ಟಿಕೆಟ್ ಕೊಟ್ಟರೆ ಗೆದ್ದು ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುತ್ತೆನೆ: ಹನುಮಂತಪ್ಪ ಗೋಡೆ ಮನೆ

ಜಿಲ್ಲಾ ಸುದ್ದಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೋಟೆ ನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಗಳಿಸಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.  ಲೋಕಸಭಾ ಮೀಸಲು  ಕ್ಷೇತ್ರವಾಗಿರುವ ಚಿತ್ರದುರ್ಗದಲ್ಲಿ  ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಹನುಮಂತಪ್ಪ ಗೋಡೆ ಮನೆ ಅವರು ಕೂಡ ಟಿಕೆಟ್ ಆಕಾಂಕ್ಷಿತರಾಗಿದ್ದಾರೆ. ಮೊದಲಿಗೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ,  ಪ್ರಧಾನ ಕಾರ್ಯದರ್ಶಿ, ಜಿಲ್ಲಾ  ಎಸ್ಸಿ ಘಟಕದ ಸಂಚಾಲಕ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷ ಮತ್ತು ಭೋವಿ ಅಭಿವೃದ್ದಿ ನಿಗಮದ ನಿರ್ದೇಶಕ ಹಂತ ಹಂತವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಕೊಂಡು ಪಕ್ಷಕ್ಕಾಗಿ‌ ದುಡಿದಿದ್ದಾರೆ. ಇದೀಗ  ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷ ಹಾಗೂ ವೈಯುಕ್ತಿಕವಾಗಿ ಗುರುತಿಸಿಕೊಂಡಿದ್ದು, ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.  ಪುತ್ರ  ವಿನಯ್  ಗೋಡೆಮನೆ ಕೂಡ  ಎನ್ ಎಸ್ ಯು ಐ ನ ಜಿಲ್ಲಾಧ್ಯಕ್ಷರಾಗಿದ್ದರು. ಇದೀಗ  ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಪುತ್ರಿ ಕೂಡ ತಾಲೂಕು ಪಂಚಾಯಿತಿ ಸದಸ್ಯೆಯಾಗಿದ್ದರು. ಹನುಮಂತಪ್ಪ ಗೋಡೆ ಮನೆ ಅವರ ಇಡೀ ಕುಟುಂಬ ಕಾಂಗ್ರೆಸ್ ಪಕ್ಷದ ಸಂಘಟನೆ, ಸೇವೆಯಲ್ಲಿ‌ಗುರುತಿಸಿಕೊಂಡು ಬಂದಿದ್ದು,  ಈ ಬಾರಿ ಹನುಮಂತಪ್ಪ ಗೋಡೆಮನೆಯವರು  ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಪಕ್ಷ ಟಿಕೆಟ್ ನೀಡಿದ್ದೆ ಆದರೆ ಜಿಲ್ಲೆಯ ಸಮಗ್ರ ಅಭಿವೃದ್ದಿ ಮಾಡುವ ಜೊತೆಗೆ ಜಿಲ್ಲೆಯ ಜ್ವಲಂತ  ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ‌ ಕೆಲಸ  ಮಾಡುತ್ತೇನೆ. ಯುವ ಜನತೆಗೆ ಉದ್ಯೋಗ ಸೃಷ್ಠಿಸುವಂತಹ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುದಾನದಲ್ಲಿ ತರಲು ಪ್ರಯತ್ನಿಸುತ್ತೇನೆ ಎಂದು ಹೇಳುತ್ತಾರೆ.

 

 

 

Leave a Reply

Your email address will not be published. Required fields are marked *