Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ
ಆರೋಗ್ಯ

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

D KumaraswamyBy D KumaraswamyMay 20, 2025Updated:May 20, 2025No Comments10 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

  1.  1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ
    ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ.
    – ಸಿ.ಎಂ.ಸಿದ್ದರಾಮಯ್ಯ
    ಹೊಸಪೇಟೆ (ವಿಜಯನಗರ ಜಿಲ್ಲೆ) ಮೇ. 20:
    ರಾಜ್ಯದಲ್ಲಿನ ಜನವಸತಿ ಪ್ರದೇಶಗಳಾದ ಹಟ್ಟಿ, ತಾಂಡಾ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ರಚಿಸಿ, 1,11,111 ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸುವ ಮೂಲಕ ಸರ್ಕಾರದ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದ್ದು, ಮುಂದಿನ ಆರು ತಿಂಗಳೊಳಗಾಗಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಆಸ್ತಿ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
    ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಕಂದಾಯ ಇಲಾಖೆಯಿಂದ ಮಂಗಳವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ “ಪ್ರಗತಿಯತ್ತ ಕರ್ನಾಟಕ – ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ ಸಾಂಕೇತಿಕವಾಗಿ ಫಲಾನುಭವಿ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಹಟ್ಟಿ, ತಾಂಡಾ, ಹಾಡಿ ಮುಂತಾದ ಜನವಸತಿ ಪ್ರದೇಶಗಳಲ್ಲಿನ ಬಡ ಕುಟುಂಬಗಳು ವಾಸಿಸುವ ಮನೆಗಳಿಗೆ ಯಾವುದೇ ಹಕ್ಕಾಗಲಿ, ದಾಖಲೆಗಳಾಗಲಿ ಇರಲಿಲ್ಲ, ಇಂತಹವರಿಗೆ ಹಕ್ಕುಪತ್ರಗಳನ್ನು ಕೊಟ್ಟು, ಅವರು ನೆಮ್ಮದಿಯಿಂದ ಬದುಕಬೇಕೆಂಬುದು ನಮ್ಮ ಸರ್ಕಾರದ ಆಶಯವಾಗಿದೆ. ಹಲವು ದಶಕಗಳಿಂದಲೂ ಇದು ನೆನೆಗುದಿಗೆ ಬಿದ್ದಿತ್ತು. 2015 ರಲ್ಲಿ ಕಾಗೋಡು ತಿಮ್ಮಪ್ಪ ಅವರು ಕಂದಾಯ ಮಂತ್ರಿಯಾಗಿದ್ದಾಗ, ಈ ಕಾರ್ಯಕ್ಕೆ ವೇಗ ನೀಡಲಾಯಿತು. “ಉಳುವವನೇ ಭೂಮಿಯ ಒಡೆಯ” ಎಂದು ಈ ಹಿಂದೆ ನಮ್ಮ ಪಕ್ಷದ ಸರ್ಕಾರ ಇದ್ದಾಗ ಘೋಷಿಸಿ, ಕಾರ್ಯರೂಪಕ್ಕೆ ತಂದರೆ ನಾವು “ವಾಸಿಸುವವನೇ ಮನೆಯ ಒಡೆಯ” ಎಂದು ಘೋಷಿಸಿದ್ದೆವು. ಹಟ್ಟಿ, ಹಾಡಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿ ಇಲ್ಲಿ ವಾಸಿಸುತ್ತಿರುವ ಜನರಿಗೆ ಭದ್ರತೆ ಕೊಟ್ಟು, ಅವರ ಮನೆಯ ಆಸ್ತಿಗಳನ್ನು ಅವರ ಹೆಸರಿಗೆ ನೊಂದಾಣಿ ಮಾಡಿಸಿ, ಹಕ್ಕುಪತ್ರವನ್ನು ವಿತರಿಸುವಂತಹ ಬಹುದೊಡ್ಡ ಕಾರ್ಯವನ್ನು ನಾವು ಮಾಡಿದ್ದೇವೆ. ರಾಹುಲ್ ಗಾಂಧಿ ಅವರ ಆಶಯದಂತೆ, ರಾಜ್ಯದಲ್ಲಿನ ಎಲ್ಲಾ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ರಚಿಸಿ, ಬಾಕಿ ಉಳಿದಿರುವ 50 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೂ ಹಕ್ಕುಪತ್ರ ವಿತರಿಸಲಾಗುವುದು ಎಂದರು.
    ಪAಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಮಾತು ಕೊಟ್ಟಿದ್ದೆವು, ಅದರಂತೆ ನಮ್ಮ ಸರ್ಕಾರ ಬಂದ ಒಂದು ವರ್ಷದೊಳಗೆ ಶಕ್ತಿ, ಗೃಹಜ್ಯೋತಿ, ಗೃಹಲಕ್ಷಿö್ಮÃ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ.
    ದೇಶದಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಮಾದರಿಯಾಗಿ ಅನುಷ್ಟಾನಗೊಳಿಸಲಾಗಿದೆ. ಶಕ್ತಿ ಯೋಜನೆಯಡಿ ರಾಜ್ಯದ 3.5 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ರಾಜ್ಯದ 1.62 ಕೋಟಿ ಕುಟುಂಬಗಳಿಗೆ 200 ಯುನಿಟ್‌ವರಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. 1.22 ಕೋಟಿ ಮನೆ ಯಜಮಾನಿಯರಿಗೆ ಗೃಹಲಕ್ಷಿö್ಮ ಯೋಜನೆಯಡಿ ತಿಂಗಳಿಗೆ 2 ಸಾವಿರ ರೂ.ಗಳ ಪ್ರೋತ್ಸಾಹ ಧನವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.42 ಕೋಟಿ ಬಿಪಿಎಲ್ ಪಡಿತರದಾರರ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ಪಡೆಯುತ್ತಿದ್ದಾರೆ. 2.67 ಲಕ್ಷ ಯುವಕ, ಯುವತಿಯರು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿದ್ದಾರೆ. ಈ ಎಲ್ಲ ಗ್ಯಾರಂಟಿ ಯೋಜನೆಗಳು ಯಾವುದೇ ಜಾತಿ, ಧರ್ಮ, ಪಕ್ಷ ಎನ್ನುವ ಭೇದವಿಲ್ಲದೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಶಕ್ತಿ ಕೊಡುವ ಕಾರ್ಯಕ್ರಮಗಳಾಗಿವೆ. ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಬಹುತ್ವ ಇರುವ ನಮ್ಮ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆ ಕಾಣುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.
    ರಾಜ್ಯಕ್ಕೆ ಅನ್ಯಾಯ : ಕಳೆದ ಎರಡು ವರ್ಷಗಳಲ್ಲಿ ಕೇಂದ್ರದಿAದ ನಮ್ಮ ರಾಜ್ಯಕ್ಕೆ ಬಹಳ ಅನ್ಯಾಯವಾಗಿದೆ. ತೆರಿಗೆ ಪಾಲಿನಲ್ಲಿ ನಮಗೆ ಬರಬೇಕಿದ್ದ ಪಾಲು ಬಂದಿಲ್ಲ. 4.5 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡುತ್ತಿದೆ. ಈ ಪೈಕಿ ನಮಗೆ ಕೇವಲ 65 ಸಾವಿರ ಕೋಟಿ ರೂ. ಮಾತ್ರ ಬರುತ್ತಿದೆ. 13 ಸಾವಿರ ಕೋಟಿ ರೂ. ನಮಗೆ ನಷ್ಟವಾಗುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳ ಮೊತ್ತವೂ ಕಡಿತವಾಗುತ್ತಿದ್ದು, 22 ಸಾವಿರ ಕೋಟಿ ರೂ.ಗಳ ಪೈಕಿ 18 ಸಾವಿರ ಕೋಟಿ ರೂ. ಮಾತ್ರ ಬಂದಿದೆ. ಇನ್ನೂ 4 ಸಾವಿರ ಕೋಟಿ ರೂ. ಬರಲಿಲ್ಲ. ಹಣಕಾಸು ಆಯೋಗ ಹೇಳಿದಂತೆ 5,495 ಕೋಟಿ ರೂ. ನಮಗೆ ಬಿಡುಗಡೆ ಆಗಬೇಕಿತ್ತು, ಈ ಪೈಕಿ ಯಾವುದೇ ಅನುದಾನ ಬರಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗಾಗಿ 5,300 ಕೋಟಿ ರೂ. ಗಳನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಯಿತು. ಆದರೆ ಈವರೆಗೂ ಹಣ ಬಿಡುಗಡೆ ಆಗಲೇ ಇಲ್ಲ. ನಮ್ಮ ರಾಜ್ಯದ ಲೋಕಸಭಾ ಸದಸ್ಯರು ಒಗ್ಗೂಡಿ, ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
    ********ಇಂದಿರಾ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ
    ಲೋಕಸಭಾ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿ.
    ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಸರ್ಕಾರದ 6 ನೇ ಗ್ಯಾರಂಟಿ : ರಾಹುಲ್ ಗಾಂಧಿ ಹೇಳಿಕೆ.
    ಹೊಸಪೇಟೆ (ವಿಜಯನಗರ ಜಿಲ್ಲೆ) ಮೇ. 20 (ಕರ್ನಾಟಕ ವಾರ್ತೆ) : ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಸಮಾವೇಶ ಉದ್ಘಾಟಿಸಿ ಇದೇ ವೇಳೆ ಉಕ್ಕಿನ ಮಹಿಳೆ ಇಂದಿರಾಗಾAಧಿಯವರ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.
    ನಾವು ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಜನತೆಗೆ ನೀಡಿದ್ದ ಎಲ್ಲ ಪಂಚ ಗ್ಯಾರಂಟಿ ಯೋಜನೆಯ ಭರವಸೆಗಳನ್ನು ಈಡೇರಿಸಿದ್ದೇವೆ. ಪಂಚ ಗ್ಯಾರಂಟಿ ಯೋಜನೆಯಡಿ ನಾವು ನೀಡುತ್ತಿರುವ ಹಣ ಜನರ ಶಿಕ್ಷಣ, ಆರೋಗ್ಯ ಮುಂತಾದವುಗಳಿಗೆ ಸದ್ಬಳಕೆಯಾಗುತ್ತಿದೆ. ಬಡವರು, ಹಿಂದುಳಿದವರು, ಬುಡಕಟ್ಟು ಸಮುದಾಯದವರಿಗೆ ನೀಡುತ್ತಿರುವ ನಮ್ಮ ಸರ್ಕಾರದ ಹಣ ನೇರ ಖಾತೆ ಸೇರುತ್ತದೆ. ಅದೇ ಹಣ ಮಾರುಕಟ್ಟೆಯಲ್ಲಿ ಉತ್ಪಾದನೆ ಹೆಚ್ಚಿಸುತ್ತದೆ. ಸಾಮಾನ್ಯ ಜನರಿಗೆ ಕೊಂಡುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ. ಇದರಿಂದ ಪ್ರತಿ ಗ್ರಾಮದಲ್ಲೂ ಹಣದ ವಹಿವಾಟು ಹೆಚ್ಚಳವಾಗುತ್ತಿದ್ದು, ಸರ್ಕಾರದ ಆರ್ಥಿಕ ಸ್ಥಿತಿ ಸುಧಾರಣೆ ಆಗುತ್ತಿದೆ.
    ವಿಧಾನಸಭೆ ಚುನಾವಣೆ ವೇಳೆಯಲ್ಲಿ ನಾನು ರಾಜ್ಯಕ್ಕೆ ಬಂದAತಹ ಸಂದರ್ಭದಲ್ಲಿ, ಇಲ್ಲಿನ ಹಟ್ಟಿ, ತಾಂಡಾ ಮುಂತಾದ ಜನವಸತಿ ಪ್ರದೇಶಗಳಲ್ಲಿನ ಲಕ್ಷಾಂತರ ಕುಟುಂಬಗಳು ಯಾವುದೇ ದಾಖಲೆಗಳಿಲ್ಲದೆ, ಭದ್ರತೆ ಇಲ್ಲದೆ ಬದುಕುತ್ತಿದ್ದಾರೆ ಎಂಬ ಮಾಹಿತಿ ಪಡೆದುಕೊಂಡಿದ್ದೆ. ಆಗಲೇ ನಾವು ಚರ್ಚಿಸಿ, ಅಂತಹ ಬಡ ಕುಟುಂಬಗಳು ವಾಸಿಸುವ ಮನೆಗಳಿಗೆ ಹಕ್ಕುಪತ್ರ ನೀಡಿ, ಅವರಿಗೆ ನೆಮ್ಮದಿ ಕಲ್ಪಿಸಲು ನಿರ್ಧರಿಸಿದ್ದೆವು. ಅದರಂತೆ ಈಗ ನಾವು 6 ನೇ ಗ್ಯಾರಂಟಿಯಾಗಿ ಕಂದಾಯ ಗ್ರಾಮಗಳನ್ನು ರಚಿಸಿ, ರಾಜ್ಯದ 1 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡಿ, ಬದುಕಿಗೆ ಭದ್ರತೆ ನೀಡಿದ್ದೇವೆ. ರಾಜ್ಯದ ಜನವಸತಿ ಪ್ರದೇಶಗಳಲ್ಲಿ ದಾಖಲೆಗಳಿಲ್ಲದೇ ವಾಸಿಸುತ್ತಿರುವ ಆಸ್ತಿಯ ಹಕ್ಕುಪತ್ರ ಕೊಟ್ಟು, ಅವರು ನೆಮ್ಮದಿಯಿಂದ ಬದುಕು ನಡೆಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ.
    ರಾಜ್ಯದಲ್ಲಿ ಎರಡು ಸಾವಿರ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತಿದ್ದೇವೆ. ತಂತ್ರಜ್ಞಾನವನ್ನು ಬಳಸಿಕೊಂಡು ಬಡಕುಟುಂಬಗಳ ಜನರ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ನೀಡುತ್ತಿದ್ದೇವೆ. ಇದರಿಂದ ಜನರು ಶಾಶ್ವತ ನೆಮ್ಮದಿ ಕಾಣಲು ಸಾಧ್ಯ. ಬಡಕುಟುಂಬಗಳಿಗೆ ಡಿಜಿಟಲೀಕರಣಗೊಳಿಸಿದ ಆಸ್ತಿ ದಾಖಲೆ ಹಕ್ಕುಪತ್ರಗಳನ್ನು ನೀಡುವ ಮೂಲಕ ಎಲ್ಲಾ ದಾಖಲೆಗಳನ್ನು ನಿಖರವಾಗಿ ನೀಡುವುದಾಗಿದೆ. ರಾಜ್ಯದಲ್ಲಿ ಬಾಕಿಯಿರುವ ಇನ್ನೂ 50 ಸಾವಿರ ಕುಟುಂಬಗಳಿಗೆ ಬರುವ 06 ತಿಂಗಳಿನಲ್ಲಿ ಹಕ್ಕುಪತ್ರಗಳನ್ನು ನೀಡುತ್ತೇವೆ. ಯಾವುದೇ ಗ್ರಾಮ, ಕುಟುಂಬಗಳು ಆಸ್ತಿ ದಾಖಲೆಗಳಿಲ್ಲದೇ ಇರಬಾರದು ಎನ್ನುವುದು ನಮ್ಮ ಉದ್ದೇಶವಾಗಿದೆ. ರಾಜ್ಯದಲ್ಲಿ ರಚಿಸಲಾಗಿರುವ ಗ್ಯಾರಂಟಿ ಅನುಷ್ಠಾನ ಸಮಿತಿಯವರು ಇಂತಹ ಕುಟುಂಬಗಳನ್ನು ಗುರುತಿಸಿ, ಅವರಿಗೆ ದಾಖಲೆ ನೀಡುವ ಮೂಲಕ ಇಡೀ ದೇಶದಲ್ಲಿಯೇ ಕರ್ನಾಟಕ ಮಾದರಿ ರಾಜ್ಯವಾಗಲಿದೆ.
    ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ನಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬರುವಾಗ ಏನೇನು ಭರವಸೆಗಳನ್ನು ನೀಡಿದ್ದೆವೋ, ಅವೆಲ್ಲವುಗಳನ್ನು ಈಡೇರಿಸಿ, ಜನರಿಗೆ ಸವಲತ್ತುಗಳನ್ನು ಕೊಟ್ಟಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರ ಅತ್ಯುತ್ತಮವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಪರಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಪಡೆಯುತ್ತಿರುವ ಬಗ್ಗೆ ಪ್ರಸ್ತಾಪಿಸಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಮೀಸಲಾತಿ ವರ್ಗೀಕರಣದ ಸಮೀಕ್ಷೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಇದನ್ನು ಹೆಚ್ಚು ನಿಖರವಾಗಿ ನಡೆಸಲು ಅಗತ್ಯ ಕ್ರಮ ಕೈಗೊಂಡು ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದರು.
    ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಘಟನೆಯಲ್ಲಿ ಕೇಂದ್ರ ಸರ್ಕಾರದ ರಕ್ಷಣಾ ವೈಫಲ್ಯವೇ ಕಾರಣವಾಗಿದೆ. ಘಟನೆ ನಡೆದ ಸ್ಥಳದಲ್ಲಿ ಯಾವುದೇ ತರದ ಭದ್ರತೆ ಇರಲಿಲ್ಲ. ದೇಶದ ದೃಷ್ಟಿಯಿಂದ ಕೇಂದ್ರ ಸರ್ಕಾರ ಕೈಗೊಂಡ ಎಲ್ಲ ನಿರ್ಧಾರಗಳಿಗೆ ಬೆಂಬಲ ನೀಡಿ, ಒಗ್ಗಟ್ಟು ಪ್ರದರ್ಶಿಸಿದ್ದೇವೆ. ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ಕುಮ್ಮುಕ್ಕು ನೀಡಿ ಭಾರತದಲ್ಲಿ ಉಗ್ರ ಕೃತ್ಯಗಳನ್ನು ನಡೆಸುತ್ತಿದೆ. ಈ ಸಂಗತಿಯನ್ನು ಜಗತ್ತಿನ ಮುಂದೆ ತೆರೆದಿಡಲು ಭಾರತ ಸರ್ಕಾರ ಕಳುಹಿಸುತ್ತಿರುವ ಸರ್ವಪಕ್ಷ ನಿಯೋಗದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರು ಭಾಗಿಯಾಗುವರು ಎಂದರು.
    *****
    ಉಪಮುಖ್ಯಮAತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ
    ಭೂ ಗ್ಯಾರಂಟಿ ಯೋಜನೆ ಜಾರಿ : ಬಡಜನರಿಗೆ ಹಕ್ಕುಪತ್ರ ವಿತರಣೆ.
    ವಿಜಯನಗರ (ಹೊಸಪೇಟೆ), ಮೆ.20 (ಕರ್ನಾಟಕ ವಾರ್ತೆ) : ನಮ್ಮ ಮೇಲೆ ವಿಶ್ವಾಸ ಹಾಗೂ ನಂಬಿಕೆ ಇಟ್ಟು ರಾಜ್ಯದ ಜನತೆ 136 ಸೀಟು ಗೆಲ್ಲಿಸಿ, ಅಧಿಕಾರ ನೀಡಿದ್ದಿರಿ. 5 ಗ್ಯಾರಂಟಿಗಳನ್ನು ಈಗಾಗಲೇ ಜಾರಿ ಮಾಡಿದ್ದೇವೆ. 6ನೇಯದಾಗಿ ಭೂ ಗ್ಯಾರಂಟಿಯನ್ನು ಜಾರಿಗೊಳಿಸಿ ಬಡ ಜನರಿಗೆ ಅವರ ಸ್ವತ್ತಿನ ಹಕ್ಕುಪತ್ರಗಳನ್ನು ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
    ಮಂಗಳವಾರ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ‘ಪ್ರಗತಿಯತ್ತ ಕರ್ನಾಟಕ-ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
    ಎರಡು ವರ್ಷ ಸಂಭ್ರಮ ಆಚರಣೆಗೆ ಈ ಕಾರ್ಯಕ್ರಮ ಆಯೋಜಿಸಿಲ್ಲ. ಬದಲಿಗೆ ರಾಜ್ಯದ ಜನತೆ ಋಣ ತೀರಿಸಲು ಬಂದಿದ್ದೇವೆ. ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರದಲ್ಲಿ ಇರುವರೆಗೂ 5 ಗ್ಯಾರಂಟಿಗಳನ್ನು ಮುಂದುವರಿಸುತ್ತೇವೆ. 6ನೇ ಗ್ಯಾರಂಟಿಯಾಗಿ ಆಸ್ತಿ, ಪಟ್ಟ ಇಲ್ಲದೇ, ಬಹುಕಾಲದಿಂದ ವಾಸವಿದ್ದ ಗ್ರಾಮೀಣ ಭಾಗದ ಬಡ ಜನರಿಗೆ ಅವರ ಹಕ್ಕುಪತ್ರಗಳನ್ನು ನೀಡುವ ಕಾರ್ಯ ಮಾಡಿದ್ದೇವೆ. ಮುಂದಿನಗಳಲ್ಲಿ ನಗರ ಪ್ರದೇಶದಲ್ಲಿ ವಾಸವಿರುವರಿಗೂ ಅವರ ಆಸ್ತಿ ಹಾಗೂ ಸ್ವತ್ತಿನ ಖಾತೆಗಳನ್ನು ಸರಿಪಡಿಸಿ ಸ್ವತ್ತನ್ನು ನೀಡುವ 7ನೇ ಗ್ಯಾರಂಟಿ ನೀಡಲು ಬದ್ದವಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
    ನಾವು ಅಧಿಕಾರ ಬಂದ ಮೇಲೆ ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಯೋಜನೆ ರೂಪಿಸಿದ್ದೇವೆ. ಭ್ರಷ್ಟಾಚಾರಕ್ಕೆ ಬೇಡಿ ಹಾಕಿದ್ದೇವೆ. ಆಡಳಿತದಲ್ಲಿ ಸುಧಾರಣೆ ತಂದಿದ್ದೇವೆ. ಇಂದಿರಾ ಗಾಂಧಿಯವರು ಈ ಜಿಲ್ಲೆಗೆ ಆಗಮಿಸಿ ವಿಜಯನಗರ ಸ್ಟೀಲ್ ಆರಂಭಿಸಿದರು. ಸೋನಿಯಾ ಗಾಂಧಿ ವಿದ್ಯುತ್ ಉತ್ಪಾದನೆ ಕಂಪನಿ ತೆರೆದು ಜಿಲ್ಲೆಗೆ ರೂ.10 ಸಾವಿರ ಕೋಟಿ ನೀಡಿದರು. ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಜ್ಯದಲ್ಲಿ ರಾಹುಲ್ ಗಾಂಧಿಯವರು ಪ್ರವಾಸ ಮಾಡಿದ ಎಲ್ಲ ಸ್ಥಳಗಳಲ್ಲೂ ಕಾಂಗ್ರೇಸ್ ಪಕ್ಷ ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಕಾಂಗ್ರೇಸ್ ಪಕ್ಷದ ಸಂಸದರು ಜಯಗಳಿಸಿದ್ದಾರೆ. ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ರೂ.5000 ವಿಶೇಷ ಅನುದಾನ ನೀಡುತ್ತಿದೆ. ವಿರೋಧ ಪಕ್ಷಗಳು ಆರೋಗ್ಯಕರ ಟೀಕೆ ಟಿಪ್ಪಣಿಗಳನ್ನು ಮಾಡಿದರೆ ಒಳ್ಳೆಯದು. ಟೀಕೆಗಳು ಸಾಯುತ್ತವೆ ಆದರೆ ನಾವು ಮಾಡಿದ ಕೆಲಸಗಳು ಉಳಿಯುತ್ತವೆ. ಇದಕ್ಕೆ ಗ್ಯಾರಂಟಿ ಯೋಜನೆಗಳೇ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
    ತುಂಗಭದ್ರಾ ನದಿ ಭಾಗದಲ್ಲಿನ ಜನರ ನೀರಿನ ಬಣವೆ ತೀರಿಸಿ, ನೀರಾವರಿ ಯೋಜನೆಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ತುಂಗಭದ್ರಾ ಅಣೆಕಟ್ಟೆಗೆ ಸಮನಾಂತರವಾಗಿ ನವಿಲೆ ಬಳಿ ಅಣೆಕಟ್ಟು ನಿರ್ಮಿಸಿ, 24 ಟಿ.ಎಂ.ಸಿ ನೀರನ್ನು ರಾಜ್ಯಕ್ಕೆ ಉಳಿಸಿಕೊಳ್ಳಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಆದರೆ ಇದಕ್ಕೆ ಆಂದ್ರ ಮತ್ತು ತೆಲಂಗಾಣ ಸರ್ಕಾರಗಳು ಅನುಮತಿ ನೀಡಿಲ್ಲ. ತುಂಗಭದ್ರಾ ಮಂಡಳಿಯಲ್ಲಿ ಯೋಜನೆ ಪ್ರಸ್ತಾವ ಇರಿಸಿಸಲಾಗಿದೆ. ರಾಜ್ಯದಲ್ಲಿ ಅಭಿವೃದ್ಧಿಗೆ ಒತ್ತು ನೀಡಿದ್ದು, ಗ್ಲೋಬಲ್ ಇನ್ವೆಸ್ಟರ್ ಮೀಟ್‌ನಲ್ಲಿ ರೂ.10,000 ಕೋಟಿ ಬಂಡವಾಳ ಹೂಡಲು ಉದ್ದಿಮೆದಾರರು ಮುಂದೆ ಬಂದಿದ್ದಾರೆ. ಉದ್ಯೋಗ ಸೃಜನೆ ಆದ್ಯತೆ ನೀಡಿದ್ದೇವೆ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ‘ಗ್ರಾಮೀಣ ಫಥ’ ಎನ್ನುವ ಯೋಜನೆ ರೂಪಿಸಲಾಗಿದೆ. ಇದೇ ರೀತಿಯಲ್ಲಿ ಪ್ರವಾಸೋದ್ಯಮ ಸೇರಿದಂತೆ ಎಲ್ಲ ಇಲಾಖೆಗಳಲ್ಲೂ ಜನರಿಗೆ ಒಳಿತಾಗುವ ಅಭಿವೃದ್ದಿ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ನುಡಿದಂತೆ ನಡೆದು ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಹಕ್ಕುಪತ್ರ ನೀಡಲು ಶ್ರಮಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಎಲ್ಲಾ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
    *****ತಾಂಡಾ, ಹಾಡಿ, ಹಟ್ಟಿ ಜನರಿಗೆ ದೊರೆತ ಮನೆಹಕ್ಕು ಪತ್ರ
    ಅನಿಶ್ಚಿತ ಬದುಕಿಗೆ ನಿಶ್ಚಿತತೆಯ ಆಧಾರ ಕಲ್ಪಿಸಿ ಸಮರ್ಪಣೆ
    ಸಮರ್ಪಣೆ ಸಂಕಲ್ಪ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿಕೆ
    ವಿಜಯನಗರ (ಹೊಸಪೇಟೆ), ಮೆ.20 (ಕರ್ನಾಟಕ ವಾರ್ತೆ) :
    ಲಂಬಾಣಿ, ಬೋವಿ, ಗೊಲ್ಲ, ಕಾವಲಿ, ಸೊಲಿಗ, ಕಾಡು ಕುರುಬ, ನಾಯಕ ಹಾಗೂ ಅಲೆಮಾರಿಗಳು ವಾಸಿಸುವ ತಾಂಡ, ಹಾಡಿ, ಹಟ್ಟಿ, ಬಜೆರೆ, ಕ್ಯಾಂಪ್ ಸೇರಿದಂತೆ ದಾಖಲೆ ರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಸರ್ಕಾರದಿಂದ ಶಾಶ್ವತ ಪರಿಹಾರ ದೊರಕಿಸಲಾಗಿದೆ. 1,11,111 ಕುಟುಂಬಗಳಿಗೆ ಮನೆ ಹಕ್ಕುಪತ್ರ ನೀಡಲಾಗುತ್ತಿದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
    ಮಂಗಳವಾರ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ‘ಪ್ರಗತಿಯತ್ತ ಕರ್ನಾಟಕ-ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.
    ದಾಖಲೆಗಳು ಇಲ್ಲದೆ ಇರುವ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನು ಪರಿವರ್ತಿಸಿ, ಅಲ್ಲಿ ವಾಸಿಸುವ ಕುಟುಂಬಗಳಿಗೆ ಮನೆಗಳಿಗೆ ಹಕ್ಕುಪತ್ರ ನೀಡಿ, ಊರಿಗೊಂದು ಗೌರವ, ಮನೆಗೊಂದು ವಿಳಾಸ, ಬದುಕಿಗೊಂದು ನೆಮ್ಮದಿಯನ್ನು ರಾಜ್ಯ ಸರ್ಕಾರ ನೀಡಿದೆ. ಶತಮಾನಗಳಿಂದ ಜನವಸತಿ ಇದ್ದರೂ, ಗ್ರಾಮ ಎನ್ನುವ ಮಾನ್ಯತೆ ಇಲ್ಲದೆ ಕಾರಣ ಈ ಊರುಗಳಿಗೆ ಸೌಕರ್ಯ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕುಟುಂಬಗಳು ಆಶ್ರಯ ಯೋಜನೆಯ ಲಾಭವನ್ನು ಸಹ ಪಡೆಯಲಾಗುತ್ತಿರಲಿಲ್ಲ. ಮನೆ ಆಸ್ತಿ ವರ್ಗಾವಣೆಯು ಸಾಧ್ಯವಿರಲಿಲ್ಲ. ಈ ಸಮಸ್ಯೆಗಳಿಗೆ ಸರ್ಕಾರ ಅಂತ್ಯ ಹಾಡಿದೆ. ಸರ್ಕಾರ ಬರಿ ಹಕ್ಕು ಪತ್ರಗಳನ್ನು ಮಾತ್ರ ನೀಡುತ್ತಿಲ್ಲ. ನೋಂದಣಿ ಕಚೇರಿಯಲ್ಲಿ ಸ್ವತಃ ತಹಶೀಲ್ದಾರರು ಮನೆ ಆಸ್ತಿಯನ್ನು ವಾರಸುದಾರರಿಗೆ ನೋಂದಣಿ ಮಾಡಿಕೊಡುತ್ತಾರೆ. ಗ್ರಾಮ ಪಂಚಾಯಿತಿಯಿAದ ಫಾರಂ-11ಇ ಸೇರಿದಂತೆ ಖಾತೆ ದಾಖಲೆಗಳನ್ನು ಸಹ ನೀಡಲಾಗುತ್ತದೆ. ಅನಿಶ್ಚಿತತೆಯ ಬದುಕಿಗೆ ನಿಶ್ಚಿತತೆಯ ಆಧಾರ ಕಲ್ಪಿಸಿ ಇಂದು ಜನರಿಗೆ ಸಮರ್ಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
    ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಸಂದಿದೆ. ಜನರು ನೀಡಿದ ಅಧಿಕಾರವನ್ನು ಜನರ ಸೇವೆಗಾಗಿಯೇ ಮುಡಿಪು ಇಟ್ಟಿದ್ದೇವೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಇದುವರೆಗೂ ರೂ.90 ಸಾವಿರ ಕೋಟಿಯಷ್ಟು ಹಣವನ್ನು, ರಾಜ್ಯದ 5 ಕೋಟಿ ಜನರಿಗೆ ನೇರವಾಗಿ ತಲುಪಿಸುವ ಮೂಲಕ ಜನರಿಗೆ ಶಕ್ತಿ ತುಂಬಲಾಗಿದೆ. ಕಂದಾಯ ಇಲಾಖೆಯ ದಶಕಗಳ ಸಮಸ್ಯೆಗಳಿಗೆ ಪರಿಹಾರ ನೀಡಿದ್ದೇವೆ. ಜನರನ್ನು ಕಚೇರಿಗೆ ಅಲೆದಾಡಿಸದೇ ಮನೆ ಬಾಗಿಲಿಗೆ ತೆರಳಿ ಸೇವೆ ನೀಡುತ್ತಿದ್ದೇವೆ. ತಂತ್ರಜ್ಞಾನ ಹಾಗೂ ಹೆಚ್ಚಿನ ಸಿಬ್ಬಂದಿ ಬಳಿಸಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದೇವೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಎಂದರು.
    ರೈತರ ಜಮೀನು ಆರ್.ಟಿ.ಸಿಗಳಿಗೆ ಆಧಾರ ಜೋಡಣೆ ಕಾರ್ಯ ಮಾಡಲಾಗುತ್ತಿದೆ. ರಾಜ್ಯಾದ್ಯಾಂತ ಮೃತರ ಹೆಸರನಲ್ಲಿರುವ 52 ಲಕ್ಷ ಆಸ್ತಿಗಳನ್ನು ವಾರಸುದಾರರಿಗೆ ವರ್ಗಾಯಿಸಲಾಗುತ್ತಿದೆ. ಕೇವಲ 6 ತಿಂಗಳಲ್ಲಿ 30 ಸಾವಿರ ಆಸ್ತಿಗಳ ದರಕಾಸ್ತು ಮಾಡಿ ದಾಖಲೆ ನಿರ್ಮಿಸಲಾಗಿದೆ. ಈಗಾಗಲೇ 1.6 ಲಕ್ಷ ಪೋಡಿ ಮಾಡಲಾಗಿದ್ದು, ಮುಂಬರುವ ವರ್ಷದಲ್ಲಿ 2 ಲಕ್ಷ ಪೋಡಿ ಮಾಡುವ ಗುರಿ ಹೊಂದಲಾಗಿದೆ. ಆಸ್ತಿ ಹದ್ದುಬಸ್ತು ಕೋರಿಕೆ ಸಲ್ಲಿಕೆಯಾಗುವ ಅರ್ಜಿಗಳನ್ನು ಕೇವಲ 6 ದಿನದಲ್ಲಿ ಪರಿಹರಿಸಲಾಗುತ್ತದೆ. ಆಸ್ತಿ ವಿವಾದ ಸಂಬAಧಿಸಿದAತೆ ತಹಶೀಲ್ದಾರ್ ಹಂತದಲ್ಲಿದ್ದ 10,747 ಇದ್ದ ಬಾಕಿ ಕೇಸುಗಳ ಇಂದು 600ಕ್ಕೆ ಇಳಿದಿದೆ. ಭೂಸುರಕ್ಷಾ ಕಾರ್ಯಕ್ರಮದ ಮೂಲಕ ಸರ್ಕಾರಿ ಆಸ್ತಿ ರಕ್ಷಣೆ ಕ್ರಮ ಕೈಗೊಂಡಿದ್ದು, ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಈ ಸಂದರ್ಭದಲ್ಲಿ ಹೇಳಿದರು.
    ಬರಗಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾಲದಲ್ಲಿ ನೆರವು ನೀಡಿದೆ ತೊಂದರೆ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಕೇಂದ್ರ ಸರ್ಕಾರದಿಂದ ರೂ.3450 ಕೋಟಿ ಪರಿಹಾರ ಪಡೆದು, ರಾಜ್ಯ ರೈತರಿಗೆ ನೀಡಲಾಗಿದೆ. ಕಾಯಕವೇ ಕೈಲಾಸ ಎಂಬತೆ, ಜನರಿಗೆ ನೆಮ್ಮದಿ ಬದುಕು ನೀಡುವುದೇ ನಮ್ಮ ಸರ್ಕಾರ ಧ್ಯೇಯವಾಗಿದೆ. ಕಂದಾಯ ಇಲಾಖೆ ಸೇವೆಗಳಲ್ಲಿ ಸುಧಾರಣೆ ತಂದು ಭೂ ಗ್ಯಾರೆಂಟಿ ನೀಡುವುದು ಸರ್ಕಾರ ಅಂತಿಮ ಗುರಿಯಾಗಿದೆ. ಇದರಲ್ಲಿ ರಾಜ್ಯದ ಎಲ್ಲ ಕಂದಾಯ ಇಲಾಖೆ ಅಧಿಕಾರಿಗಳ ಶ್ರಮವಿದೆ. ಜನರು ನೀಡಿದ ಅಧಿಕಾರದಿಂದ ಸಾಧನೆಯ ಸಮರ್ಪಣೆ ಇಂದು ಸಾಧ್ಯವಾಗಿದೆ. ಬರುವ ವರ್ಷದಲ್ಲಿ ಇನ್ನಷ್ಟು ಸೇವೆ ಮಾಡಲು ಪ್ರತಿಜ್ಞೆ ಮಾಡುತ್ತಿದ್ದೇವೆ ಎಂದು ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದರು.
    ಕಂದಾಯ ಗ್ರಾಮ ಘೋಷಿಸುವಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಪ್ರೇರಣೆಯಾಗಿದ್ದನ್ನು ಸಚಿವ ಕೃಷ್ಣ ಭೈರೇಗೌಡ ಸ್ಮರಿಸಿದರು. 2015ರಲ್ಲಿ ರಾಹುಲ್ ಗಾಂಧಿ ಹಾವೇರಿಗೆ ಭೇಟಿ ನೀಡಿದ್ದಾಗ ತಾಂಡಾಗಳ ಜನರ ಕಷ್ಟ ಆಲಿಸಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಭರವಸೆ ನೀಡಿದ್ದರು. ಇದೇ ರೀತಿ 1990 ರಲ್ಲಿ ಅಂದು ರಾಜ್ಯದ ಕಂದಾಯ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆಯವರು ಸಹ ಈ ಯೋಜನೆಗೆ ಹಸ್ತಿಬಾರ ಹಾಕಿದ್ದರು. ಈ ಅಂಶಗಳನ್ನ ಮನದಲ್ಲಿ ಇಟ್ಟುಕೊಂಡು ರಾಜ್ಯ ಸರ್ಕಾರ ಇಂದು ದಾಖಲೆ ಇಲ್ಲದ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.
    ********

     

     

    ಎರಡು ತಿಂಗಳೊಳಗೆ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಭೂಮಿ ಪೂಜೆ ಭರವಸೆ.
    ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹೇಳಿಕೆ.
    ವಿಜಯನಗರ (ಹೊಸಪೇಟೆ), ಮೇ.20 (ಕರ್ನಾಟಕ ವಾರ್ತೆ) : ವಸತಿ, ವಕ್ಫ್, ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಸಮರ್ಪಣೆ ಸಂಕಲ್ಪ ಕಾರ್ಯಕ್ರಮದಲ್ಲಿ ಪ್ರಾಸ್ತೌವಿಕವಾಗಿ ಮಾತನಾಡಿ, ಸಮರ್ಪಣಾ ಸಂಕಲ್ಪ ಸಮಾವೇಶಕ್ಕೆ ಅಂದಾಜು 1.5 ಲಕ್ಷ ಜನ ಸೇರುವ ನಿರೀಕ್ಷೆ ಇತ್ತು, ಆದರೆ ಇಂದು ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಸೇರಿರುವುದು ನಮ್ಮ ಸರ್ಕಾರದ ಸಾಧನೆ ಆಗಿದೆ. ಆಗಮಿಸಿದ ಎಲ್ಲಾ ಮಹಾಜನತೆಗೆ ಕೈಮುಗಿದು ನಮಸ್ಕಾರಗಳನ್ನು ತಿಳಿಸುತ್ತೇನೆ. ವಿಜಯನಗರ ಜಿಲ್ಲೆಗೆ ಅನೇಕ ಅಭಿವೃದ್ಧಿಗಳ ಬೇಡಿಕೆ ಇದೆ. 100 ಕೋಟಿ ವೆಚ್ಚದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಆಗಬೇಕಿದೆ. 40 ಕೋಟಿ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆಗೆ ಹೈಟೆಕ್ ಹಾಸ್ಪಿಟಲ್ ಆರಂಭಿಸಬೇಕಿದೆ. ಈಚೇಗೆ ತುಂಗಭದ್ರಾ ಜಲಾಶಯದ 19 ನೇ ಗೇಟ್ ದುರಸ್ಥಿಯಿಂದಾಗಿ ಬಹುದೊಡ್ಡ ಅನಾಹುತ ಸಂಭವಿಸಬೇಕಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದಂತೆ ಶೀಘ್ರ ಕಾಮಗಾರಿ ಕೈಗೆತ್ತಿಕೊಂಡು ತಾತ್ಕಾಲಿಕ ಗೇಟ್ ಅಳವಡಿಸುವಲ್ಲಿ ಯಶಸ್ವಿಯಾಗಿದ್ದೇವೆ. ಶಾಶ್ವತ ಗೇಟ್ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಶೀಘ್ರ ಅನುದಾನ ನೀಡಬೇಕಿದೆ. ಈ ಭಾಗದ ರೈತರ ಬಹುದಿನದ ಬೇಡಿಕೆ ಸಕ್ಕರೆ ಕಾರ್ಖಾನೆ ಆರಂಭಿಸುವುದಾಗಿದೆ. ಈಗಾಗಲೇ ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗಿದೆ. ಇನ್ನೆರಡು ತಿಂಗಳಲ್ಲಿ ಸಕ್ಕರೆ ಕಾರ್ಖಾನೆ ಸೂಕ್ತ ನಿವೇಶನ ಗುರುತಿಸಿ ಭೂಮಿಪೂಜೆ ನೆರವೇರಿಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಹಕರಿಸಬೇಕಿದೆ ಎಂದರು.
    ವೇದಿಕೆಯಲ್ಲಿ ರಾಜ್ಯ ಸಭೆ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್, ಇಂಧನ ಸಚಿವ ಕೆ.ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ, ಜೀವಶಾಸ್ತç ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಹಜ್ ಹಾಗೂ ಪೌರಾಡಳಿತ ಸಚಿವ ರಹೀಂಖಾನ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವಿ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ.ಎಸ್.ತಂಗಡಗಿ, ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ್.ಬಿ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷಿö್ಮ.ಆರ್ ಹೆಬ್ಬಾಳ್ಕರ್, ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಲೋಕಸಭಾ ಸಂಸದರಾದ ಈ.ತುಕಾರಾಮ್, ವಿಜಯನಗರ ಕ್ಷೇತ್ರ ಶಾಸಕ ಹೆಚ್.ಆರ್.ಗವಿಯಪ್ಪ ಕೂಡ್ಲಿಗಿ ಶಾಸಕ ಡಾ.ಶ್ರೀನಿವಾಸ.ಎನ್.ಟಿ., ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಹೊಸಪೇಟೆ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್.ಎನ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಭೀಮಾನಾಯ್ಕ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಸೇರಿದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹಾಗೂ ವಸತಿ ಇಲಾಖೆ ಸರ್ಕಾರ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕಂದಾಯ ಇಲಾಖೆ ಸರ್ಕಾರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಣ ಹಾಗೂ ಸಾಮಾಜಿಕ ಭದ್ರತೆ ವಿಭಾಗದ ಸರ್ಕಾರ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್, ಕಂದಾಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಜೆ.ಮಂಜುನಾಥ, ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿ.ಪಂ. ಸಿಇಓ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ, ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್.ಶ್ರೀಹರಿಬಾಬು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
    *****

Share. Facebook Twitter Pinterest LinkedIn Tumblr WhatsApp Email
Previous Articleಬೇಡಜಂಗಮರನ್ನು ಎಸ್ಸಿ ಪಟ್ಟಿಯಿಂದ ಕೈಬಿಡಬೇಕು: ಮಾಜಿ ಸಚಿವ ಹೆಚ್.ಆಂಜನೇಯ
Next Article ಡಿಸೆಂಬರ್ ಒಳಗೆ ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುತ್ತೇನೆ : ಶಾಸಕ ಎಂ. ಚಂದ್ರಪ್ಪ
D Kumaraswamy
  • Tumblr

Related Posts

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ- ಡಿ.ಸಿ. ವೆಂಕಟೇಶ್ ಸೂಚನೆ

March 25, 2025

ಇ -ಖಾತಾ ಪಡೆಯಲು ಸಹಾಯವಾಣಿ ಸ್ಥಾಪನೆ: ಡಿಸಿ ಟಿ. ವೆಂಕಟೇಶ್ 

February 21, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.