Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ
ರಾಜ್ಯ

ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

D KumaraswamyBy D KumaraswamyMay 27, 2024Updated:May 27, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ
ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ
ಚಿತ್ರದುರ್ಗ ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು ದುರಸ್ಥಿ ಇದ್ದರೆ ಅದನ್ನು ಕೂಡಲೇ ಸರಿಪಡಿಸಿಕೊಂಡು ಚಾಲನೆಯಲ್ಲಿಟ್ಟಿರಬೇಕು. ಮಹಿಳಾ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದರ ಜೊತೆಗೆ 24*7 ಕಾವಲುಗಾರರನ್ನು ನೇಮಿಸಬೇಕು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈಚೆಗೆ ಜಿಲ್ಲೆಯಲ್ಲಿರುವ ವಸತಿ ನಿಲಯಗಳ ಮೂಲಭೂತ ಸೌಕರ್ಯಗಳು ಹಾಗೂ ವಿದ್ಯಾರ್ಥಿಗಳ , ಶೈಕ್ಷಣಿಕ ಪ್ರಗತಿಯ ಬಗ್ಗೆ ಜಿಲ್ಲಾಮಟ್ಟದ ವಸತಿ ನಿಲಯಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಎಲ್ಲಾ ವಸತಿನಿಲಯಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಂಡು, ವಸತಿ ನಿಲಯದ ವಿದ್ಯಾರ್ಥಿಗಳಿಗೆ ಶುದ್ಧನೀರನ್ನು ಒದಗಿಸಬೇಕು. ವಸತಿ ನಿಲಯಗಳಲ್ಲಿರುವ ಶೌಚಾಲಯವು ಶುಚಿತ್ವದಿಂದ ಕೂಡಿರಬೇಕು ಎಂದು ಸೂಚನೆ ನೀಡಿದರು.
ಆಹಾರದ ಮೆನು ಪ್ರಕಾರ ತಾಜಾ ತರಕಾರಿಗಳನ್ನು ಹಾಕಿ, ಉತ್ತಮ ಗುಣಮಟ್ಟದ ಆಹಾರವನ್ನು ಶುಚಿ ಮತ್ತು ರುಚಿಯಾಗಿ ಸಿದ್ದಪಡಿಸಿ ಕೊಡಬೇಕು. ಆಹಾರ ತಯಾರಿಸುವಾಗ ಅಡುಗೆ ಮಾಡುವವರು ಸುರಕ್ಷಿತ ಉಡುಪುಗಳನ್ನು ಧರಿಸಿ ಆಹಾರ ತಯಾರಿಸಬೇಕು. ಶುಚಿ ಸಂಭ್ರಮದ ಬಗ್ಗೆ ವಾರ್ಡ್‍ನ್‍ಗಳು ಖಾತ್ರಿ ಪಡಿಸಿಕೊಳ್ಳಬೇಕು. ದೂರು ಪೆಟ್ಟಿಗೆ ಹಾಗೂ ದೂರು ರಿಜಿಸ್ಟರ್‍ಗಳನ್ನು ವಸತಿ  ನಿಲಯಗಳಲ್ಲಿ ಕಡ್ಡಾಯವಾಗಿ ಇಟ್ಟಿರಬೇಕು ಹಾಗೂ ಅವುಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸೂಚಿಸಿದರು.
ಊಟದ ಸಮಯದಲ್ಲಿ ವಸತಿ ನಿಲಯದ ಮೇಲ್ವಿಚಾರಕರು ಕಡ್ಡಾಯವಾಗಿ ಹಾಜರಿದ್ದು, ಮೇಲ್ವಿಚಾರಣೆ ಮಾಡಬೇಕು. ಪ್ರೌಢ ಮತ್ತು ಪದವಿಪೂರ್ವ ಶಾಲೆ ಮತ್ತು ಕಾಲೇಜುಗಳಿಗೆ ವಾರ್ಡ್‍ನ್‍ಗಳು ಭೇಟಿ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪಡೆದುಕೊಂಡು ಪೋಷಕರ ಸಭೆಗಳನ್ನು ಕಾಲಕಾಲಕ್ಕೆ ಕರೆದು ಪ್ರಗತಿ ವರದಿಯನ್ನು ನೀಡಬೇಕು. ಮೂಲಭೂತ ಸೌಕರ್ಯಗಳ ಬಗ್ಗೆ ಮೇಲ್ವಿಚಾರಕರು ಹೆಚ್ಚಿನ ಗಮನವಿರುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳ ಕುಂದು-ಕೊರತೆಗಳ ಸಭೆ ಮಾಡಬೇಕು ಎಂದು ತಾಕೀತು ಮಾಡಿದರು.
ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ, ವಸತಿ ನಿಲಯಗಳ ಮತ್ತು ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಿ ವರದಿ ನೀಡಬೇಕು. ವಸತಿ ನಿಲಯಗಳನ್ನು ಉತ್ತಮವಾಗಿ, ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಂಬಂಧಿಸಿದ ಜಿಲ್ಲಾಮಟ್ಟದ ಅಧಿಕಾರಿಗಳು ಈ ವಸತಿ ನಿಲಯಗಳು ಜಿಲ್ಲೆಯಲ್ಲಿ ಮಾದರಿಯಾಗಲು ಶ್ರಮಪಟ್ಟು ಕೆಲಸ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯ್ಕ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಾಂತರಾಜ್ ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಸರ್ಕಾರ ಶಿಕ್ಷಕರ ಸರ್ವಾನುಮತದ ಅಭಿವೃದ್ದಿಗೆ ಕಂಕಣ ಬದ್ದವಾಗಿದೆ: ಹೆಚ್ ಆಂಜನೇಯ
Next Article ಜೂನ್ 4 ರ ಬೆಳಗ್ಗೆ ಮತ ಎಣಿಕೆ ಸಿಬ್ಬಂದಿ ಗುರುತಿನ ಪತ್ರ ಆದೇಶ ಪ್ರತಿಯೊಂದಿಗೆ ಹಾಜರಾಗಬೇಕು
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.