ಚಿತ್ರದುರ್ಗ ನಗರ ಮಟ್ಟದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಇಂಡಿಯನ್ ಇಂಟರ್ ನ್ಯಾಷನಲ್ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಮಹಿಳಾ ಥ್ರೋಬಾಲ್‍ನಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೂರು ಕಿ.ಮೀ.ನಡಿಗೆ ಸ್ಪರ್ಧೆಯಲ್ಲಿ ಎರಡು ಮತ್ತು ಮೂರನೆ ಸ್ಥಾನ, ಶಾಟ್‍ಪುಟ್‍ನಲ್ಲಿ ತೃತೀಯ ಸ್ಥಾನ, ಲಾಂಗ್‍ಜಂಪ್‍ನಲ್ಲಿ ಮೂರನೆ ಸ್ಥಾನ ಗಳಿಸಿರುವ ವಿದ್ಯಾರ್ಥಿಗಳಿಗೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಅಭಿನಂದಿಸಿದ್ದಾರೆ.
ಶಾಲೆಯ ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ, ಶಿಕ್ಷಣ ಸಂಯೋಜಕ ಕೊಟ್ರೇಶ್, ಕ್ರೀಡಾ ಸಂಯೋಜಕ ಗೋವಿಂದರಾಜು, ರಾಘವೇಂದ್ರ, ಪ್ರಕಾಶ್, ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





