Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕವಾಡಿಗರ ಹಟ್ಟಿ ಪ್ರಕರಣ ಮರು ತನಿಖೆಯಾಗಲಿ: ಚೇತನ್ ಅಹಿಂಸಾ
ರಾಜ್ಯ

ಕವಾಡಿಗರ ಹಟ್ಟಿ ಪ್ರಕರಣ ಮರು ತನಿಖೆಯಾಗಲಿ: ಚೇತನ್ ಅಹಿಂಸಾ

D KumaraswamyBy D KumaraswamyAugust 6, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕಲುಷಿತ ನೀರು ಸೇವನೆ ಪ್ರಕರಣವನ್ನು ಮರು ತನಿಖೆ ಮಾಡಬೇಕು ಶೀಘ್ರವಾಗಿ ನ್ಯಾಯ ದೊರಕಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗು ಚಿತ್ರ ನಟ ಚೇತನ್ ಅಹಿಂಸ ಒತ್ತಾಯಿಸಿದ್ದಾರೆ. ಅವರು ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಅಸ್ವಸ್ಥ ಹಾಗೂ ಮೃತರ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ದುರ್ಘಟನೆ ಕಲುಷಿತ ನೀರಿನಿಂದ ಆಗಿದೆ ಎಂದು ಹೇಳುತ್ತಾರೆ.ದಲಿತರನ್ನು ಗುರಿಯಾಗಿಸಿಕೊಂಡು ಮಾಡಲಾಗಿದೆ ಎನ್ನುತ್ತಿದ್ದಾರೆ. ಸತ್ಯ ಹೊರ ಬರಬೇಕಾದರೆ ಪಾರದರ್ಶಕವಾಗಿ ತನಿಖೆಯಾಗಬೇಕು, ಕೇವಲ ಪರಿಹಾರ ನೀಡಿದ ಕೂಡಲೇ ಎಲ್ಲವು ಸರಿ ಹೋಗುವುದಿಲ್ಲ, ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕುಡಿಯುವ ನೀರು ಸಂವಿಧಾನದ ಆರ್ಟಿಕಲ್ 21 ರಂತೆ ಮಾನವನ ಹಕ್ಕಾಗಿದೆ. ಕುಡಿಯುವ ನೀರಿಗಾಗಿ ಅಂಬೇಡ್ಕರ್ ಹೋರಾಟ ಮಾಡಿದ್ದಾರೆ. ಶುದ್ಧ ಕುಡಿಯುವ ನೀರನ್ನು ಕೊಡಬೇಕಿದೆ. ಜಿಲ್ಲಾಡಳಿತ ದಲಿತರನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಎಸ್ ಇ ಪಿ ಟಿಎಸ್ ಪಿ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸ್ಕೀಂಗಳಿಗೆ ಬಳಸಿಕೊಳ್ಳುತ್ತಿರುವುದು ದುರಂತ. ಚಿತ್ರದುರ್ಗದಲ್ಲಿ ನೂರಾರು ಶೋಷಿತರು ಮಾತ್ತ ಬಲಿಯಾಗುತ್ತಿದ್ದಾರೆ.ದಲಿತರು ಮತ, ಪ್ರಚಾರಕ್ಕೆ ಮಾತ್ರ ಬೇಕು,ಇಲ್ಲಿ ಸಾಯುವವರು ಮಾತ್ರ ದಲಿತರೇ ಎಂದರು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಘಟನೆ ಸದಾಶಿವ ನಗರ ಡಾಲರ್ಸ್ ಕಾಲೋನಿಯಲ್ಲಿ ನಡೆದಿದ್ದರೆ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುತ್ತಿತ್ತು. ಸರ್ಕಾರ ಇದನ್ನು ಪಾರದರ್ಶಕವಾಗಿ ಮತ್ತು ಮರು ತನಿಖೆಗೆ ಆದೇಶ ಮಾಡಬೇಕು. ಮರು ತನಿಖೆ ಮಾಡುವುದು ತಪ್ಪಲ್ಲ,ಈ ಕೇರಿಯಲ್ಲಿ ಮಾತ್ರ ಘಟನೆ ನಡೆದಿದೆ. ಈ ಪ್ರಕರಣ ತುಂಬಾ ನಿಗೂಢವಾಗಿದೆ ಎಂದು ಹೇಳಿದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್ ಅಮಾನತ್ತು ಮಾಡಿ ಆದೇಶಿಸಿದ ಆರೋಗ್ಯ ಸಚಿವರು
Next Article ಹೊಳಲ್ಕೆರೆ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಗ್ರಾಪಂ ನೌಕರ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.