Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಏಪ್ರಿಲ್ 1 ರಿಂದ 13 ರವರೆಗೆ ನಡೆಯುವ ಏಕನಾಥೇಶ್ವರಿ ಅಮ್ಮನ ಜಾತ್ರಾ ಮಹೋತ್ಸವ
ರಾಜ್ಯ

ಏಪ್ರಿಲ್ 1 ರಿಂದ 13 ರವರೆಗೆ ನಡೆಯುವ ಏಕನಾಥೇಶ್ವರಿ ಅಮ್ಮನ ಜಾತ್ರಾ ಮಹೋತ್ಸವ

D KumaraswamyBy D KumaraswamyMarch 21, 2025No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ ಮಾ21:  ಏಪ್ರಿಲ್ 1 ರಿಂದ 13 ರವರೆಗೆ ನಡೆಯುವ ಏಕನಾಥೇಶ್ವರಿ ಅಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಕೋಟೆ ರಸ್ತೆಯಲ್ಲಿರುವ ಏಕನಾಥೇಶ್ವರಿ ಪಾದಗುಡಿಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.
ಏಕನಾಥೇಶ್ವರಿ ದೇವಿಯ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಮೀನ್ದಾರ್ ದೊರೆಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಗೋವಿಂದರಾಜ್ ಪ್ರತಿ ವರ್ಷ ನೀವುಗಳು ಹೇಗೆ ಜಾತ್ರೆ ನಡೆಸಿಕೊಂಡು ಹೋಗುತ್ತೀರೋ ಅದೇ ರೀತಿ ಪದ್ದತಿಯಂತೆ ಆಚರಿಸಿ. ಅದಕ್ಕೆ ನಮ್ಮ ಸಂಪೂರ್ಣ ಸಹಕಾರವಿರುತ್ತದೆ. ಹದಿಮೂರು ದಿನಗಳ ಕಾಲ ಜಾತ್ರೆ ಶಾಂತಿಯುತವಾಗಿ ನಡೆಯಬೇಕು. ಅದಕ್ಕೆ ಬೇಕಾದ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಿ. ನಿಮ್ಮ ಜೊತೆ ತಾಲ್ಲೂಕು ಆಡಳಿತವಿರುತ್ತದೆ ಎಂದು ಭರವಸೆ ನೀಡಿದರು.
ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿ ನಿರ್ದೇಶಕ ಬಿ.ರಾಮಜ್ಜ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಏ.1 ರಂದು ಜಾತ್ರೆಯ ಸಾರು ಹಾಕಲಾಗುತ್ತದೆ. ಹದಿಮೂರಕ್ಕೆ ಹೋಕಳಿಯೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ. ಇಡಿ ಚಿತ್ರದುರ್ಗ ನಗರದ ಎಲ್ಲರೂ ಸೇರಿ ಏಕನಾಥೇಶ್ವರಿ ಅಮ್ಮನ ಜಾತ್ರೆಯನ್ನು ಶಾಂತಿಯಿಂದ ಆಚರಿಸೋಣ. ಇದಕ್ಕೆ ನಿಮ್ಮ ಸಹಕಾರವಿರಲಿ ಎಂದು ತಹಶೀಲ್ದಾರ್‍ರವರಲ್ಲಿ ವಿನಂತಿಸಿದರು.
ಕೋಮಲ ನರ್ಸಿಂಗ್ ಹೋಂನ ಡಾ.ಕೋಮಲ ಮರಿಗುದ್ದಿರವರು ಹತ್ತು ಲಕ್ಷ ರೂ. ವೆಚ್ಚ ಮಾಡಿ ಏಕನಾಥೇಶ್ವರಿ ಪಾದಗುಡಿಯ ಮುಂಭಾಗ ಧ್ವಾರಬಾಗಿಲು ನಿರ್ಮಿಸಿದ್ದಾರೆ. ಅದಕ್ಕಾಗಿ ಜಾತ್ರೆಯಲ್ಲಿ ಅವರನ್ನು ಗೌರವಿಸುವಂತೆ ಸಲಹೆ ನೀಡಿದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡುತ್ತ ದಾವಣಗೆರೆಯಲ್ಲಿ ದುರ್ಗಮ್ಮನ ಜಾತ್ರೆ ಹೇಗೆ ವೈಭವೋಪೇತವಾಗಿ ನಡೆಯುತ್ತದೋ ಅದೇ ರೀತಿ ಚಿತ್ರದುರ್ಗದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ಏಕನಾಥೇಶ್ವರಿ ಅಮ್ಮನವರ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸೋಣ. ತಾಲ್ಲೂಕು ಕಚೇರಿ, ನಗರಸಭೆ ಹಾಗೂ ವಿದ್ಯುತ್ ಇಲಾಖೆಯವರು ಹದಿಮೂರು ದಿನಗಳ ಕಾಲ ನಡೆಯುವ ಜಾತ್ರೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್ ಮಾತನಾಡಿ ನಗರ ದೇವತೆ ತಿಪ್ಪಿನಘಟ್ಟಮ್ಮ-ಬರಗೇರಮ್ಮನವರ ಭೇಟಿ ಮಹೋತ್ಸವ ಹಿಂದಿನ ಕಾಲದಿಂದಲೂ ರಾಜಬೀದಿ ದೊಡ್ಡಪೇಟೆಯಲ್ಲಿ ನಡೆಯುತ್ತಿದೆ. ಭೇಟಿ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಕಿಷ್ಕಿಂದೆಯಾಗಿರುವ ದೊಡ್ಡಪೇಟೆ ರಸ್ತೆಯಲ್ಲಿ ಸಾವಿರಾರು ಭಕ್ತರು ಜಮಾಯಿಸುತ್ತಾರೆ. ಅದಕ್ಕಾಗಿ ಅಪ್ಪಣೆ ಕೇಳಿ ಭೇಟಿ ಮಹೋತ್ಸವವನ್ನು ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಸಿದರೆ ಇಡಿ ದುರ್ಗದ ಜನತೆಯೇ ನೋಡಿ ಸಂಭ್ರಮಿಸುತ್ತಾರೆಂದು ಸಲಹೆ ನೀಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುವುದಕ್ಕೆ ಎಲ್ಲರ ಸಹಕಾರ ಅತಿ ಮುಖ್ಯ ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮಾಜಿ ಸದಸ್ಯರುಗಳಾದ ಗಾಡಿ ಮಂಜುನಾಥ್, ಸಿ.ಟಿ.ರಾಜೇಶ್, ತಾಲ್ಲೂಕು ಕಚೇರಿಯ ರಾಜಸ್ವ ನಿರೀಕ್ಷಕ ಪ್ರಾಣೇಶ್, ಗ್ರಾಮ ಆಡಳಿತಾಧಿಕಾರಿ ಶ್ರೀನಿವಾಸ್ ಇವರುಗಳು ವೇದಿಕೆಯಲ್ಲಿದ್ದರು.
ನಗರಸಭೆ ನಾಮ ನಿರ್ದೇಶಿತ ಮಾಜಿ ಸದಸ್ಯ ಓಂಕಾರ್, ಗುತ್ತಿಗೆದಾರ ಕುಮಾರ್, ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ
ಡಿ.ಗೋಪಾಲಸ್ವಾಮಿನಾಯಕ, ಶಾರದ ಬ್ರಾಸ್ ಬ್ಯಾಂಡ್‍ನ ಗುರುಮೂರ್ತಿ ಸೇರಿದಂತೆ ನೂರಾರು ಭಕ್ತರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

 

 

ಫೋಟೋ-2.

Share. Facebook Twitter Pinterest LinkedIn Tumblr WhatsApp Email
Previous Articleಟಿವಿ9 ಕನ್ನಡ ಲೈಫ್‌ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್‌ಪೋ
Next Article ಚಿತ್ರದುರ್ಗ: ಭೀಕರ ಅಪಘಾತ ಇಬ್ಬರು ಸಾವು ಓರ್ವನ ಸ್ಥಿತಿ ಚಿಂತಾಜನಕ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.