ಶಾಸಕ ಚಂದ್ರಪ್ಪ ಉಚ್ಛಾಟನೆ ಮಾಡಿ ಎಂದೇಳುವ ನೈತಿಕತೆ ಜಯಸಿಂಹ ಖಾಟ್ರೋತ್ ಟೀಂಗಿಲ್ಲ

ರಾಜ್ಯ

  1.  
  2.  

ಚಿತ್ರದುರ್ಗ : ಅಭಿವೃದ್ದಿಯ ಹರಿಕಾರ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಹೇಳುವುದಕ್ಕೆ ಜಯಸಿಂಹ ಖಾಟ್ರೋತ್ ಹಾಗೂ ಅವರ ಗುಂಪಿಗೆ ನೈತಿತಕೆಯಿಲ್ಲ. ಗುಂಪುಗಾರಿಕೆ ಬಿಟ್ಟು ತೆಪ್ಪಗಿದ್ದರೆ ಸರಿ ಕಾರ್ಯಕರ್ತರು ರೊಚ್ಚಿಗೆದ್ದರೆ ಉಳಿಗಾಲವಿಲ್ಲವೆಂದು ಹೊಳಲ್ಕೆರೆ ಬಿಜೆಪಿ.ಮಂಡಲ ಅಧ್ಯಕ್ಷ ಬಿ.ಎಂ.ಸಿದ್ದೇಶ್ ಎಚ್ಚರಿಸಿದರು.
ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಎಂ.ಚಂದ್ರಪ್ಪನವರಿಂದ ಭ್ರಷ್ಠಾಚಾರವಾಗಿದೆ ಎಂದು ಖಾಟ್ರೋತ್ ಅಪ ಪ್ರಚಾರದಲ್ಲಿ ತೊಡಗಿರುವುದರಲ್ಲಿ ಅರ್ಥವಿಲ್ಲ. 2018 ಎಲ್ಲಿ ಎಂ.ಚಂದ್ರಪ್ಪನವರಿಗೆ ಟಿಕೇಟ್ ಕೊಟ್ಟಾಗ ಹನುಮಕ್ಕನನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ ಬೀದಿಗೆ ತಂದರು. 2023 ರಲ್ಲಿಯೂ ಎಂ.ಚಂದ್ರಪ್ಪನವರ ವಿರುದ್ದ ಡಾ.ಜಯಸಿಂಹರನ್ನು ಹುಡುಕಿ ವಿಧಾನಸಭೆ ಚುನಾವಣೆಗೆ ನಿಲ್ಲಿಸಿ ಬೀದಿಗೆ ತಂದರು. ಮೂಲ ಬಿಜೆಪಿ ಎಂದು ಹೇಳಿಕೊಳ್ಳುವ ಯೋಗ್ಯತೆ ಖಾಟ್ರೋತ್‍ಗೆ ಇಲ್ಲ. ನಾಲ್ಕು ವಿಧಾನಸಭೆ ಚುನಾವಣೆಯಲ್ಲಿಯೂ ಎಂ.ಚಂದ್ರಪ್ಪನವರ ವಿರುದ್ದ ಪಿತೂರಿ ನಡೆಸಿದ ಖಾಟ್ರೋತ್ ಯಾವ ಪಕ್ಷದಲ್ಲಿದ್ದಾರೆನ್ನುವುದೇ ಗೊತ್ತಿಲ್ಲ. ಜೈಲಿಗೆ ಹೋಗಿ ಬಂದು ರೌಡಿ ಶೀಟರ್ ಎನಿಸಿಕೊಂಡಿರುವ ಈತನಿಗೆ ನಮ್ಮ ಶಾಸಕರನ್ನು ಅವಹೇಳನವಾಗಿ ಮಾತನಾಡಿದರೆ, ನಾವುಗಳು ಸಹಿಸುವುದಿಲ್ಲ ತಕ್ಕ ಪಾಠ ಕಲಿಸಬೇಕಾಗುತ್ತದೆಂದರು.
ಡಾ.ಎಂ.ಚಂದ್ರಪ್ಪನವರು ಮೊದಲಿನಿಂದಲೂ ಬಿ.ಎಸ್.ಯಡಿಯೂರಪ್ಪನವರ ಪರವಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರ ಪುತ್ರ ಎಂ.ಸಿ.ರಘುಚಂದನ್‍ಗೆ ಬಿಜೆಪಿಯಿಂದ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡಿದ್ದು, ನಿಜ. ಯಾರಿಗಾದರೂ ಮನಸ್ತಾಪವಿರುತ್ತದೆ. ಈಗ ಎಲ್ಲವೂ ಸರಿ ಹೋಗಿದೆ, ಹೊಳಲ್ಕೆರೆ ಕ್ಷೇತ್ರದಲ್ಲಿ ಕೆರೆ ಕಟ್ಟೆ, ಚೆಕ್‍ಡ್ಯಾಂ, ಶಾಲಾ-ಕಾಲೇಜು, ಉತ್ತಮ ಗುಣಮಟ್ಟದ ರಸ್ತೆ, ಹೈಟೆಕ್ ಆಸ್ಪತ್ರೆಗಳಾಗಿದೆ. ಇಂತಹ ಕೆಲಸ ಆಗಿಲ್ಲವೆಂದು ಯಾರು ಟೀಕಿಸುವಂತಿಲ್ಲ. ಜಯಸಿಂಹ ಖಾಟ್ರೋತ್ ಪಕ್ಷೇತರರಿಂದ ಹಿಡಿದು ಎಲ್ಲಾ ಪಕ್ಷ ಸುತ್ತಾಡಿದ್ದಾರೆಂದು ಬಿ.ಎಂ.ಸಿದ್ದೇಶ್ ಎದುರಾಳಿಗಳ ಟೀಕೆಗೆ ತಿರುಗೇಟು ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಆರ್.ಅಶೋಕ್, ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಸದಸ್ಯ ಶಿವು, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಅಂಕಳಪ್ಪ, ಪ್ರವೀಣ್, ಶಂಕರ್‍ನಾಯ್ಕ, ರುದ್ರೇಶ್, ಭದ್ರಾನಾಯ್ಕ, ಬಿಜೆಪಿ. ಹಿಂದುಳಿದ ವರ್ಗಗಳ ಅಧ್ಯಕ್ಷ ಗಿರೀಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಯಾನಾಯ್ಕ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

 

Leave a Reply

Your email address will not be published. Required fields are marked *