Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಟಿ.‌ವೆಂಕಟೇಶ್
ರಾಜ್ಯ

ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಟಿ.‌ವೆಂಕಟೇಶ್

D KumaraswamyBy D KumaraswamySeptember 12, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ತ್ಯಾಜ್ಯ ನೀರು ನಿರ್ವಹಣೆ :ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಎಫ್.ಐ.ಆರ್ ದಾಖಲು

 

 

ತ್ಯಾಜ್ಯ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಬೇಜವಾಬ್ದಾರಿತನ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಕಾರಣಕ್ಕಾಗಿ ಎಫ್.ಐ.ಆರ್ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಪುರಸ್ಕøತ ಯೋಜನೆಗಳಡಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುತ್ತಿರುವ ಕುಡಿಯುವ ನೀರು ಸರಬರಾಜು ಮತ್ತು ಒಳ ಚರಂಡಿ ಕಾಮಗಾರಿಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸಲಹಾ ಮತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಚಿತ್ರದುರ್ಗ ನಗರದ ಒಳ ಚರಂಡಿ ಜಾಲದ ಮಾರ್ಗಗಳ ನಕ್ಷೆಯನ್ನು ಸಿದ್ದಪಡಿಸಬೇಕು. ವೆಟ್‍ವಲ್(ತೇವ ಬಾವಿ)ಗಳ ಸಾಮಥ್ರ್ಯಕ್ಕೆ ತಕ್ಕಂತೆ ನಗರದಲ್ಲಿನ ಕಲುಷಿತ ನೀರು ವೆಟ್‍ವೆಲ್ ಸೇರುತ್ತಿಲ್ಲ. ಇದರ ಬದಲಾಗಿ ನಗರದ ರಸ್ತೆಗಳ ಮೇಲೆಯ ಚರಂಡಿ ನೀರು ಹರಿದಾಡುವ ಪ್ರಸಂಗ ಎದುರಾಗಿದೆ. ಇದು ಸಾರ್ವಜನಿಕ ಸ್ವಾಸ್ಥ್ಯಕ್ಕೆ ಕಂಟಕವಾಗುತ್ತದೆ. ವೆಟ್‍ವೆಲ್ ನಿರ್ಮಿಸುವ ವೇಳೆಯಲ್ಲಿಯೇ ತ್ಯಾಜ್ಯ ನೀರು ವೆಟ್‍ವೆಲ್ ಸೇರುವಂತೆ ಕೊಳಚೆ ನೀರು ಸಂಪರ್ಕ ಜಾಲವನ್ನು ಅಭಿವೃದ್ಧಿ ಪಡಿಸಬೇಕಿತ್ತು. ಆದರೆ ನಗರ ಸಭೆ ಹಾಗೂ ಒಳಚರಂಡಿ ಮಂಡಳಿಯ ಸಮನ್ವಯತೆ ಕೊರತೆಯಿಂದ ವೆಟ್‍ವೆಲ್ ಹಾಗೂ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳಿಗೆ ಕೊಳಚೆ ನೀರು ಸೇರುತ್ತಿಲ್ಲ. ವಾರ್ಡ್‍ಗಳ ತ್ಯಾಜ್ಯ ನೀರು ರಸ್ತೆ ಹಾಗೂ ಮನೆಗಳಿಗೆ ನುಗ್ಗುತ್ತಿರುವ ಬಗ್ಗೆ ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರು ದೂರು ನೀಡುತ್ತಾರೆ. ನಗರಸಭೆ ಅಧಿಕಾರಿಗಳು ತಾತ್ಕಾಲಿಕ ಪರಿಹಾರ ನೀಡಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಾರೆ. ಈ ರೀತಿಯ ವರ್ತನೆಯಿಂದ ಸಮಸ್ಯೆ ಬಗೆ ಹರಿಯುವುದಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ರಾಜ ಕಾಲುವೆ ಸೇರಿದಂತೆ ಇತರೆ ಕಾಲುವೆ ಪ್ರದೇಶಗಳಲ್ಲಿ ನಗರಸಭೆಯಿಂದ ಸಮೀಕ್ಷೆ ನಡೆಸಿ ನಿಯಮಾನುಸಾರ ಬಫರ್ ಜೋನ್‍ಗಳನ್ನು ಗುರುತಿಸಬೇಕು. ಜಲಮೂಲಗಳ ಬಫರ್ ಜೋನ್‍ಗಳಲ್ಲಿ ಯಾವುದೇ ಕಟ್ಟಡ ನಿರ್ಮಾಣಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ಅನುಮತಿ ನೀಡಿದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಅಮೃತ್ ಯೋಜನೆಯಡಿ, ಮೊಳಕಾಲ್ಮೂರು, ನಾಯಕನಹಟ್ಟಿ, ಹೊಳಲ್ಕೆರೆ ಪಟ್ಟಣದಲ್ಲಿ ಮೇಲ್ಮಟ್ಟದ ಜಲಸಂಗ್ರಹಾಗಾರಗಳನ್ನು ನಿರ್ಮಿಸಲು ಅವಶ್ಯಕತೆ ಇರುವ ಸ್ಥಳವನ್ನು ಮುಖ್ಯಾಧಿಕಾರಿಗಳು ಗುರುತಿಸಿ ಹಸ್ತಾತರಿಸುವ ಕೆಲಸ ಮಾಡಬೇಕು. ಈಗಾಗಲೇ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಪೂರ್ಣಗೊಂಡು ಪಾಲನೆ ಮತ್ತು ನಿರ್ವಹಣೆಯ ಅವಧಿ ಮುಗಿದ ಕಾಮಗಾರಿಗಳನ್ನು ಸಂಬಂಧಪಟ್ಟ ನಗರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಹಸ್ತಾಂತರ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಮಲ್ಲಾಪುರ ಕೆರೆ ದಂಡೆ ಮರು ಸಮೀಕ್ಷೆ :
*********
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿನ ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡಿರುವ ಮಲ್ಲಾಪುರ ಕೆರೆ ದಂಡೆ ಮರು ಸಮೀಕ್ಷೆ ಕಾರ್ಯ ಕೈಗೊಳ್ಳುವಂತೆ  ಭೂಮಾಪನ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
ಮಲ್ಲಾಪುರ ಕೆರೆ ಏರಿಯನ್ನು ಎತ್ತರಿಸಲಾಗಿದೆ. ಇದರಿಂದ ಕೆರೆಯಲ್ಲಿ ನೀರಿನ ಸಂಗ್ರಹ ಪ್ರಮಾಣ ಹೆಚ್ಚಾಗಿ ಜನವಸತಿ ಪ್ರದೇಶಗಳಿಗೆ ತೊಂದರೆಯಾಗಿದೆ. ತಾತ್ಕಾಲಿಕವಾಗಿ ಕೆರೆಯಿಂದ 2 ಅಡಿ ನೀರು ಹೊರ ಹರಿಸಲು ಸಭೆಯಲ್ಲಿ ಅನುಮತಿಸಲಾಯಿತು.
ಸಿರಿಗೆರೆ, ಭರಮಸಾಗರ ನೀರು ಸರಬರಾಜು ನಿರ್ವಹಣೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಸ್ತಾಂತರಿಸಿಕೊಳ್ಳುವಂತೆ ಹಾಗೂ ಬಾಕಿ ಉಳಿಸಿಕೊಂಡಿರುವ ನಿರ್ವಹಣೆ ವೆಚ್ಚವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕುಡಿಯುವ ನೀರು ಸರಬಾರಾಜು ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡುವ ಕುರಿತು ಪ್ರತ್ಯೇಕವಾಗಿ  ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳ ಸಭೆಯನ್ನು ಶುಕ್ರವಾರ ಕರೆಯುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಸಭೆಯಲ್ಲಿ ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ರಘು, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಟಿ.ಮಂಜುಳ ಶ್ರೀಕಾಂತ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಕುಮಾರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹೇಮಂತ ಕುಮಾರ್, ಚಿತ್ರದುರ್ಗ ನಗರ ಸಭೆ ಆಯುಕ್ತೆ ರೇಣುಕಾ.ಎಂ ಸೇರಿದಂತೆ ಇತರೆ ನಗರಸಭೆಗಳ ಪೌರಾಯುಕ್ತರು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು

Share. Facebook Twitter Pinterest LinkedIn Tumblr WhatsApp Email
Previous Articleನಾಲ್ಕೆ ದಿನದಲ್ಲಿ ಸರಗಳ್ಳನನ್ನು ಬಂಧಿಸಿದ ಪೊಲೀಸರು
Next Article ಪ್ರಜಾಪ್ರಭುತ್ವದ ಸ್ಪೂರ್ತಿ ಎತ್ತಿಹಿಡಿಯಲು ಎಲ್ಲರೂ ಕೈಜೋಡಿಸಿ: ಡಿಸಿ ವೆಂಕಟೇಶ್
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.