Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
ರಾಜ್ಯ

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

D KumaraswamyBy D KumaraswamyJanuary 8, 2026No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

ಬೆಂಗಳೂರು: ಒಳಮೀಸಲಾತಿ ಜಾರಿ ಬಳಿಕ ಮೊದಲ ಬಾರಿಗೆ ಅದರ ಸೌಲಭ್ಯವನ್ನು ಪಡೆದ ಹೆಗ್ಗಳಿಕೆಗೆ ಪಾತ್ರರಾದ ವೈದ್ಯಕೀಯ ಸ್ನಾತಕೋತ್ತರ ಉನ್ನತ (ಎಂಎಸ್, ಎಂಡಿ) ಶಿಕ್ಷಣಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ನಿಯೋಗ ಮಾಜಿ ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಂಭ್ರಮಿಸಿತು.
ಸಿಎಂ ನಿವಾಸ ಕಾವೇರಿಗೆ ಗುರುವಾರ ಭೇಟಿ ನೀಡಿ ಸಿದ್ದರಾಮಯ್ಯ ಅವರಿಗೆ ಸಿಹಿ ತಿನ್ನಿಸಿ, ಬೃಹತ್ ಹೂವಿನ ಹಾರ, ಹೂವಿನ ಗುಚ್ಛ ಕೊಟ್ಟು ಕೃತಜ್ಞತೆ ಸಲ್ಲಿಸಿದರು.
ಮಾದಿಗ ಸಮುದಾಯಕ್ಕೆ ಉನ್ನತ ಶಿಕ್ಷಣ ಗಗನಕುಸಮವಾಗಿತ್ತು. ಅದರಲ್ಲೂ ಎಂಎಸ್, ಎಂಡಿ
ಪ್ರವೇಶ ಪಡೆಯಲು ಸಾಧ್ಯವೇ ಇರಲಿಲ್ಲ. ಆದರೆ, ಒಳಮೀಸಲಾತಿ ಜಾರಿ ಬಳಿಕ ನೀಟ್ ಪರೀಕ್ಷೆ ಬರೆದ ಮಾದಿಗ ಸಮುದಾಯದ ವಿದ್ಯಾರ್ಥಿಗಳೆಲ್ಲರಿಗೂ ಮೊದಲಬಾರಿಗೆ ಪ್ರವೇಶ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡರು.
ಮಕ್ಕಳು, ಮೂಳೆ, ನರರೋಗ ಸೇರಿ ಬಹಳ ಬೇಡಿಕೆ ಇರುವ ವಿಭಾಗಗಳೇ ನಮಗೆ ದೊರೆತಿವೆ. ಇದೆಲ್ಲ ಸಾಧ್ಯವಾಗಿದ್ದು ಒಳಮೀಸಲಾತಿ ಜಾರಿಗೊಳಿಸಿದ ತಮ್ಮಿಂದ. ಅನೇಕ ವಿರೋಧಗಳು, ಗೊಂದಲಗಳ ಮಧ್ಯೆಯೂ ತಾವು ದಿಟ್ಟ ನಿರ್ಧಾರ ಕೈಗೊಂಡ ಪರಿಣಾಮ ನಾವೆಲ್ಲರೂ ಕನಸಲ್ಲೂ ಕಾಣಲು ಸಾಧ್ಯವಾಗದ ಎಂಎಸ್, ಎಂಡಿ ಉನ್ನತ ಶಿಕ್ಷಣದ ಅತ್ಯುತ್ತಮ ವಿಭಾಗಗಳಿಗೆ ಆಯ್ಕೆಗೊಂಡಿದ್ದೇವೆ. ಅರ್ಜಿ ಸಲ್ಲಿಸಿದ ಬಹುತೇಕರಿಗೂ ಪ್ರವೇಶ ಸಿಕ್ಕಿದೆ ಎಂದು ಸಂಭ್ರಮಿಸಿದರು.
ನ್ಯಾ.ನಾಗಮೋಹನ್ ದಾಸ್ ಆಯೋಗದ ಬಳಿಕ ಕೆಲ ಮಾರ್ಪಾಡು ಮಾಡಿ ಒಳಮೀಸಲಾತಿ ಜಾರಿಗೊಳಿಸಿದ
ತಾವು, ಪರಿಶಿಷ್ಟಜಾತಿಯಲ್ಲಿನ ಎಲ್ಲ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲು ಕೈಗೊಂಡ ದಿಟ್ಟ ನಡೆಗೆ ಅನೇಕ ಅಡ್ಡಿ ಆತಂಕಗಳು ಎದುರಾಗಿದ್ದವು. ಅಲೆಮಾರಿ ಸಮುದಾಯ ಕೋರ್ಟ್ಗೆ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ಉದ್ಯೋಗ ನೇಮಕಾತಿಗೆ ತಡೆನೀಡಿದೆ. ಆದರೆ, ಶೈಕ್ಷಣಿಕ ಕ್ಷೇತ್ರಕ್ಕೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಒಳಮೀಸಲಾತಿ ಜಾರಿ ಎಷ್ಟೊಂದು ಪ್ರಮುಖ, ಉಪಯುಕ್ತವೆಂಬ ವಾಸ್ತವ ಸತ್ಯವನ್ನು ಮಾದಿಗ ಸಮುದಾಯದ ನಾವುಗಳು ವೈದ್ಯಕೀಯ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದಿರುವುದೇ ಸಾಕ್ಷಿ ಎಂದರು.
ಇಂತಹದ್ದೊಂದು ಅವಕಾಶ ಕಲ್ಪಿಸಿಕೊಟ್ಟ ತಮಗೆ ಮಾದಿಗ ಸಮುದಾಯ ಸದಾ ಕೃತಜ್ಞವಾಗಿರುತ್ತದೆ. ಅದರಲ್ಲೂ ನಾವುಗಳು ನಿಮ್ಮ ಕೊಡುಗೆ ಸದಾ ಸ್ಮರಿಸುತ್ತೇವೆ. ಜೊತೆಗೆ ಉನ್ತನ ಶಿಕ್ಷಣದ ವ್ಯಾಸಂಗಕ್ಕೆ ಪ್ರವೇಶ ಪಡೆದಿರುವ ನಾವು ನಿಮ್ಮನ್ನು ಪ್ರತಿಕ್ಷಣ ನೆನಪು ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ದಸಂಸ, ಮಾದಿಗ ಸೇರಿ ಅನೇಕ ಸಂಘಟನೆಗಳು ಮೂರವರೇ
ದಶಕಗಳ ನಡೆಸಿದ ಹೋರಾಟದ ಫಲ ಹಾಗೂ ವಿರೋಧ ಲೆಕ್ಕಿಸದೆ ತಾವು ಒಳಮೀಸಲಾತಿ ಜಾರಿಗೊಳಿಸಿದ್ದರಿಂದ ನಿರೀಕ್ಷೆಗೂ ಮೀರಿ ಮಾದಿಗ ಸಮುದಾಯದ ವಿದ್ಯಾರ್ಥಿಗಳು ಮೊದಲ ಬಾರಿಗೆ ವೈದ್ಯಕೀಯ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದಾರೆ ಎಂದರು.
ಕೋರ್ಟ್ನಲ್ಲಿ ಉದ್ಯೋಗ ನೇಮಕಾತಿಗೆ ಇರುವ ತಡೆಯಾಜ್ಞೆ ತೆರವುಗೊಳಿಸಿದರೆ ಇದೇ ರೀತಿ ಮಾದಿಗ ಸಮುದಾಯ ಸರ್ಕಾರಿ ಕೆಲಸವನ್ನು ಪಡೆದುಕೊಂಡು ಬದುಕು ಕಟ್ಟಿಕೊಳ್ಳಲಿದೆ. ಈ ನಿಟ್ಟಿನಲ್ಲಿ ಶೀಘ್ರ, ತ್ವರಿತ ಕ್ರಮಕೈಗೊಳ್ಳಬೇಕೆಂದು ಕೋರಿದರು.
ಮೀಸಲಾತಿ ಇದ್ದರೂ 101 ಜಾತಿಗಳ ಪೈಪೋಟಿಯಲ್ಲಿ ಮಾದಿಗರು ಉನ್ನತ ಶಿಕ್ಷಣ, ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿ ಹಿಂದುಳಿಯುತ್ತಿದ್ದರು. ಈ ಸತ್ಯವನ್ನು ಅಂಕಿ ಅಂಶಗಳ ಮೂಲಕ ಅರಿತು ಹೋರಾಟ ನಡೆಸಿದ್ದು ಹಾಗೂ ತಮ್ಮ ಬದ್ಧತೆ ಕಾರಣಕ್ಕೆ ಒಳಮೀಸಲಾತಿ ಜಾರಿಗೊಂಡಿದೆ. ಅದರ ಮೊದಲ ಫಲಾನುಭವಿಗಳು ವೈದ್ಯಕೀಯ ಶಿಕ್ಷಣದ ವಿದ್ಯಾರ್ಥಿಗಳು ಪಡೆಯುತ್ತಿರುವುದು ಸಂತಸ ತಂದಿದೆ. ಆದ್ದರಿಂದ ಅವರೆಲ್ಲರೂ ತಮಗೆ ಅಭಿನಂದಿಸಿ, ಕೃತಜ್ಞತೆ ಸಲ್ಲಿಸುತ್ತಿರುವುದು ಸ್ಮರಣೀಯ ಎಂದರು.

 

 

ಒಳ್ಳೆಯ ವೈದ್ಯರಾಗಿ::

ಒಳಮೀಸಲಾತಿ ಜಾರಿ ಅನೇಕ ವರ್ಷಗಳ ಬೇಡಿಕೆ ಅಗಿತ್ತು. ಅದನ್ನು ನಾವುಗಳು ಜಾರಿಗೊಳಿಸಿ, ಕಾನೂನು ರೂಪ ನೀಡಿ ಅನುಷ್ಠಾನಗೊಳಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ನೀವು ನನಗೆ ಸಿಹಿ ತಿನ್ನಿಸಿ, ಕೃತಜ್ಞತೆ ಸಲ್ಲಿಸಿರುವುದು ಖುಷಿ ಆಗಿದೆ. ಅದಕ್ಕಿಂತಲೂ ಹೆಚ್ಚು ಸಂತಸ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದಿರುವುದು ಉಂಟು ಮಾಡಿದೆ. ವ್ಯಾಸಂಗ ವೇಳೆ ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಿ. ಬಳಿಕ ಒಳ್ಳೆಯ ವೈದ್ಯರಾಗಿ ಸಮಾಜ ಸೇವೆ ಮಾಡಿ. ಆಗ ಒಳಮೀಸಲಾತಿ ಜಾರಿಗೊಳಿಸಿದ್ದು ಸಾರ್ಥಕ ಪಡೆದುಕೊಳ್ಳಲಿದೆ ಎಂದು ಹೇಳಿದರು. ಅನೇಕ ಸಮುದಾಯಗಳು ಮೀಸಲಾತಿ ಸೌಲಭ್ಯಗಳಿಂದ ವಂಚಿತವಾಗಿದ್ದವು. ಒಳಮೀಸಲಾತಿ ಜಾರಿಯಿಂದ
ಸಮ ಸಮಾಜ ನಿರ್ಮಾಣಕ್ಕೆ ಸಹಕಾರದ ಜೊತೆಗೆ ಅಸ್ಪೃಶ್ಯ, ಹಿಂದುಳಿದ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

Share. Facebook Twitter Pinterest LinkedIn Tumblr WhatsApp Email
Previous Articleಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
Next Article ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.