ಮತದಾರರು ಮತ್ತು ಮತಗಟ್ಟೆಗಳ ಫುಲ್ ಡಿಟೈಲ್ಸ್ ಇಲ್ಲಿದೆ

ರಾಜ್ಯ

 ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರಗಳಿಂದ ಜಿಲ್ಲೆಯಲ್ಲಿ ಒಟ್ಟು 14,18,211 ಮತದಾರರು ಇದ್ದಾರೆ. ಇದರಲ್ಲಿ 704896 ಪುರುಷ ಮತದಾರರು, 713228 ಮಹಿಳಾ ಮತದಾರರು ಹಾಗೂ 87 ಮಂದಿ ಇತರೆ ಮತದಾರರು ಇದ್ದು, ಒಟ್ಟು18,41,937 ಮಂದಿ ಮತದಾರರಿದ್ದಾರೆಂದುದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು. ಅವರು ಡಿಸಿ‌ ಕಚೇರಿ‌ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು.

 

 

 

ತುಮಕೂರು ಜಿಲ್ಲೆಯ ಸಿರಾ ವಿಧಾನ ಕ್ಷೇತ್ರದಲ್ಲಿ 113788 ಪುರುಷರು ಹಾಗೂ 112898 ಮಹಿಳಾ ಮತದಾರರು ಹಾಗೂ 8 ಇತರೆ ಮತದಾರರು ಸೇರಿದಂತೆ ಒಟ್ಟು 226694 ಮತದಾರರು ಇದ್ದಾರೆ. ಪಾವಗಡ ವಿಧಾನ ಸಭಾ ಕ್ಷೇತ್ರದಲ್ಲಿ 100380 ಪುರುಷ ಮತದಾರರು, 96643 ಮಹಿಳಾ ಮತದಾರರು ಹಾಗೂ 9 ಇತರೆ ಮತದಾರರು ಸೇರಿದಂತೆ ಒಟ್ಟು 197032 ಮತದಾರರು ಇದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಹಾಗೂ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 18,41,937 ಮತದಾರರು ಇದ್ದಾರೆ. ಇದರಲ್ಲಿ 919064 ಪುರುಷರು ಹಾಗೂ 922769 ಮಹಿಳೆಯರು, 104 ಇತರೆ ಮತದಾರರು ಇದ್ದಾರೆ ಎಂದು ತಿಳಿಸಿದರು.
2167 ಮತಗಟ್ಟೆಗಳು: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಹಾಗೂ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 2167 ಮತಗಟ್ಟೆಗಳು ಇವೆ. ಜಿಲ್ಲೆಯ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 285 ಮತಗಟ್ಟೆಗಳು, ಚಳ್ಳಕೆರೆ-260, ಚಿತ್ರದುರ್ಗ-288, ಹಿರಿಯೂರು-287, ಹೊಸದುರ್ಗ-242, ಹೊಳಲ್ಕೆರೆ-299 ಸೇರಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 1661 ಮತಗಟ್ಟೆಗಳು ಇವೆ. ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ 266 ಮತಗಟ್ಟೆಗಳು  ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ 240 ಮತಗಟ್ಟೆಗಳು ಇವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *