Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಪ್ರಸಕ್ತ ವರ್ಷದಿಂದ ಭೂಸಿರಿ ಯೋಜನೆ ಜಾರಿ
ರಾಜಕೀಯ

ಪ್ರಸಕ್ತ ವರ್ಷದಿಂದ ಭೂಸಿರಿ ಯೋಜನೆ ಜಾರಿ

D KumaraswamyBy D KumaraswamyMarch 4, 2023No Comments5 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ರೈತರು, ಮಹಿಳೆಯರು, ಯುವಕ ಯುವತಿಯುರು, ದೀನದಲಿತರು ಸೇರಿದಂತೆ ಎಲ್ಲಾ ವರ್ಗದ ಶ್ರೇಯೋಭಿವೃದ್ಧಿಗಾಗಿ ದೂರದೃಷ್ಟಿ ಯೋಜನೆಗಳನ್ನು ನಮ್ಮ ಸರ್ಕಾರದಲ್ಲಿ ಅವಳವಡಿಸಿಕೊಳ್ಳಲಾಗಿದೆ. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಭೂ ಸಿರಿ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು‌ ಸಿಎಂ ‌ಬಸವರಾಜ ಬೊಮ್ಮಾಯಿ‌ಹೇಳಿದರು.

 

 

ಅವರು ಚಿತ್ರದುರ್ಗದ ವಿಜ್ಞಾನ ಕಾಲೇಜ್ ಆವರಣದಲ್ಲಿ ನಡೆದ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು

ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ ರೂ.10000/- ಗಳನ್ನು ರೈತರ ಖಾತೆ ಜಮೆ ಮಾಡಲಾಗುವುದು. ಬಿತ್ತನೆ ಬೀಜ, ಗೊಬ್ಬರ ಖರೀದಿಗಾಗಿ ರೈತರು ಸಾಲ ಮಾಡದಂತೆ ತಡೆಯುಲು ಯೋಜನೆ ಜಾರಿಗೊಳಿಸಲಾಗುತ್ತಿದೆ.
ಮನೆ ಖರ್ಚು ನಿಭಾಯಿಸಲು ಹೆಣ್ಣು ಮಕ್ಕಳಿಗೆ ಮಾಸಿಕ ರೂ.1000/-, ದುಡಿಯವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್, ಸ್ತ್ರೀ ಸಮಾಥ್ರ್ಯ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ. 5 ಲಕ್ಷ ಅನುದಾನ, ಸ್ವಾಮಿ ವಿವೇಕಾನಂದ ಯೋಜನೆಯಡಿ ಯುವಕರ ಸಂಘಕ್ಕೆ ರೂ.2 ಲಕ್ಷ ಅನುದಾನ ನೀಡಿ, ಸಂಘದ ಉತ್ಪನಗಳಿಗೆ ಮಾರುಕಟ್ಟೆ ಒದಗಿಸಲಾಗುವುದು. ಕಾಯಕ ಯೋಜನೆಯಡಿ ಗುಡಿ ಕೈಗಾರಿಕೆ ಸೇರಿದಂತೆ ಕಮ್ಮಾರಿಕೆ, ಕುಂಬಾರಿಕೆ, ಬಡಗಿ ಹಾಗೂ ಇತರೆ ವಿಶ್ವಕರ್ಮ ಕಾಯಕಗಳನ್ನು ಉನ್ನತಿಕರಿಸಲು ರೂ.50 ಸಾವಿರ ಅನುದಾನ ನೀಡಲಾಗುವುದು.   ಈ ಬಾರಿ ಸರ್ಕಾರಿ ಕಾಲೇಜುಗಳಲ್ಲಿ ಓದುವ ಪಿಯುಸಿ ಹಾಗೂ ಡಿಗ್ರಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಪಿ.ಎಂ. ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 53.43 ಲಕ್ಷ ರೈತ ಕುಟುಂಬಗಳಿಗೆ ಕಳೆದ ನಾಲ್ಕು ವರ್ಷದಲ್ಲಿ 16 ಸಾವಿರ ಕೋಟಿ ಖಾತೆಗೆ ಜಮೆ ಮಾಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 17 ಲಕ್ಷ ಮನೆಗಳ ನಿರ್ಮಾಣಕ್ಕೆ  ಮಂಜೂರಾತಿ ಸಿಕ್ಕದೆ. 2.40 ಲಕ್ಷ ಜನರಿಗೆ ವಿದ್ಯುತ್ ಶಕ್ತಿ ಸಂಪರ್ಕ ಕಲ್ಪಿಸಲಾಗಿದೆ. ರೂ. 6000 ಕೋಟಿ  ವೆಚ್ಚದಲ್ಲಿ ಹೆದ್ದಾರಿ ನಿರ್ಮಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ 10 ಹೆಚ್.ಪಿ. ಪಂಪು ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಲು ರೂ. 8 ಸಾವಿರ ಕೋಟಿ ನಿಗದಿ ಪಡಿಸಲಾಗಿದೆ. ರಾಜ್ಯದಲ್ಲಿ ರೈತ ವಿದ್ಯಾನಿಧಿ ಯೋಜನೆಯಡಿ 11 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆಯ 12373 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಯೋಜನೆ ಲಾಭ ದೊರೆತಿದೆ. ಇನ್ನೂ ಹೆಚ್ಚಿನ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ನೀಡಲು ಅವಕಾಶವಿದೆ.   ಕೃಷಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಅರ್ಜಿ ಪಡೆಯುವುದನ್ನು ಬಿಟ್ಟು, ರೈತರ ಫ್ರೋಟ್ ತಂತ್ರಾಂಶದಲ್ಲಿನ ಡೇಟಾ ಆಧಾರಿಸಿ, ಮಕ್ಕಳನ್ನು ಗುರುತಿಸಿ ಯೋಜನೆ ಜಾರಿ ಮಾಡಬೇಕು. ರೈತ ಕಾರ್ಮಿಕರು, ನೇಕಾರರು, ಮೀನುಗಾರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರದಿಂದ 3 ಲಕ್ಷ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಕುರಿಗಾರರಿಗೆ ಅಮೃತ ಯೋಜನೆಯಡಿ ರೂ. 355 ಕೋಟಿ ನೀಡಲಾಗಿದ್ದು, ಮುಂದಿನ ತಿಂಗಳಿನಿಂದಲೇ 20 ಸಾವಿರ ಕುರಿಗಾಹಿ ಸಂಘಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ನಾಲ್ಕು ಲಕ್ಷ ಕುರಿಗಾರರಿಗೆ ಇದರ ಲಾಭ ದೊರೆಯಲಿದೆ. ಚಿತ್ರದುರ್ಗ ಜಿಲ್ಲೆಯ ಗೊಲ್ಲರಹಟ್ಟಿ, ಕುರುಬರಹಟ್ಟಿ ಹಾಗೂ ಲಂಬಾಣಿ ತಾಂಡಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಿ ಅವರು ವಾಸಿಸುವ ಜಾಗಕ್ಕೆ ಹಕ್ಕು ಪತ್ರ ನೀಡಲಾಗುತ್ತಿದೆ. ಇದೇ ತಿಂಗಳು ದಾವಣಗೆರೆಯಲ್ಲಿ ಜರುಗಲಿರುವ  ಫಲಾನುಭವಿಗಳ ಸಮಾವೇಶದಲ್ಲಿ ಬಂಜಾರ ಸಮುದಾಯದವರೂ ಸೇರಿದಂತೆ ವಿವಿಧ ವರ್ಗದ ಸುಮಾರು 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದರು.
ಕೇಂದ್ರ ಸರ್ಕಾರ ಉಚಿತವಾಗಿ ಕೋವಿಡ್ ಲಸಿಕೆ ನೀಡಿದ್ದರಿಂದ ರಾಜ್ಯ ಕೊವಿಡ್ ಸಂಕಷ್ಟದಿಂದ ಹೊರಬಂದಿದೆ. ಇಂದು ನಾವೆಲ್ಲ ಮಾಸ್ಕ್ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಾಗವಹಿಸುವಂತಾಗಿದೆ. ಉಚಿತ ವ್ಯಾಕ್ಸಿನ್ ನೀಡಿದ್ದರಿಂದ ದೇಶ ಸಧೃಡವಾಗಿದೆ. ಹಿಂದಿನ ಸರ್ಕಾರ ಎಸ್.ಸಿ ಪಟ್ಟಿ ಹಲವಾರು ಜಾತಿಗಳನ್ನು ಸೇರಿಸಿತ್ತು. ಆದರೆ ಮೀಸಲಾತಿ ಹೆಚ್ಚಿಸಿರಲಿಲ್ಲ.  ನಮ್ಮ ಸರ್ಕಾರ ಮೀಸಲಾತಿ ಹೆಚ್ಚಳಕ್ಕೆ ದಿಟ್ಟ ನಿರ್ಧಾರ ಕೈಗೊಂಡಿದೆ. ಎಸ್.ಸಿ ಹಾಗೂ ಎಸ್.ಟಿ ಮೀಸಲಾತಿ ಹೆಚ್ಚಿಸಿ ಆದೇಶ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿದೆ. ನೇಮಕಾತಿ ಹಾಗೂ ಬಡ್ತಿಗಳಲ್ಲಿ ಮೀಸಲಾತಿ ಹೆಚ್ಚಳವನ್ನು ಅನುಷ್ಠಾನಗೊಳಿಸಲಾಗಿದೆ  ಎಂದರು.
ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಅನುಮೋದನೆ :  ಚಿತ್ರದುರ್ಗ ಜಿಲ್ಲೆಯ ಬಹುದಿನಗಳ ಬೇಡಿಕೆಯಾದ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಒಂದು ವಾರದಲ್ಲಿ ಅನುಮೋದನೆ ನೀಡುವುದಾಗಿ ಮುಖ್ಯಮಂತ್ರಿ ಆಶ್ವಾಸನೆ ನೀಡಿದರು. ಶೀಘ್ರದಲ್ಲಿ ಮತ್ತೊಮ್ಮೆ ಚಿತ್ರದುರ್ಗ ನಗರಕ್ಕೆ ಆಗಮಿಸಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಯನ್ನೂ ನೆರವೇರಿಸುವುದಾಗಿ ಹೇಳಿದರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಮಾತನಾಡಿ,  ರಾಜ್ಯದ ಮುಖ್ಯಮಂತ್ರಿಗಳು ದಲಿತರಿಗೆ, ಪರಿಶಿಷ್ಟ ಪಂಗಡಕ್ಕೆ ಅವಶ್ಯಕವಾಗಿರುವ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಪರಿಶಿಷ್ಟ ಜಾತಿಗೆ ಶೇ.15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3 ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸಿ ಪರಿಶಿಷ್ಟ ವರ್ಗದವರ ಹೃದಯ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಭದ್ರಾ ಮೇಲ್ದಂಡೆ ಯೋಜನೆ, ರೈಲ್ವೆ ಯೋಜನೆ, ವೈದ್ಯಕೀಯ ಕಾಲೇಜು ಸೇರಿದಂತೆ ಅನೇಕ ಯೋಜನೆಗಳನ್ನು ಚಿತ್ರದುರ್ಗ ಜಿಲ್ಲೆಗೆ ನೀಡಿದ್ದಾರೆ.  ಡಾ.ಬಾಬು ಜಗಜೀವನ್‍ರಾಂ ಚರ್ಮಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಗೆ ವರ್ಗಾವಣೆ ಮಾಡಿದ ನಂತರ ರಾಜ್ಯ ಸರ್ಕಾರವು ರೂ.480 ಕೋಟಿ ಬಿಡುಗಡೆ ಮಾಡಿದೆ. ಚಿತ್ರದುರ್ಗ ಜಿಲ್ಲೆಗೆ ರೂ.53 ಕೋಟಿ ನೀಡಲಾಗಿದೆ. ಎಲ್ಲ ವರ್ಗದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ತಲುಪಿಸುವುದರ ಜೊತೆಗೆ ಸರ್ಕಾರದ ಯೋಜನೆಗಳನ್ನು ತಿಳಿಸುವ ಕೆಲಸ ಮಾಡಲಾಗುತ್ತಿದೆ.  ರಾಜ್ಯದ ರೈತರು ಸಶಕ್ತವಾಗುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಒಟ್ಟು 10 ಸಾವಿರ ರೂ. ಗಳನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ರೈತರಿಗೆ ಕೊಡಲಾಗುತ್ತಿದೆ. ರೈತರ ಮಕ್ಕಳಿಗೆ ಮುಖ್ಯಮಂತ್ರಿ ರೈತವಿದ್ಯಾನಿಧಿ ಮೂಲಕ ಕಳೆದ ವರ್ಷ ರಾಜ್ಯದಲ್ಲಿ 10 ಲಕ್ಷ ಮಕ್ಕಳಿಗೆ ರೂ.686 ಕೋಟಿ ನೀಡಿದೆ. ರೈತವಿದ್ಯಾನಿಧಿ ಯೋಜನೆಯನ್ನು ಕೃಷಿ ಕಾರ್ಮಿಕರ ಮಕ್ಕಳಿಗೆ ವಿಸ್ತರಣೆ ಮಾಡಿ, 46 ಸಾವಿರ ಮಕ್ಕಳಿಗೆ ರೂ.14 ಕೋಟಿ ನೀಡಿದೆ. ರೈತ ಶಕ್ತಿ ಯೋಜನೆ ಜಾರಿ ಸೇರಿದಂತೆ ರಾಜ್ಯದ ರೈತರ ಕಣ್ಣೀರು ಒರೆಸುವ ಕೆಲಸ ರಾಜ್ಯ ಸರ್ಕಾರ ಮಾಡಿದೆ ಎಂದರು.
ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, 18 ಲಕ್ಷ ಜನಸಂಖ್ಯೆ ಇರುವ ಚಿತ್ರದುರ್ಗ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯದ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 9 ಲಕ್ಷ ಫಲಾನುಭವಿಗಳಾಗಿದ್ದಾರೆ. ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರು ಸೇರಿದಂತೆ ಎಲ್ಲ ವರ್ಗದವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸೌಲಭ್ಯ ನೀಡಿದ್ದಾರೆ ಎಂದರು.
ವಿಶ್ವ ನಾಯಕ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರದ ಪ್ರತಿಯೊಬ್ಬ ಬಡವರಿಗೂ ಅನೇಕ ಸೌಲಭ್ಯಗಳನ್ನು ನೀಡಿದ್ದಾರೆ. ದೇಶದ 83 ಕೋಟಿ  ಜನರಿಗೆ ಉಚಿತವಾಗಿ ಕಳೆದ ಮೂರು ವರ್ಷದಿಂದ ಅನ್ನಭಾಗ್ಯ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ ಮತ್ತು ದೇಶದಲ್ಲಿ ಕೋವಿಡ್ ಸಂದರ್ಭದಲ್ಲಿ ಉಚಿತವಾಗಿ ಲಸಿಕೆ ನೀಡುವ ಮೂಲಕ ದೇಶದ ಕೋಟ್ಯಾಂತರ ಜನರ ಆರೋಗ್ಯ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ನಮ್ಮ ದೇಶದ ವಿದ್ಯಾರ್ಥಿಗಳನ್ನು ಸುರಕ್ಷಿತಗಾಗಿ ತಾಯ್ನಡಿಗೆ ಕರೆ ತರುವ ಮೂಲಕ ದೇಶದ ಹಿರಿಮೆ ಹೆಚ್ಚಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರೀಕ ಸಬಲೀಕರಣ ಸಚಿವ ಆಚಾರ್ ಹಾಲಪ್ಪ ಬಸಪ್ಪ, ಪ್ರವಾಸೋದ್ಯಮ ಸಚಿವ ಆನಂದ್‍ಸಿಂಗ್, ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ಶಾಸಕ ಡಾ. ವೈ.ಎ ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ಸಾರಿಗೆ ನಿಗಮ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಗೂಳಿಹಟ್ಟಿ ಡಿ ಶೇಖರ್, ಲಿಡ್ಕರ್ ಅಧ್ಯಕ್ಷ ಹಾಗೂ ಮಾಯಕೊಂಡ ಶಾಶಕ ಪ್ರೊ. ಲಿಂಗಣ್ಣ, ಶಾಸಕರಾದ ಪೂರ್ಣಿಮಾ ಕೆ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಎಂ ಗೌಡ, ಕೆ.ಎಸ್. ನವೀನ್, ಹೇಮಲತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಿ.ಟಿ ಸುರೇಶ್, ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ,  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್‍ಪ್ರಸಾತ್ ಮನೋಹರ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ,  ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವಾಕರ.ಎಂ.ಎಸ್. ಪೆÇಲೀಸ್ ವರಿμÁ್ಠಧಿಕಾರಿ ಪರುಶುರಾಮ.ಕೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯಗಳು, ಮಂಜೂರಾತಿ ಪತ್ರ, ಉಚಿತ ಲ್ಯಾಪ್‍ಟಾಪ್ ಮುಂತಾದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿತರಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಅಂಗವಾಗಿ ವಿವಿಧ ಸಾಂಸ್ಕøತಿಕ ಕಲಾ ತಂಡಗಳಿಂದ ಶನಿವಾರ ನಗರದಲ್ಲಿ ಭವ್ಯ ಮೆರವಣಿಗೆ ನಡೆಯಿತು.  ನಗರದ ನೀಲಕಂಠೇಶ್ವರ ದೇಗುಲದ ಬಳಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರು ಮೆರವಣಿಗೆಗೆ ಚಾಲನೆ ನೀಡಿದರು.  ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಕಹಳೆ ಸೇರಿದಂತೆ ವಿವಿಧ ಕಲಾತಂಡಗಳಿಂದ ಭವ್ಯ ಮೆರವಣಿಗೆ ನಡೆಯಿತು. ನಗರದ ನೀಲಕಂಠೇಶ್ವರ ದೇಗುಲದಿಂದ ಆರಂಭವಾದ ಮೆರವಣಿಗೆಯು ಗಾಂಧಿವೃತ್ತ, ಪ್ರವಾಸಿ ಮಂದಿರ, ಅಂಬೇಡ್ಕರ್ ವೃತ್ತ, ಮದಕರಿ ನಾಯಕ ವೃತ್ತ ಸೇರಿದಂತೆ ಬಿ.ಡಿ.ರಸ್ತೆಯ ಮೂಲಕ ವೇದಿಕೆ ಕಾರ್ಯಕ್ರಮ ನಡೆಯುವ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದವರೆಗೆ ಸಾಗಿತು.  ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleರೂ.1,484.69 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ
Next Article ಪ್ರತಿಭಟನಾಕಾರರನ್ನು‌ ಬಂಧಿಸಿದ ಪೊಲೀಸರು
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.