ಹಾನಿಗೆ ಒಳಗಾಗಿರುವ ಮನೆಗಳಿಗೂ ತೆರಳಿ, ಮನೆಯವರಿಂದಲೂ ಮಾಹಿತಿ ಪಡೆದುಕೊಂಡರು. ಮಳೆಯಿಂದ ಹಲವಾರು ಮನೆಯವರ ರೇಷನ್, ಮಕ್ಕಳ ಪುಸ್ತಕಗಳು, ಸಾಮಾಗ್ರಿಗಳು ಹಾನಿಯಾಗಿರುವ ಬಗ್ಗೆಯೂ ಮಾಹಿತಿ ಪಡೆದು, ಹಾನಿಗೊಳಗಾದವರಿಗೆ ನಿಯಮಾನುಸಾರ ಪರಿಹಾರ ದೊರಕಿಸುವುದಾಗಿ ಹೇಳಿದ ಅವರು, ಮಳೆಯಿಂದ ಹಾನಿಗೊಳಗಾದ ಗ್ರಾಮಸ್ಥರ ಅನುಕೂಲಕ್ಕಾಗಿ ಆಹಾರ ಇಲಾಖೆಯಿಂದ ಗಾಮದಲ್ಲಿಯೇ ಕೂಡಲೆ ಪಡಿತರ ವಿತರಣೆ ಮಾಡಲು ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮದಲ್ಲಿ ಮಳೆಯ ನೀರು ಸರಾಗವಾಗಿ ಹರಿದುಹೋಗಲು ಇರುವ ಅಡ್ಡಿಯನ್ನೂ ನಿವಾರಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ. ನಾಗವೇಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಚಳ್ಳಕೆರೆ ತಾಲ್ಲೂಕಿಗೆ ಭೇಟಿ: ಚಳ್ಳಕೆರೆ ತಾಲ್ಲೂಕಿನ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಳ್ಳಕೆರೆ ತಾಲ್ಲೂಕಿನ ಮನಮೈನಹಟ್ಟಿ ಹಾಗೂ ಚಳ್ಳಕೆರೆ ನಗರದ ಪರಶುರಾಂಪುರ ರಸ್ತೆ, ಬಳ್ಳಾರಿ ರಸ್ತೆಯ ಹಾಗೂ ರಹೀಂನಗರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಸೂಕ್ತ ಕ್ರಮವಹಿಸಬೇಕು, ಮನೆ ಹಾನಿ ಸಂಭವಿಸಿದ್ದಲ್ಲಿ ನಿಯಮಾನುಸಾರ ತ್ವರಿತವಾಗಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ತಹಶೀಲ್ದಾರ್ ರೆಹಾನ್ ಪಾಷಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಗವರ್ನರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ: ಮಾಜಿ ಸಚಿವ ಹೆಚ್. ಆಂಜನೇಯ ಆರೋಪ
Next Article ಹೊಸದುರ್ಗ ಪುರಸಭೆ ಬಿಜೆಪಿ ತೆಕ್ಕೆಗೆ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.