Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ನಾನು ಅಹಿಂದ ಪರ; ಲಿಂಗಾಯತ ವಿರೋಧಿಯಲ್ಲ: ಜಿ. ರಘು ಆಚಾರ್
ರಾಜ್ಯ

ನಾನು ಅಹಿಂದ ಪರ; ಲಿಂಗಾಯತ ವಿರೋಧಿಯಲ್ಲ: ಜಿ. ರಘು ಆಚಾರ್

D KumaraswamyBy D KumaraswamyMarch 16, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ನಾನು ಅಹಿಂದ ಪರ; ಲಿಂಗಾಯತ ವಿರೋಧಿಯಲ್ಲ
ಲಿಂಗಾಯತರ ಬಗ್ಗೆ ಬಿಡುಗಡೆಯಾಗಿರುವ ಆಡಿಯೋದಲ್ಲಿರುವ ಧ್ವನಿ ನನ್ನದಲ್ಲ-ಜಿ.ರಘು ಆಚಾರ್
ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಕಿಡಿಗೇಡಿಗಳು ಬಿಡುಗಡೆ ಮಾಡಿರುವ ಆಡಿಯೋದಲ್ಲಿರುವ ಧ್ವನಿ ನನ್ನದಲ್ಲ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಜಿ.ರಘು ಆಚಾರ್ ಸ್ಪಷ್ಟನೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ಪತ್ರಕರ್ತರ ಭವನದಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ನಾನು ಲಿಂಗಾಯತರು ಹಾಗು ಅಹಿಂದ ಪರವಾಗಿದ್ದೇನೆಯೇ ಹೊರತು, ಯಾರಿಗೂ ವಿರೋಧಿಯಲ್ಲ, ನಾನು ಸುತ್ತೂರು ಮಠದಲ್ಲಿ ಓದಿ ಬೆಳೆದವನಾಗಿದ್ದು, ನನ್ನ ಜೀವಮಾನದಲ್ಲಿ ಎಂದೂ ಜಾತಿ ಬೇಧಮಾಡಿ ಗೊತ್ತಿಲ್ಲ, ಮಠ ಮಾನ್ಯಗಳು ನಮ್ಮ ಸಂಸ್ಕೃತಿಯ ಪ್ರತೀಕ, ನನಗೆ ಸುತ್ತೂರು ಮಠ ಸಂಸ್ಕಾರ ಕಲಿಸಿಕೊಟ್ಟಿದೆ. ನನಗೆ ಎಲ್ಲಾ ಜಾತಿ ಧರ್ಮಗಳ ಬಗ್ಗೆ ಗೌರವವಿದೆ. ನಾನು ಯಾವುದೇ ಜಾತಿ ಧರ್ಮದ ವಿರುದ್ದ ಹಗುರವಾಗಿ ಮಾತನಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ಯಾರದೋ ಆಡಿಯೋ ಬಳಸಿಕೊಂಡು ನನ್ನ ವಿರುದ್ದ ಷಢ್ಯಂತ್ರ ಮಾಡಿ ನನ್ನ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ. ಈಗಾಗಲೇ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ, ಕ್ಷಮೆ ಕೇಳಬೇಕು ಎನ್ನುತ್ತಿರುವವರು ಮೊದಲು ನನ್ನ ತಪ್ಪನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದ ರಘು ಆಚಾರ್, ರಾಜಕೀಯ ಮಾಡುವವರು ನೇರವಾಗಿ ಚುನಾವಣೆ ಎದುರಿಸಬೇಕು, ಅದನ್ನು ಬಿಟ್ಟು ಇಂತಹ ಕೀಳು ಮಟ್ಟಕ್ಕೆ ಇಳಿದು, ಕಡಿಮೆ ಜನಸಂಖ್ಯೆ ಇರುವ ಸಮುದಾಯದಿಂದ ಬಂದಿರುವ ನನ್ನ ವಿರುದ್ದ ಕುತಂತ್ರ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ನಾನು ಚಿತ್ರದುರ್ಗದಿಂದಲೇ ಸ್ಪರ್ಧೆ ಮಾಡುತ್ತೇನೆ, ಚಿತ್ರದುರ್ಗದ ಜನರು ನನ್ನ ಭವಿಷ್ಯ ಬರೆಯುತ್ತಾರೆ, ನಾನು ನನ್ನ ಒಂಬತ್ತು ವರ್ಷದ ಸೇವಾವಧಿಯಲ್ಲಿ ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ, ಯಾರಿಗೂ ಮೋಸ ವಂಚನೆ ಮಾಡಿಲ್ಲ, ನಾನು ಏನು ಕೆಲಸ ಮಾಡಿದ್ದೇನೆ ಎಂಬುದನ್ನು ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿ ನನ್ನನ್ನು ಗಿಲ್ಲಿಸಿದ್ದ ಜನಪ್ರತಿನಿಧಿಗಳನ್ನು ಕೇಳಲಿ, ನಾನು ಪ್ರಾಮಾಣಿಕವಾಗಿ ಅಭಿವೃದ್ದಿ ರಾಜಕೀಯ ಮಾಡುತ್ತೇನೆ ಹೊರತು, ತೀರಾ ಇಷ್ಟು ಕೆಳಮಟ್ಟಕ್ಕೆ ಇಳಿದು ರಾಜಕೀಯ ಮಾಡುವುದಿಲ್ಲ, ನಾನು ತಪ್ಪು ಮಾಡಿದ್ದರೆ ಬಹಿರಂಗವಾಗಿ ಕ್ಷಮೆ ಕೇಳುತ್ತಿದ್ದೆ, ತಪ್ಪೇ ಮಾಡದಿದ್ದಾಗ ಕ್ಷಮೆ ಕೇಳುವ ಅಗತ್ಯವಿಲ್ಲ, ಬದಲಾಗಿ ನನ್ನ ವಿರುದ್ದ ನಕಲಿ ಆಡಿಯೋ ಬಿಟ್ಟಿರುವ ವ್ಯಕ್ತಿ ನನ್ನ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

 

 

ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಮುಖಂಡ ಕೆ.ಆರ್ ಪುನೀತ್ ಸಿಂಗಾಪುರ, ದಲಿತ ಮುಖಂಡ ಕ್ಯಾದಿಗೆರೆ ತಿಪ್ಪೇಸ್ವಾಮಿ, ವಾಲ್ಮೀಕಿ ಸಮುದಾಯದ ಆನಂದ್, ಕಾಂಗ್ರೆಸ್ ಮುಖಂಡರಾದ ಮಹಮದ್ ರೆಹಮಾನ್, ವಸೀಂ ಬಡಾಮಖಾನ್ ಹಾಜರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಎಲ್ಲಾ ಸಮಾಜದ ಹಿತ ಕಾಯಲು ನಾನು ಬದ್ದ: ಶಾಸಕ ರಘುಮೂರ್ತಿ
Next Article ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.