Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಗೃಹಮಂತ್ರಿ ಅಮಿತ್ ಶಾ ಕರ್ನಾಟಕ ಪ್ರವಾಸಗಳು, ರಾಜ್ಯದಲ್ಲಿ  ಚಮತ್ಕಾರ ಮಾಡಲಿವೆಯಾ? 
ರಾಜ್ಯ

ಗೃಹಮಂತ್ರಿ ಅಮಿತ್ ಶಾ ಕರ್ನಾಟಕ ಪ್ರವಾಸಗಳು, ರಾಜ್ಯದಲ್ಲಿ  ಚಮತ್ಕಾರ ಮಾಡಲಿವೆಯಾ? 

D KumaraswamyBy D KumaraswamyMarch 23, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಗೃಹಮಂತ್ರಿ ಅಮಿತ್ ಶಾ ಕರ್ನಾಟಕ ಪ್ರವಾಸಗಳು, ರಾಜ್ಯದಲ್ಲಿ  ಚಮತ್ಕಾರ ಮಾಡಲಿವೆಯಾ?

 

 

224 ಮತಕ್ಷೇತ್ರಗಳ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಗಳಿಸುವ ನಿಟ್ಟಿನಲ್ಲಿ ಗೃಹಮಂತ್ರಿ ಅಮಿತ್ ಶಾ ಮಾರ್ಚ್ 24ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಒಂದು ದಿನದ ಪ್ರವಾಸದಲ್ಲಿ ಅಮಿತ್ ಶಾರವರು ಕೆಲ ಸಾರ್ವಜನಿಕ ರ್ಯಾಲಿಗಳಲ್ಲಿ ಭಾಗವಹಿಸುವುದರ ಜೊತೆಗೆ ಪಕ್ಷದ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿ, ಒಗ್ಗಟ್ಟಿನ ಮಂತ್ರದ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್‌ನ್ನು ಸೋಲಿಸಿ, ಪಕ್ಷಕ್ಕೆ ಐತಿಹಾಸಿಕ ಗೆಲವು ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರಾ ಎಂಬ ಚರ್ಚೆಗಳು ನಡೆಯುತ್ತಿವೆ.
ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಭಾಜಪದ ಅಮಿತ್ ಶಾ ಕರ್ನಾಟಕದ ಭೇಟಿಗಳು ಈಗಾಗಲೇ ವಿರೋಧ ಪಕ್ಷಗಳಲ್ಲಿ ನಿದ್ದೆಗೆಡಿಸಿವೆ. ಅಮಿತ್ ಶಾರ ಚುನಾವಣೆ ತಂತ್ರಗಳ ಬಗ್ಗೆ ಅರಿವಿರುವ ಪಕ್ಷದ ಕಾರ್ಯಕರ್ತರು ಗುಜರಾತ್ ಮತ್ತು ಈಶಾನ ರಾಜ್ಯಗಳಂತೆ ಕರ್ನಾಟಕದಲ್ಲೂ ಕೂಡ ಭಾಜಪ ಐತಿಹಾಸಿಕ ಕೆಲವು ದಾಖಲಿಸಿದೆ ಎಂದು ಭರವಸೆ ಹೊಂದಿದ್ದಾರೆ.
ತಮ್ಮ ಭಾಷಣಗಳಲ್ಲಿ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ಬಗ್ಗೆ ಅಮಿತ್ ಶಾ ಮಾತನಾಡಲಿದ್ದಾರೆ.
ತಮ್ಮ ಹಿಂದಿನ ಭಾಷಣಗಳಲ್ಲಿ ಕರ್ನಾಟಕ ಕಾಂಗ್ರೆಸ್ ದೆಹಲಿ ಗಾಂಧಿ ಕುಟುಂಬದ ಎಟಿಎಂ ಆಗಿ ಕಾರ್ಯ ನಿರ್ವಹಿಸುತ್ತದೆ ಎಂದು ಟೀಕಿಸಿದ್ದರು.
ಅಮಿತ್ ಶಾರವರ ಸೂಚನೆಯ ಮೇರೆಗೆ ಭಾಜಪ ಕಾರ್ಯಕರ್ತರು ಪೂರ್ಣ ಬಹುಮತಕ್ಕಾಗಿ ಟೊಂಕ ಕಟ್ಟಿ ನಿಂತಿದ್ದಾರೆ. ಪ್ರಸ್ತುತ ಕರ್ನಾಟಕ ವಿಧಾನಸಭೆಯಲ್ಲಿ ಭಾಜಪ 117 ಸೀಟುಗಳನ್ನು ಹೊಂದಿದ್ದರೆ, ಕಾಂಗ್ರೆಸ್ 69 ಮತ್ತು ಜೆಡಿಎಸ್ 32 ಸೀಟುಗಳನ್ನು ಹೊಂದಿದೆ. ಉಳಿದ ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಗೆ, ಈ ಚುನಾವಣೆ ತುಂಬಾ ಪರಿಣಾಮ ಬೀರಲಿರುವುದು ಶಾಗೆ ಚೆನ್ನಾಗಿಯೇ ತಿಳಿದಿದೆ. ಆದಕಾರಣ ಚುನಾವಣೆ ಆಯೋಗ ಎಲೆಕ್ಷನ್ ಘಂಟೆ ಬಾರಿಸುವ ಮುನ್ನವೇ ಅಮಿತ್ ಶಾ ಅಖಾಡಕ್ಕೆ ಇಳಿದಿದ್ದಾರೆ.
ರಾಜಕೀಯ ಚಾಣಕ್ಯನೆಂಬ ಹೆಸರಿಗೆ ಅನ್ವರ್ಥವೆಂಬಂತೆ, ಕಳೆದ ಡಿಸೆಂಬರ್‌ನಲ್ಲಿ ತಮ್ಮ ಮೊದಲ ಚುನಾವಣಾ ರ್ಯಾಲಿಗೆ ಒಕ್ಕಲಿಗರೇ ಹೆಚ್ಚಾಗಿರುವ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಹೆಚ್ಚಾಗಿರುವ ಮೈಸೂರು ಭಾಗದ ಮಂಡ್ಯವನ್ನು ಆರಿಸಿದರು. 61 ಸೀಟುಗಳನ್ನು ಹೊಂದಿರುವ ಈ ಭಾಗ ಬಿಜೆಪಿಗೆ ಪೂರ್ಣಬಹುಮತ ನೀಡಲು ತುಂಬಾ ಅವಶ್ಯಕ. ಇದರ ಜೊತೆ ಜೊತೆಗೆ ಶಾ ಪೂರ್ಣ ಬಹುಮತದ ಸಂಕಲ್ಪಕ್ಕೆ ತುಂಬಾ ಅವಶ್ಯವಾಗಿರುವ ಬೆಂಗಳೂರು ಮತ್ತು ಬಳ್ಳಾರಿಯಲ್ಲಿಯೂ ರ್ಯಾಲಿ ನಡೆಸಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ: ಬೊಂಬೆ ಭವಿಷ್ಯ ನೀಡಿರುವ ಮುನ್ಸೂಚನೆ ಏನು ಗೊತ್ತಾ?
Next Article ಗ್ರಾಮೀಣ ಕ್ರೀಡೆಗಳಿಗೆ ಮರುಜೀವ ಕೊಡುವ ಕೆಲಸ ಮಾಡೋಣ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.