Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಜವಾಬ್ದಾರಿ ಅರಿತಾಗ ಮಣ್ಣಿನ ಋಣ ತೀರಿಸಲು ಸಾಧ್ಯ
ಜಿಲ್ಲಾ ಸುದ್ದಿ

ಜವಾಬ್ದಾರಿ ಅರಿತಾಗ ಮಣ್ಣಿನ ಋಣ ತೀರಿಸಲು ಸಾಧ್ಯ

D KumaraswamyBy D KumaraswamyOctober 9, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ರಾಜಕೀಯ ಜೀವನದಲ್ಲಿ ಜವಾಬ್ದಾರಿ ಅರಿತು ಕೆಲಸ ಮಾಡಿದಾಗ ಮಾತ್ರ ಕ್ಷೇತ್ರದ ಜನರ ಹಾಗೂ ಸಮಾಜದ, ಮಣ್ಣಿನ ಋಣ ತೀರಿಸಲು ಸಾಧ್ಯ ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಹೇಳಿದರು.
ಚಿಕ್ಕಜಾಜೂರಿನಲ್ಲಿ ಮೂರು ಕೋಟಿ ಹನ್ನೊಂದು ಲಕ್ಷ ರೂ.ವೆಚ್ಚದಲ್ಲಿ ಜಲಜೀವನ್ ಯೋಜನೆಯಡಿ ಪ್ರತಿ ಮನೆ ಮನೆಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ರಾಜ್ಯದ ಆರುವರೆ ಕೋಟಿ ಜನಸಂಖ್ಯೆಗೆ 224 ಶಾಸಕರುಗಳಿದ್ದಾರೆ. ಹಾಗಾಗಿ ಜವಾಬ್ದಾರಿಯನ್ನು ತಿಳಿದು ಕೆಲಸ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ, ರಸ್ತೆ, ವಿದ್ಯುತ್ ಸಮಸ್ಯೆಯನ್ನು ನೀಗಿಸಿದ್ದೇನೆ. 28 ವರ್ಷಗಳ ಹಿಂದೆ ಭರಮಸಾಗರ ಕ್ಷೇತ್ರದಿಂದ ಬಾಣದ ಗುರುತಿಗೆ ಸ್ಪರ್ಧಿಸಿ ಗೆದ್ದು ಅಲ್ಲಿಂದ ಇಲ್ಲಿಯತನಕ ರಾಜಕೀಯದಲ್ಲಿ ನಿಮ್ಮ ಸೇವೆ ಮಾಡಿಕೊಂಡು ಬರುತ್ತಿದ್ದೇನೆ. ಆಗ ಭರಮಸಾಗರ, ದಾವಣಗೆರೆ, ಚಿತ್ರದುರ್ಗ ಸೇರಿ 491 ಹಳ್ಳಿಗಳಿದ್ದವು. ಅದರಲ್ಲಿ 386 ಹಳ್ಳಿಗಳಲ್ಲಿ ಮಣ್ಣಿನ ರಸ್ತೆಗಳಿದ್ದವು. ಎಲ್ಲವನ್ನು ಟಾರ್ ರಸ್ತೆಯನ್ನಾಗಿ ಮಾಡಿದ್ದೇನೆ. ಅದರ ಪರಿಣಾಮ ಎರಡನೆ ಬಾರಿಗೆ ನಿಂತಾಗ ಯುವಕರು ನನ್ನನ್ನು ಹೆಗಲ ಮೇಲೆ ಹೊತ್ತು ಕುಣಿಸಿ ಹದಿನೆಂಟುವರೆ ಸಾವಿರ ಮತಗಳ ಅಂತರದಿಂದ ಮತ್ತೆ ಗೆಲ್ಲಿಸಿ ಎರಡನೆ ಬಾರಿಗೆ ಗೆಲ್ಲುವುದಿಲ್ಲ ಎನ್ನುವ ತಪ್ಪು ಕಲ್ಪನೆಯನ್ನು ಸುಳ್ಳಾಗಿಸಿ ರಸ್ತೆ ರಾಜ ಎಂಬ ಬಿರುದು ನೀಡಿದರು ಎನ್ನುವುದನ್ನು ಸ್ಮರಿಸಿಕೊಂಡರು.
ಚಿಕ್ಕಜಾಜೂರಿನಿಂದ ಚಿಕ್ಕಎಮ್ಮಿಗನೂರಿಗೆ 30 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿಗೆ ಪೈಪ್‍ಲೈನ್ ಆಗಿದೆ. ನಬಾರ್ಡ್‍ನಿಂದ 370 ಕೋಟಿ ರೂ.ಮಂಜೂರಾಗಿದೆ. ತೋಟಗಳನ್ನು ಉಳಿಸಿಕೊಳ್ಳಲು ರೈತರು ತಮ್ಮ ಮನೆಯಲ್ಲಿದ್ದ ಬಂಗಾರವನ್ನು ಮಾರಿದರೆ ಇನ್ನು ಕೆಲವರು ಟ್ಯಾಂಕರ್‍ಗಳಿಂದ ನೀರು ತಂದು ತೋಟಗಳನ್ನು ರಕ್ಷಣೆ ಮಾಡಿಕೊಂಡಿದ್ದನ್ನು ನೋಡಿ ಕಳೆದ ನಾಲ್ಕು ವರ್ಷದಲ್ಲಿ 300 ಕ್ಕೂ ಹೆಚ್ಚು ಚೆಕ್‍ಡ್ಯಾಂಗಳನ್ನು ಕಟ್ಟಿಸಿದ್ದರಿಂದ ಎಲ್ಲಾ ಕೆರೆಗಳು ಕೋಡಿ ಬಿದ್ದಿವೆ. ಹಿರಿಯೂರಿನ ವಿ.ವಿ.ಸಾಗರದಿಂದ ಪೈಪ್‍ಲೈನ್ ಬರುತ್ತಿದ್ದು, ಇನ್ನು ಮೂರ್ನಾಲ್ಕು ತಿಂಗಳುಗಳಲ್ಲಿ 493 ಹಳ್ಳಿಗಳಿಗೆ ನೀರು ಪೂರೈಸಲಾಗುವುದು. ಇದಕ್ಕಾಗಿ 370 ಕೋಟಿ ರೂ.ಗಳನ್ನು ನೀಡಿದ್ದು, ಹೆಚ್ಚುವರಿಯಾಗಿ ಮತ್ತೆ ನೂರು ಕೋಟಿ ರೂ.ಗಳನ್ನು ಕೊಡುವುದಾಗಿ ತಿಳಿಸಿದರು.
ಜೋಗ್‍ಫಾಲ್ಸ್‍ನಿಂದ ನೇರವಾಗಿ 270 ಮೆ.ಗಾ.ವ್ಯಾಟ್ ವಿದ್ಯುತ್ ತರಿಸಿಕೊಂಡು ಕರೆಂಟ್ ಸಮಸ್ಯೆಯಿಲ್ಲದಂತೆ ನೋಡಿಕೊಳ್ಳುತ್ತೇನೆ. ಚಿಕ್ಕಜಾಜೂರಿನಿಂದ ಚಿತ್ರಹಳ್ಳಿವರೆಗೆ ರಸ್ತೆಗೆ ಹದಿಮೂರು ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಇಡಿ ಹೊಳಲ್ಕೆರೆ ತಾಲ್ಲೂಕಿನ ಜನರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಆಸ್ಪತ್ರೆ ಕಟ್ಟಿಸಲು ಹತ್ತು ಕೋಟಿ ರೂ.ಗಳನ್ನು ನೀಡಿದ್ದೇನೆ. ಇನ್ನು ಒಂದು ತಿಂಗಳಲ್ಲಿ ಗುದ್ದಲಿ ಪೂಜೆ ನಡೆಯಲಿದೆ. ಅಧಿಕಾರ ಶಾಶ್ವತವಲ್ಲ. ಇರುವತನಕ ಮತದಾರರಿಗೆ ಅನುಕೂಲ ಮಾಡಬೇಕೆಂಬುದು ನನ್ನ ಆಸೆ. ಫುಟ್‍ಪಾತ್‍ನಲ್ಲಿ ವ್ಯಾಪಾರ ಮಾಡಿಕೊಂಡು ಜೀವಿಸುತ್ತಿದ್ದ ಬಡವರಿಗೆ ಕಾಂಪ್ಲೆಕ್ಸ್ ನಿರ್ಮಾಣಕ್ಕಾಗಿ ಒಂದುವರೆ ಕೋಟಿ ರೂ.ಗಳನ್ನು ಕೊಟ್ಟಿದ್ದೇನೆ. ಹಗಲು-ರಾತ್ರಿ ಶ್ರಮ ವಹಿಸಿ ಕ್ಷೇತ್ರದ ಮತದಾರರ ಒಳಿತಿಗೆ ಸಿದ್ದ ಎಂದು ಶಾಸಕ ಎಂ.ಚಂದ್ರಪ್ಪ ಭರವಸೆ ನೀಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರಶ್ಮಿಪ್ರದೀಪ್, ಉಪಾಧ್ಯಕ್ಷ ಪಿ.ಎಸ್.ಮೂರ್ತಿ, ಪುಟ್ಟಣ್ಣ, ರಾಜಣ್ಣ, ಶ್ರೀಕಾಂತ್, ಯೋಗಣ್ಣ, ಗಂಗಣ್ಣ, ಶ್ರೀಮತಿ ವನಜಾಮೀನಾಕ್ಷಿ, ಡಿ.ಸಿ.ಮೋಹನ್, ಗ್ರಾಮ ಪಂಚಾಯಿತಿ ಸದಸ್ಯರುಗಳು ಈ ಸಂದರ್ಭದಲ್ಲಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleನರೇಗಾ ಯೋಜನೆ ಅನೇಕ ಕುಟುಂಬಗಳಿಗೆ ದಾರಿದೀಪವಾಗಿದೆ
Next Article ಭಾರತ್ ಜೋಡೋ ಪಾದಯಾತ್ರೆ: ಸಂಚಾರ ಮಾರ್ಗ ಬದಲಾವಣೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.