ಚಿತ್ರದುರ್ಗ,ಸೆ11:ನಗರದ ಹಿಂದೂ ಮಹಾ ಗಣಪತಿ ಶೋಭಾ ಯಾತ್ರೆ ಮತ್ತು ವಿಸರ್ಜನಾ ಕಾರ್ಯಕ್ರಮ ಇದೇ 13 ರಂದು ನಡೆಯಲಿದೆ. ಶೋಭಾ ಯಾತ್ರೆಯಲ್ಲಿ 4 ಲಕ್ಷ ಜನ ಸೇರುವ ಅಂದಾಜಿದ್ದು, ಈ ವೇಳೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪೂರ್ವಾನುಮತಿ ಇಲ್ಲದೆ ಡ್ರೋಣ್ ಕ್ಯಾಮರಾ ಬಳಕೆ ಮಾಡುವುದನ್ನು ಸಾರ್ವಜನಿಕ ಹಿತದೃಷ್ಠಿಯಿಂದ ನಿಷೇಧಿಸಿದೆ.ಪೂರ್ವಾನುಮತಿ ಇಲ್ಲದೆ ಅನಧಿಕೃತವಾಗಿಬಳಕೆ ಮಾಡಿದರೆ, ಡ್ರೋಣ್ ಕ್ಯಾಮರಾ ಜಪ್ತಿ ಮಾಡಿ, ಅದರ ಮಾಲೀಕರ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.





