ದೇಶಕ್ಕೆ ಕಾಂಗ್ರೆಸ್ ಕೊಡುಗೆ ಬಹಳಷ್ಟು ಇದೆ. ಆದರೆ ಮೋದಿಯವರ ಕೊಡುಗೆ ಶೂನ್ಯವಾಗಿದೆ ಎಂದು ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು.
ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು.
ನಮ್ಮ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಹೇಳಿದಂತೆ ಮಾಡುತ್ತದೆ. ಸಿದ್ದರಾಮಯ್ಯ ಅವರು ಜನರಿಗೆ ಉಪಯೋಗವಾಗುವಂತ ಕೆಲಸ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ಮತ್ತಷ್ಟು ಅಭಿವೃದ್ದಿಗೊಳಿಸು ಕೈ ಬಲಪಡಿಸಲು ಅವರಿಗೆ ಮತ ಹಾಕಬೇಕು. ನಾಳಿನ ಕಾಂಗ್ರೆಸ್ ನ ಬಹಿರಂಗ ಪ್ರಚಾರಕ್ಕೆ ಕಾಂಗ್ರೆಸ್ ನ ಧಿ ನಾಯಕಿ ಪ್ರಿಯಾಂಕಗಾಂಧಿ ಆಗಮಿಸಲಿದ್ದಾರೆ. ಇದಕ್ಕಾಗಿ ಲಕ್ಷಾಂತರ ಜನರು ರಾಜ್ಯದ ಮೂಲೆ ಮೂಲೆಗಳಿಂದ ಬರುತ್ತಿದ್ದಾರೆ. ಪ್ರಿಯಾಂಕ ಗಾಂಧಿ ಅವರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದರು. ಇದೇ ಸಮಯದಲ್ಲಿ ಮಾತಾಡಿದ, ಸ್ಥಳೀಯ ಶಾಸಕ ವೀರೇಂದ್ರ ಪಪ್ಪಿ, ನಾಳಿನ ಕಾರ್ಯಕ್ರಮಕ್ಕೆ ಪ್ರಿಯಾಂಕ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ ಎಂದರು. ಕಾಂಗ್ರೆಸ್ ನ ಲಕ್ಕಿ ಸ್ಟಾರ್ ಎಂದು ಕರೆಸಿಕೊಳ್ಳುವ ಪ್ರಿಯಾಂಕ ಗಾಂಧಿ ಅವರು ಬರುತ್ತಿದ್ದು, ಅವರು ವಿಧಾನ ಸಭೆ ಚುನಾವಣೆಯಲ್ಲಿ ತುಮಕೂರು, ಹಿರಿಯೂರು ಕ್ಷೇತ್ರಗಳಿಗೆ ಭೇಟಿ ನೀಡಿದ್ದು, ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಇದರಿಂದ ನಾಳೆ ಇಲ್ಲಿಗೆ ಬರುತ್ತಿದ್ದಾರೆ. ಸಿದ್ದರಾಮಯ್ಯ ಅವರು ಐದು ಗ್ಯಾರಂಟಿಗಳನ್ನು ಪ್ರಾಮಾಣಿಕವಾಗಿ ನೀಡಿ, ಕೆಲಸ ಮಾಡುತ್ತಿದ್ದಾರೆ. ಇದರಿಂದ ಚಂದ್ರಪ್ಪ, ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಜಿಲ್ಲಾ ಚುನಾವಣಾ ಉಸ್ತುವಾರಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಹೇಳಿದರು.
ಮಾಜಿ ಸಚಿವ ಹೆಚ್.ಆಂಜನೇಯ, ಸಚಿವರಾದ ಸುಧಾಕರ್, ಸ್ಥಳೀಯ ಶಾಸಕ, ವೀರೇಂದ್ರ ಪಪ್ಪಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವೀರೇಂದ್ರ ಪಪ್ಪಿ,ಇತರರು ಇದ್ದರು.